ವಾಷಿಂಗ್ಟನ್: ಟ್ವಿಟ್ಟರ್ ಸಿಇಒ (Twitter CEO) ಎಲೋನ್ ಮಸ್ಕ್ (Elon Musk) ಇತ್ತೀಚೆಗೆ ತಾವು ತಮ್ಮ ಹುದ್ದೆಯನ್ನು ತೊರೆಯಬೇಕೇ ಅಥವಾ ಹೀಗೇ ಮುಂದುವರಿಯಬೇಕೇ ಎಂಬ ಬಗ್ಗೆ ಸಮೀಕ್ಷೆಯೊಂದರ ಮೂಲಕ ಬಳಕೆದಾರರ ಅಭಿಪ್ರಾಯವನ್ನು ಪಡೆದುಕೊಂಡಿದ್ದರು. ಸಮೀಕ್ಷೆಯಲ್ಲಿ ಮಸ್ಕ್‌ಗೆ ಟ್ವಿಟ್ಟರ್ ಸಿಇಒ ಸ್ಥಾನದಿಂದ ಕೆಳಗಿಳಿಯಲು ಹೆಚ್ಚಿನ ಬಳಕೆದಾರರು ಸೂಚಿಸಿದ್ದು, ಇದೀಗ ಮಸ್ಕ್ ತಾವು ಟ್ವಿಟ್ಟರ್ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯುವುದಾಗಿ ತಿಳಿಸಿದ್ದಾರೆ.
Advertisement
ಎಲೋನ್ ಮಸ್ಕ್ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಆದರೆ ತಾವು ಕೆಳಗಿಳಿಯಲು ಒಂದು ಷರತ್ತನ್ನೂ ನೀಡಿದ್ದಾರೆ. ನನ್ನ ಜವಾಬ್ದಾರಿ ತೆಗೆದುಕೊಳ್ಳಲು ಯಾರಾದರೂ ಮೂರ್ಖ ಸಿಕ್ಕ ತಕ್ಷಣವೇ ಟ್ವಿಟ್ಟರ್ ಸಿಇಒ ಹುದ್ದೆಗೆ ರಾಜೀನಾಮೆ ನೀಡುತ್ತೇನೆ. ಬಳಿಕ ಕಂಪನಿಯ ಸಾಫ್ಟ್‌ವೇರ್ ಹಾಗೂ ಸರ್ವರ್ ತಂಡಗಳನ್ನು ಮುನ್ನಡೆಸುತ್ತೇನೆ ಎಂದು ತಿಳಿಸಿದ್ದಾರೆ.
Advertisement
I will resign as CEO as soon as I find someone foolish enough to take the job! After that, I will just run the software & servers teams.
— Elon Musk (@elonmusk) December 21, 2022
Advertisement
ಕಳೆದ 2 ದಿನಗಳ ಹಿಂದೆ ಮಸ್ಕ್ ಸಮೀಕ್ಷೆಯನ್ನು ಪ್ರಾರಂಭಿಸಿದ್ದರು ಹಾಗೂ ಅದರ ಫಲಿತಾಂಶಕ್ಕೆ ಬದ್ಧನಾಗಿರುವುದಾಗಿ ಹೇಳಿದ್ದರು. ವೋಟ್ ಮಾಡುವಾಗ ಜಾಗರೂಕರಾಗಿರಿ. ಟ್ವಿಟ್ಟರ್ ಮುಖ್ಯಸ್ಥನಾಗಿ ಮುಂದುವರಿಯಬೇಕೇ ಅಥವಾ ಬೇಡವೇ ಎಂಬುದು ನಿಮ್ಮ ಕೈಯಲ್ಲಿದೆ ಎಂದು ಮಸ್ಕ್ ಬಳಕೆದಾರರಿಗೆ ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ಆಸ್ಪತ್ರೆಗಳು ಭರ್ತಿ, ಸ್ಮಶಾನದಲ್ಲಿ ಶವಗಳ ರಾಶಿ – ಚೀನಾದಲ್ಲಿ ಕೋವಿಡ್ ಸುನಾಮಿಗೆ ಕಾರಣ ಏನು?
Advertisement
Should I step down as head of Twitter? I will abide by the results of this poll.
— Elon Musk (@elonmusk) December 18, 2022
ಭಾನುವಾರ ಮಸ್ಕ್ ಸಮೀಕ್ಷೆಯ ಗಡುವು ಮುಗಿದಿದ್ದು, 1.7 ಕೋಟಿ ಮಂದಿ ವೋಟ್ ಮಾಡಿದ್ದಾರೆ. ವೋಟ್ ಮಾಡಿದ ಶೇ.57.5 ರಷ್ಟು ಬಳಕೆದಾರರು ಸಿಇಒ ಹುದ್ದೆಯನ್ನು ತೊರೆಯುವಂತೆ ಮಸ್ಕ್‌ಗೆ ಸೂಚಿಸಿದ್ದಾರೆ. ಶೇ.42.5 ರಷ್ಟು ಬಳಕೆದಾರರು ಟ್ವಿಟ್ಟರ್ ಸಿಇಒ ಸ್ಥಾನದಲ್ಲಿಯೇ ಮುಂದುವರಿಯಲು ತಿಳಿಸಿದ್ದಾರೆ. ತಮ್ಮ ಸ್ಥಾನದಿಂದ ಕೆಳಗಿಳಿಯಲು ಹೆಚ್ಚಿನವರು ಸೂಚಿಸಿರುವುದರಿಂದ ಮಸ್ಕ್ ಇದೀಗ ತಾವು ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಟ್ವಿಟ್ಟರ್ ಮುಖ್ಯಸ್ಥ ಸ್ಥಾನದಿಂದ ಕೆಳಗಿಳೀಬೇಕಾ? – ಸಮೀಕ್ಷೆಯ ಫಲಿತಾಂಶಕ್ಕೆ ಬದ್ಧನಾಗಿರುತ್ತೇನೆ ಎಂದ ಮಸ್ಕ್