ತುಮಕೂರು: ನಾನು ಡಿ.ಕೆ.ಶಿವಕುಮಾರ್ (DK Shivakumar) ಅವರ ಸಂಪುಟದಲ್ಲಿ (Cabinet)ಮಂತ್ರಿ ಆಗಲು ಇಷ್ಟ ಪಡೋದಿಲ್ಲ ಎಂದು ಮಾಜಿ ಸಚಿವ ಕೆ ಎನ್ ರಾಜಣ್ಣ (KN Rajanna) ಪ್ರತಿಕ್ರಿಯಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದವರು ನಿಮಗೆ ಮತ್ತೇ ಮಂತ್ರಿಗಿರಿ ಕೊಡಬೇಕು ಎಂದು ನಿಮ್ಮ ಬೆಂಬಲಿಗ ಶಾಸಕರು ಒತ್ತಾಯಿಸುತ್ತಿದ್ದಾರಲ್ಲ ಎಂದು ಕೇಳಿದಾಗ, ನಾನು ಯಾವುದೇ ಕಾರಣಕ್ಕೂ ಡಿಕೆ ಶಿವಕುಮಾರ್ ಅವರ ಸಂಪುಟದಲ್ಲಿ ಮಂತ್ರಿಯಾಗಿರಲು ಇಷ್ಟ ಪಡೋದಿಲ್ಲ, ಬೇರೆಯವರಿಗೆ ಅವಕಾಶ ಮಾಡಿಕೊಡಲಿ ಎಂದು ಹೇಳಿದ್ದಾರೆ. ಅಲ್ಲದೇ ಅವರೇನು ಸಿಎಂ ಆಗಿಯೇ ಬಿಡುತ್ತಾರೆ ಅಂದುಕೊಂಡಿದ್ದೀರಾ ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ರಾಷ್ಟ್ರ ಭಾರತ: ಪ್ರಹ್ಲಾದ್ ಜೋಶಿ
ನಾನು ಯಾವತ್ತೂ ಅಧಿಕಾರದ ಹಿಂದೆ ಹೋದವನಲ್ಲ, ನನಗೆ ಮತ್ತೇ ಸಚಿವ ಸ್ಥಾನ ಕೊಡುವಂತೆ ಆಗ್ರಹಿಸುತ್ತಿರುವ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು. ಇದನ್ನೂ ಓದಿ: ಯಮರಾಜ ನಿಮಗಾಗಿ ಕಾಯುತ್ತಿದ್ದಾನೆ: ಕ್ರಿಮಿನಲ್‌ಗಳ ಎನ್‌ಕೌಂಟರ್ ಬಗ್ಗೆ ಯೋಗಿ ಆದಿತ್ಯನಾಥ್ ಮಾತು

