ದಾವಣಗೆರೆ: ನಾನು ನಿದ್ದೆ ಬಿಟ್ಟು ಲೋಕಸಭೆಯ 28 ಸೀಟ್ ಗೆಲ್ಲಿಸಲು ರಾಜ್ಯಾದ್ಯಂತ ಓಡಾಡುವೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಜೊತೆ ಎಲೆಮರೆ ಕಾಯಿಯಾಗಿ ಲೋಕಸಭೆ ಚುನಾವಣೆಯಲ್ಲಿ ಕೆಲಸ ಮಾಡುವೆ ಎಂದು ದಾವಣಗೆರೆಯಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ (M.P.Renukacharya) ಹೇಳಿದರು.
ಬಿಎಸ್‌ವೈ ಪುತ್ರ ವಿಜಯೇಂದ್ರ (Vijayendra) ಬಿಜೆಪಿ ರಾಜ್ಯಾಧ್ಯಕ್ಷ ಆದಾಗಿನಿಂದ ರೇಣುಕಾಚಾರ್ಯ ಮತ್ತೆ ಅಕ್ಟಿವ್ ಆಗಿದ್ದಾರೆ. ಬಿಜೆಪಿ ಲೋಕಾಸಭಾ ಕ್ಷೇತ್ರದ ಬಿಜೆಪಿ (BJP) ಟಿಕೆಟ್ ಆಕಾಂಕ್ಷಿಯಾಗಿರುವ ಇವರು ಜಿಲ್ಲೆಯ ಹಿರಿಯ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಮಾಜಿ ಸಚಿವ ರೇಣುಕಾಚಾರ್ಯ, ಬಿಜೆಪಿ ಹಿರಿಯ ನಾಯಕ ಎಸ್.ಎ.ರವೀಂದ್ರನಾಥ್ ಅವರನ್ನು ಕುಟುಂಬಸಮೇತ ಭೇಟಿಯಾಗಿ ದೀಪಾವಳಿ ಹಬ್ಬದ ಶುಭಾಶಯ ತಿಳಿಸಿ ಕೆಲ ಕಾಲ ಚರ್ಚೆ ಮಾಡಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿಗೆ ಬಡವರು, ಹೆಣ್ಣುಮಕ್ಕಳ ನೋವು ಗೊತ್ತಿಲ್ಲ: ಡಿಕೆಶಿ ಕಿಡಿ
Advertisement
Advertisement
ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿ.ವೈ.ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಮಾಡಿದ್ದಕ್ಕೆ ಮೋದಿಜೀ, ಜೆ.ಪಿ.ನಡ್ಡಾ, ಅಮಿತ್ ಶಾ ಅವರಿಗೆ ವಿಶೇಷವಾಗಿ ಧನ್ಯವಾದ ಹೇಳುತ್ತೇವೆ. ದೀಪಾವಳಿ ಹಬ್ಬಕ್ಕೆ ಕಾಂಗ್ರೆಸ್ ನವರಿಗೆ ಮಾಸ್ಟರ್ ಸ್ಟ್ರೋಕ್ ಕೊಟ್ಟಿದ್ದಾರೆ. ರಾಜ್ಯಾಧ್ಯಕ್ಷ ಇಲ್ಲ ಎಂದು ಕಾಂಗ್ರೆಸ್ ನವರು ಟೀಕೆ ಮಾಡುತ್ತಿದ್ದರು. ವಿಜಯೇಂದ್ರಗೆ ಚಿಕ್ಕ ವಯಸ್ಸಿನಲ್ಲಿ ಜವಾಬ್ದಾರಿ ನೀಡಿದ್ದಾರೆ. ಅದನ್ನು ಅವರು ನಿಭಾಯಿಸುತ್ತಾರೆ ಎಂದು ತಿಳಿಸಿದರು.
Advertisement
ವಿಜಯೇಂದ್ರ ರಾಜ್ಯಾಧ್ಯಕ್ಷ ಆಗಿದ್ದಕ್ಕೆ ಕುಟುಂಬ ರಾಜಕಾರಣ ಎಂದು ಕಾಂಗ್ರೆಸ್‌ನ ಸಚಿವ ಪ್ರಿಯಾಂಕ್ ಖರ್ಗೆ ಟೀಕೆ ಮಾಡ್ತಾರೆ. ಅದರೆ ಅವರಿಗೆ ಟೀಕೆ ಮಾಡುವ ನೈತಿಕ ಹಕ್ಕು ಇಲ್ಲ. ನೆಹರೂ ಅವರಿಂದ ಹಿಡಿದು ರಾಹುಲ್ ಗಾಂಧಿ ವರೆಗೂ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ. ಆದರೆ ಬಿಜೆಪಿಯಲ್ಲಿ ವಿಜಯೇಂದ್ರ ಹಲವು ಜವಾಬ್ದಾರಿಗಳನ್ನು ವಹಿಸಿಕೊಂಡು ಬಂದಿದ್ದಾರೆ. ಬಿಜೆಪಿ ಗೆಲ್ಲಲು ಸಾಧ್ಯವಾಗದ ಕ್ಷೇತ್ರದಲ್ಲಿ ಹೋಗಿ ಜವಾಬ್ದಾರಿ ವಹಿಸಿಕೊಂಡು ಬಿಜೆಪಿ ಗೆಲ್ಲಿಸಿಕೊಂಡು ಬಂದಿದ್ದಾರೆ ಎಂದರು. ಇದನ್ನೂ ಓದಿ: ತೆಲಂಗಾಣದಲ್ಲಿ ವಿದ್ಯುತ್ ಘೋಷಣೆ; ಇಲ್ಲಿ ಮಹದೇವಪ್ಪನಿಗೂ ಕತ್ತಲು, ಕಾಕಾ ಪಾಟೀಲ್‌ಗೂ ಕತ್ತಲು – ಹೆಚ್‌ಡಿಕೆ ಕಿಡಿ
Advertisement
ಯಡಿಯೂರಪ್ಪ ಪುತ್ರ ಎಂದು ಅವರಿಗೆ ಕೊಟ್ಟಿಲ್ಲ, ಅವರ ಸಾಮರ್ಥ್ಯ ಮತ್ತು ಸಂಘಟನೆ ನೋಡಿ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ. ಮಲ್ಲಿಕಾರ್ಜುನ್ ಖರ್ಗೆ ಅವರ ಬಗ್ಗೆ ನಮಗೆ ಅಪಾರ ಗೌರವ ಇದೆ. ಅವರ ಮಗ ಎಂದು ನಿಮಗೆ ಸಚಿವ ಸ್ಥಾನ ನೀಡಿದ್ದಾರೆ ಅಷ್ಟೆ. ಬಂಗಾರಪ್ಪ ಪುತ್ರ ಮಧು ಬಂಗಾರಪ್ಪಗೆ, ಗುಂಡೂರಾವ್ ಪುತ್ರ ದಿನೇಶ್ ಗುಂಡೂರಾವ್‌ಗೆ ಸಚಿವ ಸ್ಥಾನ ಕೊಟ್ಟಿದ್ದಾರೆ. ಇದು ಕಾಂಗ್ರೆಸ್‌ನಲ್ಲಿ ಕುಟುಂಬ ರಾಜಕಾರಣ ಇದೆ ಎಂದು ಗೊತ್ತಾಗುತ್ತೆ. ಆದರೆ ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಇಲ್ಲ. ವಿಜಯೇಂದ್ರ ರಾಜ್ಯಾಧ್ಯಕ್ಷ ಆಗಲು ಕಾರ್ಯಕರ್ತರ ಧ್ವನಿಯಾಗಿತ್ತು. ಅದಕ್ಕೆ ನಾನು ಕೂಡ ಅವರ ಅಭಿಪ್ರಾಯ ತಿಳಿಸಿದ್ದೆ. ನನ್ನಿಂದಲೇ ರಾಜ್ಯಾಧ್ಯಕ್ಷ ಆಗಿದ್ದಾರೆ ಎನ್ನುವುದು ತಪ್ಪಾಗುತ್ತೆ. ನಮ್ಮ ಒತ್ತಾಯವಾಗಿತ್ತು ಅಷ್ಟೆ ಎಂದು ಸ್ಪಷ್ಟನೆ ನೀಡಿದರು.
ಮೋದಿಯವರು ಮತ್ತೆ ಪ್ರಧಾನಿಯಾಗಲು ಇಲ್ಲಿ ಸಮರ್ಥ ನಾಯಕ ಬೇಕಿತ್ತು. ಯಡಿಯೂರಪ್ಪ ನವರ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ. ವಿಜಯೇಂದ್ರ ರಾಜ್ಯಾಧ್ಯಕ್ಷ ಆಗಿದ್ದು ಇಡೀ ರಾಜ್ಯದ ಯುವಜನತೆಗೆ ಹುಮ್ಮಸ್ಸು ಬಂದಿದೆ. ಇನ್ನು ಮುಂದೆ ರೇಣುಕಾಚಾರ್ಯ ನಿದ್ದೆ ಮಾಡೋದಿಲ್ಲ. ಎಲೆಮರೆಕಾಯಿಯಾಗಿ 28 ಕ್ಷೇತ್ರ ಗೆಲ್ಲಲು ಶ್ರಮಿಸುತ್ತೇನೆ ಎಂದರು. ನಾನು ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದು ಎಲ್ಲೂ ಹೇಳಿಲ್ಲ. ಕೆಲ ಕಾಮಗಾರಿ, ಬರ ವಿಚಾರವಾಗಿ ಕಾಂಗ್ರೆಸ್ ಸಚಿವರನ್ನು ಭೇಟಿಯಾಗಿ ಬಂದೆ ಅಷ್ಟೆ. ಆದರೆ ನನ್ನನ್ನು ಪಕ್ಷದಿಂದ ಹೊರ ಕಳಿಸುವ ಕೆಲಸ ಕೆಲವರು ಮಾಡಿದರು. ಆದರೆ ನಾನು ಪಕ್ಷದ ಕಾರ್ಯಕರ್ತರ ಒತ್ತಾಯದ ಮೇರೆಗೆ ಲೋಕಾಸಭಾ ಟಿಕೆಟ್ ಅಕಾಂಕ್ಷಿಯಾಗಿದ್ದೇನೆ. ಪ್ರಬಲವಾಗಿ ದಾವಣಗೆರೆ ಲೋಕಾಸಭಾ ಟಿಕೆಟ್ ಅಕಾಂಕ್ಷಿಯಾಗಿದ್ದೇನೆ. ಅದರ ಜೊತೆ ರಾಜ್ಯ ಸಂಚಾರ ಮಾಡಿ ಬಿಜೆಪಿಯನ್ನು ಗೆಲ್ಲಿಸಲು ಶ್ರಮಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಯುವಕ ಎಂದು ರಾಜ್ಯಾಧ್ಯಕ್ಷ ಸ್ಥಾನಕ್ಕೆ ನನ್ನ ಆಯ್ಕೆ: ವಿಜಯೇಂದ್ರ