ನವದೆಹಲಿ: ಎರಡು ಮಕ್ಕಳನ್ನು ಮಾತ್ರ ಹೊಂದುವ ನೀತಿಯನ್ನು ಕಡ್ಡಾಯಗೊಳಿಸುವ ಯಾವುದೇ ಕಾನೂನನ್ನು ನಾನು ಬೆಂಬಲಿಸುವುದಿಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಈಚೆಗೆ ವಿಶ್ವಸಂಸ್ಥೆ ಬಿಡುಗಡೆ ಮಾಡಿದ ಜನಸಂಖ್ಯಾ ವರದಿ ಕುರಿತು ಮಾತನಾಡಿದ ಅವರು, ನಾವು ಚೀನಾದಂತೆ ತಪ್ಪುಗಳನ್ನು ಪುನರಾವರ್ತಿಸಬಾರದು. 2 ಮಕ್ಕಳನ್ನು ಮಾತ್ರ ಹೊಂದುವ ನೀತಿಯನ್ನು ಕಡ್ಡಾಯಗೊಳಿಸುವ ಯಾವುದೇ ಕಾನೂನನ್ನು ನಾನು ಬೆಂಬಲಿಸುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಾಲ್‌ನಲ್ಲಿ ನಮಾಜ್ – ಮಾಲ್ ಬಹಿಷ್ಕರಿಸುವಂತೆ ಹಿಂದೂ ಸಂಘಟನೆಗಳಿಂದ ಕರೆ
ಈ ನೀತಿಯಿಂದ ದೇಶಕ್ಕೆ ಪ್ರಯೋಜನವಾಗುವುದಿಲ್ಲ. ಭಾರತದ ಒಟ್ಟು ಫಲವಂತಿಕೆ ದರವು ಕುಸಿಯುತ್ತಿದೆ. 2030ರ ವೇಳೆಗೆ ಅದು ಸ್ಥಿರಗೊಳ್ಳುತ್ತದೆ ಎಂದು ಓವೈಸಿ ವಿಶ್ಲೇಷಿಸಿದ್ದಾರೆ.
ಕೆಲವು ಸಮುದಾಯಗಳ ಜನಸಂಖ್ಯೆ ಹೆಚ್ಚಾಗಬಾರದು. ಅದಕ್ಕಾಗಿ ಮೂಲ ನಿವಾಸಿಗಳು ತಮ್ಮ ಜನಸಂಖ್ಯೆ ಬಗ್ಗೆ ಜಾಗೃತರಾಗಿರಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಓವೈಸಿ ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಭಾರೀ ಪ್ರಮಾಣದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಸಿದ ಮಹಾರಾಷ್ಟ್ರ
ಜನಸಂಖ್ಯೆ ನಿಯಂತ್ರಣಕ್ಕೆ ದೇಶದಲ್ಲಿ ಯಾವುದೇ ಕಾನೂನು ಅಗತ್ಯವಿಲ್ಲ ಎಂದು ಸ್ವತಃ ಆರೋಗ್ಯ ಸಚಿವರು ಹೇಳಿದ್ದಾರೆ. ಹೆಚ್ಚು ಗರ್ಭನಿರೋಧಕ ಕ್ರಮಗಳನ್ನು ಅನುಸರಿಸುತ್ತಿರುವವರು ಮುಸ್ಲಿಮರು. 2016 ರಲ್ಲಿ 2.6 ರಷ್ಟಿದ್ದ ಒಟ್ಟು ಫಲವಂತಿಕೆ ದರ ಈಗ 2.3 ಆಗಿದೆ ಎಂದು ಕೆಲ ದಿನಗಳ ಹಿಂದೆ ಓವೈಸಿ ಹೇಳಿದ್ದರು.