ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು : ಮೋದಿ ಬಳಿ ಅಫ್ರಿದಿ ಮನವಿ

Public TV
2 Min Read
Narendra Modi 4

ಇಸ್ಲಾಮಾಬಾದ್: ಮುಂಬರುವ ಏಷ್ಯಾಕಪ್ ಕ್ರಿಕೆಟ್ (Aisa Cup 2023) ಟೂರ್ನಿಗೆ ಪಾಕಿಸ್ತಾನದಲ್ಲಿ ಭಾರತ ತಂಡ ಕ್ರಿಕೆಟ್ ಆಡಲು ಪ್ರಧಾನಿ ನರೇಂದ್ರ ಮೋದಿ (Narendra Modi) ಅವಕಾಶ ಮಾಡಿಕೊಡಬೇಕು ಎಂದು ಪಾಕಿಸ್ತಾನ ತಂಡದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ (Shahid Afridi) ಮನವಿ ಮಾಡಿದ್ದಾರೆ.

ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿ ವೇಳೆ 2023ರ ಏಷ್ಯಾಕಪ್ ಟೂರ್ನಿ ಸಂಬಂಧ ಮಾತನಾಡಿದ ಅವರು, 2023ರ ಏಷ್ಯಾಕಪ್ ಟೂರ್ನಿಗೆ ಪಾಕಿಸ್ತಾನಕ್ಕೆ ಭಾರತ ತಂಡವನ್ನು ಕಳುಹಿಸುವಂತೆ ಮನವಿ ಮಾಡಿದ್ದಾರೆ. ಭಾರತ ತಂಡವು ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳಬೇಕು. ಆ ಮೂಲಕ ಉಭಯ ತಂಡಗಳ ನಡುವಣ ದ್ವಿಪಕ್ಷೀಯ ಸಂಬಂಧವನ್ನು ಇನ್ನಷ್ಟು ಉತ್ತಮಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. 

INDvsPAK

2023ರ ಏಷ್ಯಾಕಪ್ ಟೂರ್ನಿಯ ಆತಿಥ್ಯವನ್ನು ಪಾಕಿಸ್ತಾನಕ್ಕೆ ನೀಡಲಾಗಿದೆ. ಆದರೆ ಕಳೆದ ವರ್ಷ ಬಿಸಿಸಿಐ (BCCI) ಕಾರ್ಯದರ್ಶಿ ಜಯ್ ಶಾ ಅವರು, ಪಾಕಿಸ್ತಾನದಲ್ಲಿ ಏಷ್ಯಾ ಕಪ್ ಟೂರ್ನಿ ನಡೆದರೆ, ಭಾರತ ತಂಡವನ್ನು ಕಳುಹಿಸುವುದಿಲ್ಲ ಎಂದಿದ್ದರು. ಆ ಮೂಲಕ ಟೂರ್ನಿಯನ್ನು ತಟಸ್ಥ ಸ್ಥಳದಲ್ಲಿ ಆಯೋಜಿಸುವಂತೆ ಏಷ್ಯಾ ಕ್ರಿಕೆಟ್ ಕೌನ್ಸಿಲ್ ಬಳಿ ಮನವಿ ಸಲ್ಲಿಸಲಾಗುವುದು ಎಂದಿದ್ದರು. ಇದನ್ನೂ ಓದಿ: AisaCup ಕ್ರಿಕೆಟ್‌ಗೆ ಭಾರತ ಪಾಕಿಸ್ತಾನಕ್ಕೆ ಹೋಗಲ್ಲ: BCCI ಅಧಿಕೃತ ಪ್ರಕಟ

Jay Shah

ಈ ವಿಷಯವನ್ನು ಮತ್ತೊಮ್ಮೆ ಪ್ರಸ್ತಾಪಿಸಿರುವ ಅಫ್ರಿದಿ, ಭಾರತ ತಂಡ ಪಾಕಿಸ್ತಾನಕ್ಕೆ ಬಂದರೆ ನಿಜಕ್ಕೂ ಉತ್ತಮವಾಗಿರುತ್ತದೆ. ಆ ಮೂಲಕ ಭಾರತ ಹಾಗೂ ಪಾಕಿಸ್ತಾನ ನಡುವಣ ದ್ವಿಪಕ್ಷೀಯ ಕ್ರಿಕೆಟ್‌ಗೆ ಮೊದಲ ಹೆಜ್ಜೆಯಾಗಲಿದೆ. ಯುದ್ದ ಹಾಗೂ ದ್ವೇಷವನ್ನು ಈಗಿನ ಪೀಳಿಗೆ ಬಯಸುವುದಿಲ್ಲ. ನಮ್ಮ ನಡುವಣ ಸಂಬಂಧವನ್ನು ಉತ್ತಮ ಪಡಿಸುವುದು ಇದಾಗಿದೆ. ಬೇರೆಯವರ ರೀತಿ ನಾವು ಸ್ನೇಹಿತರಾಗಿದ್ದರೆ, ಯಾರು ಏನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

IND VS PAK 1

ಬಿಸಿಸಿಐ ಬಲಿಷ್ಠ ಮಂಡಳಿಯಾಗಿ ಉಳಿದಿದೆ. ಅದು ಶತ್ರುಗಳನ್ನ ಹುಟ್ಟುಹಾಕಬಾರದು, ಸ್ನೇಹಿತರನ್ನಾಗಿ ಮಾಡಿಕೊಳ್ಳುವತ್ತ ಗಮನಹರಿಸಬೇಕು. ಹೆಚ್ಚು ಮಂದಿಯನ್ನು ಸ್ನೇಹಿತರನ್ನಾಗಿ ಮಾಡಿಕೊಂಡರೆ, ನೀವು ಇನ್ನಷ್ಟು ಬಲಿಷ್ಠವಾಗಬಹುದು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: WPL 2023: ಮುಂಬೈ ಇಂಡಿಯನ್ಸ್‌ಗೆ ಹೀನಾಯ ಸೋಲು – ಅಗ್ರಸ್ಥಾನಕ್ಕೇರಿದ ಡೆಲ್ಲಿ ಕ್ಯಾಪಿಟಲ್ಸ್‌

IND vs PAK 2

ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. 2008ರಲ್ಲಿ ಮುಂಬೈ ಮೇಲಿನ ದಾಳಿಯ ಬಳಿಕ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ ಟೂರ್ನಿ ಅಥವಾ ಏಷ್ಯಾ ಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ. ಕೊನೆಯದ್ದಾಗಿ 2022ರ ಏಷ್ಯಾಕಪ್ ಟೂರ್ನಿ ಬಳಿಕ, ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಇತ್ತಂಡಗಳು ಮುಖಾಮುಖಿಯಾಗಿದ್ದವು.

Share This Article
Leave a Comment

Leave a Reply

Your email address will not be published. Required fields are marked *