ಮೈಸೂರು: ನನ್ನ ರಾಜಕೀಯ ಜೀವನದ ಎಲ್ಲಾ ಏಳು-ಬೀಳುಗಳನ್ನು ದಾಖಲಿಸಿದ್ದೇನೆ. ನಾನು ಆತ್ಮತೃಪ್ತಿಯಿಂದ ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗುತ್ತಿದ್ದೇನೆ ಎಂದು ಮೈಸೂರಿನಲ್ಲಿ ಚಾಮರಾಜನಗರದ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.
Advertisement
ಶ್ರೀನಿವಾಸ್ ಪ್ರಸಾದ್ ಅವರ 75ನೇ ವರ್ಷದ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಇಂದು ಅವರ 50 ವರ್ಷದ ರಾಜಕೀಯ ಜೀವನದ ಪುಸ್ತಕ ಬಿಡುಗಡೆಯಾಗಲಿದೆ. ಈ ಬಗ್ಗೆ ಮಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ರಾಜಕೀಯ ಜೀವನದ ಎಲ್ಲಾ ಏಳು-ಬೀಳು ದಾಖಲಿಸಿದ್ದೇನೆ. ನಾನು ಆತ್ಮ ತೃಪ್ತಿಯಿಂದ ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗುತ್ತಿದ್ದೇನೆ. ನಾಲ್ಕು ವರ್ಷದ ಹಿಂದೆಯೇ ನಾನು ನಿವೃತ್ತಿ ಬಯಸಿದ್ದೆ. ಆದರೆ ರಾಜಕೀಯ ಬೆಳವಣಿಗೆ ಬೇರೆಯಾದ ಕಾರಣ ಮತ್ತೇ ಸ್ಪರ್ಧೆ ಮಾಡಿದ್ದೆ. ಮುಂದೆ ನಾನು ಚುನಾವಣೆಗಳಿಗೆ ಸ್ಪರ್ಧಿಸುವುದಿಲ್ಲ. ಈ ಮಾತಿನಿಂದ ಹಿಂದೆ ಸರಿಯುವುದು ಇಲ್ಲ ಎಂದರು.
Advertisement
Advertisement
2019ರ ವರೆಗೆ 14 ಚುನಾವಣೆಗಳಲ್ಲಿ ಸ್ಪರ್ಧಿಸಿದ್ದೇನೆ. ಪಕ್ಷೇತರನಾಗಿ ಕೂಡ ಸ್ಪರ್ಧಿಸಿದ್ದೇನೆ. ಕಾಂಗ್ರೆಸ್‍ನಲ್ಲಿ ಹೆಚ್ಚು ಬಾರಿ ಸ್ಪರ್ಧಿಸಿದ್ದೇನೆ. ನಾನು ರಾಜಕೀಯ ಬೆಳವಣಿಗೆ ಆದಂತಹ ಸಂದರ್ಭದಲ್ಲಿ ಬದಲಾವಣೆಗಳೊಂದಿಗೆ ಅನಿವಾರ್ಯ ಕಾರಣಗಳಿಂದ ಹಲವು ಚುನಾವಣೆಗಳನ್ನು ಎದುರಿಸಿದ್ದೇನೆ. ಈ ಹಿಂದೆ ನನ್ನ ಮನಸ್ಸಿಗೆ ನೋವಾಗುವಂತಹ ಘಟನೆ ನಡೆದ ಬಳಿಕ ರಾಜಕೀಯದಿಂದ ನಿವೃತ್ತಿಯಾಗಲು ಬಯಸಿದ್ದೆ. ಆದರೆ ನನ್ನ ಅಭಿಮಾನಿಗಳು ಒಪ್ಪದ ಕಾರಣ ಎರಡು ವರ್ಷಗಳ ಮತ್ತೆ ಮುಂದುವರಿದು 2019ರ ಚುನಾವಣೆಗಳಲ್ಲಿ ಎದುರಿಸಿದ್ದೇನೆ ಎಂದರು. ಇದನ್ನೂ ಓದಿ: ಜಮೀರ್, ಬೇಗ್ ಮನೆಗೆ ಇಡಿ ದಾಳಿ- ಸಿದ್ದರಾಮಯ್ಯನವ್ರೇ ಇದರ ಪಲಾನುಭವಿಯಂತೆ!
Advertisement
ಚುನಾವಣೆಗಳಲ್ಲಿ ನಾನು ಯಾವ ಪರಿಸ್ಥಿತಿಗಳಲ್ಲಿ ಎದುರಿಸಿದ್ದೇನೆ ಎಂಬುದನ್ನು ಬಿಡುಗಡೆಯಾಗಲಿರುವ ನನ್ನ ಪುಸ್ತಕದಲ್ಲಿ ಬರೆದಿದ್ದೇನೆ. ಹಾಗಾಗಿ ನನಗೆ ಆ ಎಲ್ಲಾ ಚುನಾವಣೆಯ ಸಂದರ್ಭಗಳಲ್ಲಿ ನನ್ನ ನಿಲುವಿನ ಕುರಿತು ಆತ್ಮತೃಪ್ತಿ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.