ಬೆಂಗಳೂರು: ನನ್ನ ನಂಬಿ ಬಂದವರು ಅತಂತ್ರ ಆಗಬಾರದು. ಅವರಿಗೆ ನೆಲೆಕೊಡಿಸಲು ಕಾಂಗ್ರೆಸ್ (Congress) ಸೇರ್ಪಡೆಯಾಗುತ್ತಿದ್ದೇನೆ ಎಂದು ಜೆಡಿಎಸ್ (JDS) ಮಾಜಿ ಶಾಸಕ ವೈಎಸ್‌ವಿ ದತ್ತ (YSV Datta) ಹೇಳಿದರು.
ಕಾಂಗ್ರೆಸ್ ಸೇರ್ಪಡೆ ಕುರಿತು ಮಾತನಾಡಿರುವ ಅವರು, ನಾನ್ನ ಮತ್ತು ದೇವೇಗೌಡರ (H.D.Devegowda) ರಾಜಕೀಯ 50 ವರ್ಷ ಸುದೀರ್ಘವಾದುದ್ದು. ದೇವೇಗೌಡರ ಜೊತೆ ನಾನು 20 ವರ್ಷಗಳಿಂದ ಇದ್ದೇನೆ. ನನಗೂ ಅವರಿಗೆ ತಂದೆ ಮಗನ ಸಂಬಂಧ. ನಾನು ದೇವೇಗೌಡರು ಇರುವವರೆಗೂ ಅವರ ಜೊತೆ ಇರುತ್ತೇನೆ ಎಂದು ಹೇಳಿದ್ದೆ. ಆದರೆ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಒತ್ತಾಯಿಸಿದ್ದಾರೆ. ನಾನು ದೇವೇಗೌಡರಿಗೆ ಈ ವಿಚಾರ ಹೇಳಲು ಹೋಗಿ ವಾಪಸ್ ಬಂದಿದ್ದೇನೆ. ನಮ್ಮ ಕ್ಷೇತ್ರದ ಕೋಮುವಾದಿಗಳ ಜೊತೆ ಸೆಣಸಬೇಕು ಅಂದ್ರೆ ಕಾಂಗ್ರೆಸ್ ಸೇರಬೇಕು ಎಂಬುದು ನಮ್ಮ ಕಾರ್ಯಕರ್ತರು ಮತ್ತು ಕ್ಷೇತ್ರದ ಜನರ ಒತ್ತಾಯವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಯಲ್ಲಿ RBI ಮಾಜಿ ಗವರ್ನರ್ ಭಾಗಿ
ಪ್ರಜ್ವಲ್ ಎಂಪಿಗೆ ಸ್ವರ್ಧೆ ಮಾಡಿದಾಗಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಇದ್ರೂ ಕೂಡ ಬಿಜೆಪಿಗೆ ಹೆಚ್ಚು ವೋಟ್ ಬಂದಿದೆ. ಜನರು ಕೋಮುವಾದಿ ಶಕ್ತಿ ಮಣಿಸಲು ಕಾಂಗ್ರೆಸ್ ಸೇರ್ಪಡೆಯಾಗಬೇಕು ಎಂದು ಹೇಳಿದ್ದಾರೆ. ಕ್ಷೇತ್ರದ ಒಳಗಡೆ ಕೊನೆ ಹೋರಾಟ ಆಗಿದೆ. ನಾನು ಕ್ಷೇತ್ರ ಪೂರ್ತಿ ಸಂಚಾರ ಮಾಡುತ್ತಿದ್ದೇನೆ. ಅಲ್ಲಿನ ಜನರು ಕಾಂಗ್ರೆಸ್ ಸೇರ್ಪಡೆಯಾಗಿ ಎಂದು ಹೇಳುತ್ತಿದ್ದಾರೆ. ಪಕ್ಷತೀತವಾಗಿ ನನಗೆ ಕಾರ್ಯಕರ್ತರು ಇದ್ದಾರೆ. ಜನರು ಮತ್ತು ಕಾರ್ಯಕರ್ತರ ಒತ್ತಾಯ ಮೇಲೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.
ತಂದೆ ಸಮಾನರಾದ ದೇವೇಗೌಡರಿಗೆ ಈ ವಿಚಾರ ಹೇಳದೆ ಒದ್ದಾಡುತ್ತಿದ್ದೇನೆ. ನಾನು ಯಾವುದೇ ಷರತ್ತು ಹಾಕದೆ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದೇನೆ. ನಾನು ಹತ್ತಾರು ಭಾರೀ ಈ ವಿಚಾರ ಹೇಳಲು ದೇವೇಗೌಡರನ್ನು ಭೇಟಿಯಾಗಿದ್ದೆ, ಆದ್ರೆ ಅದು ಸಾಧ್ಯವಾಗಿಲ್ಲ. ನನ್ನ ಎಂಎಲ್‌ಸಿ ಮಾಡಿದ್ದು ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು. ಅವರ ಋಣ ನನ್ನ ಮೇಲೆ ಇದೆ. ಅದಕ್ಕಾಗಿ ನಾನು ತಳಮಟ್ಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ. ಜೆಡಿಎಸ್‌ನಿಂದ ಶಾಸಕ ಆಗುವವರೆಗೂ ಪಕ್ಷ ಕಟ್ಟಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಮಹಾ-ಕರ್ನಾಟಕ ಗಡಿ ವಿವಾದ; ಇಂದು ಮುಖಾಮುಖಿಯಾಗ್ತಾರೆ ಎರಡೂ ರಾಜ್ಯಗಳ ಸಿಎಂ
ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿ, ನಾನು ಖರ್ಗೆಯವರನ್ನು ಭೇಟಿಯಾಗಿಲ್ಲ. ಸಿದ್ದರಾಮಯ್ಯ ಅವರನ್ನು ಹಲವು ಭಾರಿ ಭೇಟಿಯಾಗಿದ್ದೇನೆ. ಬೇರೆ ಬೇರೆ ಸಂದರ್ಭದಲ್ಲಿ ಸಿದ್ದರಾಮಯ್ಯರೊಂದಿಗೆ ಒಂದೇ ವೇದಿಕೆ ಹಂಚಿಕೊಂಡಿದ್ದೇನೆ. ಅಲ್ಲಿ ನನ್ನ ಕ್ಷೇತ್ರದ ಬಗ್ಗೆ ಮಾತನಾಡಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರನ್ನು ಕೂಡ ಭೇಟಿಯಾಗಿದ್ದೇನೆ. ಅವರಿಗೂ ಕ್ಷೇತ್ರದ ಬಗ್ಗೆ ತಿಳಿಸಿದ್ದೇನೆ. ಸೇರ್ಪಡೆ ಬಗ್ಗೆ ದಿನಾಂಕ ನಿಗದಿಯಾಗಿಲ್ಲ. ಸೇರ್ಪಡೆ ವಿಚಾರ ಚಾಲು ಆಗಿದೆ ಅಷ್ಟೇ ಎಂದು ಮಾತನಾಡಿದರು.