ಸದ್ಯಕ್ಕೆ ನಾನು ಬಿಜೆಪಿಗೆ ಮರಳುವುದಿಲ್ಲ: ಈಶ್ವರಪ್ಪ

Public TV
1 Min Read
KS Eshwarappa 1

– ನನ್ನ, ಯಡಿಯೂರಪ್ಪ ಸ್ನೇಹ ಮುಂದುವರಿಯುತ್ತಿದೆ ಎಂದ ಮಾಜಿ ಸಚಿವ

ಬೆಂಗಳೂರು: ನಾನು ಸದ್ಯಕ್ಕೆ ಬಿಜೆಪಿಗೆ (BJP) ಮರಳುವುದಿಲ್ಲ, ಮೊದಲು ಬಿಜೆಪಿಯಲ್ಲಿನ ಪರಿಸ್ಥಿತಿ ಸರಿ ಹೋಗಬೇಕು ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ (KS Eshwarappa) ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ನಾನು ಬಿಜೆಪಿಗೆ ಮರಳುವ ಪರಿಸ್ಥಿತಿಯಲ್ಲಿಲ್ಲ. ಮೊದಲು ಬಿಜೆಪಿ ಪರಿಸ್ಥಿತಿ ಸರಿಯಾಗಬೇಕು. ವಿಜಯೇಂದ್ರ (BY Vijayendra) ಆಹ್ವಾನ ಕೊಟ್ಟಿರುವ ಬಗ್ಗೆ ಗೊತ್ತಿಲ್ಲ. ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ಕೊಡಲ್ಲ ಎಂದರು. ಇದನ್ನೂ ಓದಿ: 2025 ವಿಶ್ವ ಪ್ಯಾರಾ ಅಥ್ಲೆಟಿಕ್ಸ್‌ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ಕಂಗನಾ ರಣಾವತ್‌ ನೇಮಕ

ಇನ್ನು, ನನ್ನ ಯಡಿಯೂರಪ್ಪ ಸ್ನೇಹ ಬಹಳ ಹಳೆಯದು, ಇವತ್ತಿನದಲ್ಲ. ನಾವಿಬ್ಬರೂ ಪಾರ್ಟ್‌ನರ್‌ಶಿಪ್‌ನಲ್ಲಿ ಹಿಂದೆ ಫ್ಯಾಕ್ಟರಿ ಮಾಡಿದ್ದೆವು. ನಮ್ಮಿಬ್ಬರ ಮಧ್ಯೆ ಸ್ನೇಹ ಮುಂದುವರೀತಿದೆ. ರಾಜಕಾರಣಕ್ಕೂ ಸ್ನೇಹಕ್ಕೂ ಸಂಬಂಧ ಇಲ್ಲ. ನನ್ನ ಹುಟ್ಟುಹಬ್ಬಕ್ಕೆ ಪತ್ರಿಕೆಯಲ್ಲೂ ಅವರು ಶುಭಾಶಯ ಕೋರಿಕೆ ಹಾಕಿಸಿದ್ದರು. ನಮ್ಮ ಮನೆಯ ಕಾರ್ಯಕ್ರಮಗಳಿಗೆ ಅವರು ಬಂದಿದ್ದಾರೆ. ಅವರ ಮನೆ ಕಾರ್ಯಕ್ರಮಗಳಿಗೆ ನಾವು ಹೋಗಿದ್ದೇವೆ. ಸ್ನೇಹ ಬೇರೆ ರಾಜಕಾರಣ ಬೇರೆ ಎಂದು ತಿಳಿಸಿದರು. ಇದನ್ನೂ ಓದಿ: ಅಕ್ರಮ ಗಣಿಗಾರಿಕೆ ತನಿಖೆ ಏನಾಯ್ತು – ಪಾದಯಾತ್ರೆ ನೆನಪಿಸಿ ಸಿಎಂಗೆ ಪತ್ರ ಬರೆದ ಹೆಚ್.ಕೆ ಪಾಟೀಲ್

Share This Article