ಚಿಕ್ಕಬಳ್ಳಾಪುರ: ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಕಾಂಗ್ರೆಸ್ ಶಾಸಕ (Congress) ಪ್ರದೀಪ್ ಈಶ್ವರ್ (Pradeep Eshwar) ಹೇಳಿದ್ದಾರೆ.
ಪ್ರದೀಪ್ ಈಶ್ವರ್ ರಾಜೀನಾಮೆ ನೀಡಬೇಕೆಂಬ ಬಿಜೆಪಿ (BJP) ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜೀನಾಮೆಗೆ ಆಗ್ರಹ ಮಾಡಿದ ವಿರೋಧ ಪಕ್ಷದವರಿಗೆ ಧನ್ಯವಾದ. ಸುಧಾಕರ್ (Sudhakar) ಅವರು ನನ್ನ ಸವಾಲು ಸ್ವೀಕಾರ ಮಾಡಿರಲಿಲ್ಲ. ನನ್ನ ಸವಾಲು ಸ್ವೀಕರಿಸುತ್ತಿದ್ದರೆ ನಾನು ರಾಜೀನಾಮೆ ನೀಡುತ್ತಿದ್ದೆ ಎಂದು ಹೇಳಿದರು.
Advertisement
ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಚಿಕ್ಕಬಳ್ಳಾಪುರ (Chikkaballapura) ಲೋಕಸಭಾ ಕ್ಷೇತ್ರದಲ್ಲಿ ಹಣದ ಹೊಳೆ ಹರಿದಿದೆ. ಬಿಜೆಪಿಯವರು ನಾನು ರಾಜೀನಾಮೆ ಕೊಡಬಹುದು ಅಂತ ಕಾಯ್ತಿದ್ದಾರೆ. ನಾನು ರಾಜೀನಾಮೆ ಕೊಟ್ರೆ ನೆಮ್ಮದಿಯಾಗಿ ಇರಬಹುದು ಅಂದುಕೊಂಡಿದ್ದಾರೆ. ಆದರೆ ಅವರಿಗೆ ನಾನು ಆ ನೆಮ್ಮದಿ ಕೊಡಲ್ಲ ಎಂದು ಪ್ರದೀಪ್ ಈಶ್ವರ್ ತಿಳಿಸಿದರು. ಇದನ್ನೂ ಓದಿ: ರಿಯಾಸಿ ಬಸ್ ಮೇಲೆ ದಾಳಿ – 50 ಸ್ಥಳೀಯರನ್ನು ವಶಕ್ಕೆ ಪಡೆದ ಪೊಲೀಸರು
Advertisement
Advertisement
ಪ್ರದೀಪ್ ಈಶ್ವರ್ ಹೇಳಿದ್ದೇನು?
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಡಾ. ಕೆ ಸುಧಾಕರ್ ಒಂದು ಮತ ಹೆಚ್ಚಿಗೆ ಲೀಡ್ ಪಡೆದರೆ ನಾನು ರಾಜೀನಾಮೆ (Resign) ನೀಡುತ್ತೇನೆಂದು ಪ್ರದೀಪ್ ಈಶ್ವರ್ ಹೇಳಿಕೆ ಕೊಟ್ಟಿದ್ದರು.
Advertisement
ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ಕೆ ಸುಧಾಕರ್ 20,941 ಮತಗಳ ಮುನ್ನಡೆ ಸಿಕ್ಕಿತ್ತು. ಸುಧಾಕರ್ ಜಯಗಳಿಸಿದ ಬೆನ್ನಲ್ಲೇ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಪ್ರದೀಪ್ ಈಶ್ವರ್ ರಾಜೀನಾಮೆ ನೀಡಬೇಕೆಂಬ ಆಗ್ರಹ ಕೇಳಿ ಬಂದಿತ್ತು. ಇದನ್ನೂ ಓದಿ: G7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿ ತಲುಪಿದ ಪ್ರಧಾನಿ ಮೋದಿ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸುಧಾಕರ್ ಅವರು 1,63,460 ಮತಗಳ ಅಂತರದಿಂದ ಜಯಗಳಿಸಿದ್ದರು. ಸುಧಾಕರ್ ಅವರಿಗೆ 8,22,619 ಮತಗಳು ಬಂದರೆ ರಕ್ಷಾ ರಾಮಯ್ಯ ಅವರಿಗೆ 6,59,159 ಮತಗಳು ಬಿದ್ದಿದ್ದವು.