– ನನ್ನ ಮೇಲಿನ ಯಾವ ಕೇಸ್ ವಾಪಸ್ ಪಡೆದಿದ್ದಾರೆ?
ಗುಲ್ಬರ್ಗ: ನನ್ನ ಮೇಲಿನ ಯಾವ ಕೇಸ್ ವಾಪಸ್ ಪಡೆದಿದ್ದಾರೆ? ಅದರ ಬಗ್ಗೆ ದಾಖಲೆ ತೋರಿಸಿದರೆ ನಾನು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯ ಸನ್ಯಾಸತ್ವ ಸ್ವೀಕರಿಸುತ್ತೇನೆ ಎಂದು ಕಲಬುರಗಿಯಲ್ಲಿ (Kalaburagi) ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ (C T Ravi) ಹೇಳಿದ್ದಾರೆ.
Advertisement
ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನ್ನ ಮೇಲೆ ಯಾವ ಕೇಸ್ ಇಲ್ಲ. ಕ್ಯಾಬಿನೆಟ್‌ನಲ್ಲಿ ನನ್ನ ಮೇಲಿನ ಯಾವ ಕೇಸ್ ಕೂಡ ವಾಪಸ್ ಪಡೆದಿಲ್ಲ. ನಾನು ಚಾಲೆಂಜ್ ಮಾಡುತ್ತೇನೆ. ನನ್ನ ಮೇಲೆ ಯಾವ ಕೇಸ್ ಇದೆ? ಯಾವುದು ವಾಪಸ್ ತೆಗೆದುಕೊಂಡಿದ್ದಾರೆ ಎಂದು ಹೇಳಲಿ. ಇವರು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಪ್ರಿಯಾಂಕ್ ಖರ್ಗೆ, ಹೆಚ್ ಕೆ ಪಾಟೀಲ್ ನನ್ನ ಚಾಲೆಂಜ್ ಸ್ವೀಕರಿಸಲಿ ಎಂದು ಸವಾಲ್ ಹಾಕಿದರು. ಇದನ್ನೂ ಓದಿ: ಮಂಡ್ಯದಲ್ಲಿ ಅಪ್ಪು ಹೆಸರಲ್ಲಿ ವಂಚನೆ ಆರೋಪ – ಕ್ರೀಡಾಕೂಟದ ನಕಲಿ ಪೋಸ್ಟ್ ಬಿಟ್ಟು ದೋಖಾ
Advertisement
Advertisement
ಅವರು ನನ್ನ ರುಜುವಾತು ಮಾಡಬೇಕು. ಇಲ್ಲದೇ ಹೋದ್ರೆ ಜನತೆ ಎದುರು ಕ್ಷಮೆ ಕೇಳಿ ರಾಜೀನಾಮೆ ಕೊಡಬೇಕು. ಮುಸ್ಲಿಮರ ಓಲೈಕೆಗಾಗಿ ಕೇಸ್ ವಾಪಸ್ ಪಡೆದಿದ್ದಾರೆ. ನನ್ನ ಮೇಲೆ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಯಾವುದೇ ಕೇಸ್ ಇರಲಿಲ್ಲ. ಕುಕ್ಕರ ಬಾಂಬ್ ಬ್ಲಾಸ್ಟ್ ಪ್ರಕರಣ ಆರೋಪಿಗಳನ್ನು ಕಾಂಗ್ರೆಸ್‌ನವರು ‘ದೇ ಆರ್ ಮೈ ಬ್ರದರ್ಸ್’ ಅಂತಾ ಮುಸ್ಲಿಮರನ್ನು ಓಲೈಕೆ ಮಾಡಿದ್ದಾರೆ ಎಂದರು. ಇದನ್ನೂ ಓದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಚೆನ್ನೈನಲ್ಲಿ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
Advertisement
ಇನ್ನು ಖರ್ಗೆ ಕುಟುಂಬದ ಸಿದ್ದಾರ್ಥ ಟ್ರಸ್ಟ್ ಜಮೀನು ವಾಪಸ್ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಸದ್ಯ ರಾಜ್ಯದಲ್ಲಿ ಹೊಸ ಟ್ರೆಂಡ್ ಶುರುವಾಗಿದೆ. ಕದ್ದ ಮಾಲನ್ನ ವಾಪಸ್ ಕೊಡ್ತಾ ಇದ್ದಾರೆ. ಕದ್ದ ಮಾಲನ್ನ ವಾಪಸ್ ಕೊಟ್ಟರೆ ಅದನ್ನ ಸಾಕ್ಷಿಯಾಗಿ ಪರಿಗಣಿಸುತ್ತಾರೆ. ಆತ್ಮಸಾಕ್ಷಿ ಬಗ್ಗೆ ಮಾತಾಡುವ ಇವರು ಒಂದು ಕೇಸ್ ವಾಪಸ್ ಪಡೆಯಲು ಒಬ್ಬ ವ್ಯಕ್ತಿಗೆ ಎಷ್ಟು ಕೊಟ್ಟಿದ್ದಾರೆ ಎಂದು ನನಗೆ ಗೊತ್ತಿದೆ. ಸಮಯ ಬಂದಾಗ ಅದನ್ನ ಬಹಿರಂಗ ಪಡಿಸುತ್ತೇನೆ. ಕೇಸ್ ವಾಪಸ್ ಪಡೆಯಲು ಯಾವ ಹಂತಕ್ಕೆ ಹೋಗಿದ್ದಾರೆ ಎಂದೂ ಗೊತ್ತಿದೆ. ನ್ಯಾಯಾಂಗ ವ್ಯವಸ್ಥೆಯಲ್ಲು ಕೂಡ ಖರೀದಿ ಮಾಡಬಹುದು ಅಂತಾ ಅಂದುಕೊಂಡಿದ್ದಾರೆ ಎಂದು ‘ಕೈ’ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಬೈಪಾಸ್ ಬಳಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು – ಛಿದ್ರ ಛಿದ್ರವಾದ ದೇಹಗಳು