– ಈಗಿನ ವರದಿಯಲ್ಲಿ ಅನೇಕ ಸಮುದಾಯಗಳಿಗೆ ಆತಂಕವಿದೆ ಎಂದ ಸಚಿವ
ಬೆಂಗಳೂರು: ಜಾತಿಗಣತಿ ವರದಿ ಜಾರಿ ಮಾಡುವ ಬಗ್ಗೆ ನನ್ನ ಅಭಿಪ್ರಾಯವನ್ನು ಕ್ಯಾಬಿನೆಟ್ ಸಭೆಯಲ್ಲಿ ಹೇಳುತ್ತೇನೆ ಎಂದು ಸಚಿವ ಈಶ್ವರ್ ಖಂಡ್ರೆ (Eshwar Khandre) ತಿಳಿಸಿದ್ದರು.ಇದನ್ನೂ ಓದಿ: ಸಿಎಂ ಹುದ್ದೆ ಕನಸು ಕಂಡರೆ ಹೇಳುವೆ, ಸದ್ಯಕ್ಕೆ ಬೇಡ – ಸಿಎಂ ರಾಜೀನಾಮೆ ಕೊಡುವ ಕಾಲ ಸನ್ನಿಹಿತ: ವಿಜಯೇಂದ್ರ
Advertisement
Advertisement
ನಗರದ ಕೆಪಿಸಿಸಿ (KPCC) ಕಚೇರಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಸಭೆ ನಡೆಯುತ್ತದೆ. ನನ್ನ ಅಭಿಪ್ರಾಯವನ್ನು ಸಚಿವ ಸಂಪುಟ ಸಭೆಯಲ್ಲಿ ಹೇಳುತ್ತೇನೆ. ವರದಿ ಬಗ್ಗೆ ಆತಂಕ ಇತ್ತು ನಿಜ ಆದರೆ ಇಡೀ ದೇಶದಲ್ಲಿ ಜಾತಿಗಣತಿ ಆಗಬೇಕು. ನಮ್ಮ ಪ್ರಣಾಳಿಕೆಯಲ್ಲೂ ಜಾತಿಗಣತಿ ವರದಿ ಬಿಡುಗಡೆ ಮಾಡುತ್ತೇವೆ ಎಂದು ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ ಎಂದು ತಿಳಿಸಿದರು.
Advertisement
ಜಾತಿಗಣತಿಗೆ ಯಾರ ವಿರೋಧವೂ ಇಲ್ಲ. ಈಗ ಇರುವ ವರದಿಯಲ್ಲಿ ಅನೇಕ ಸಮುದಾಯಗಳಿಗೆ ಹಲವು ಆತಂಕಗಳು ಇವೆ. ಈ ಆತಂಕಗಳನ್ನು ನಿವಾರಣೆ ಮಾಡುವುದಾಗಿ ಸಿಎಂ ಹೇಳಿದ್ದಾರೆ. ಕ್ಯಾಬಿನೆಟ್ ಸಭೆಯಲ್ಲಿ ಇದನ್ನು ಚರ್ಚೆ ಮಾಡುತ್ತೇವೆ. ನನ್ನ ಅಭಿಪ್ರಾಯ ಕ್ಯಾಬಿನೆಟ್‌ನಲ್ಲಿ ಹೇಳುತ್ತೇನೆ. ಯಾವುದೇ ಸಮುದಾಯಕ್ಕೂ ಅನ್ಯಾಯ ಆಗಲು ನಾವು ಬಿಡುವುದಿಲ್ಲ ಎಂದು ಭರವಸೆ ನೀಡಿರು.ಇದನ್ನೂ ಓದಿ: ಪಶ್ಚಿಮ ಬಂಗಾಳ| ಕಲ್ಲಿದ್ದಲು ಗಣಿಯಲ್ಲಿ ಸ್ಪೋಟ- 7 ಮಂದಿ ಸಾವು, ಹಲವರಿಗೆ ಗಾಯ