Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಿಕೆಟ್ ಸಿಗಲಿ, ಸಿಗದೇ ಇರಲಿ ಪಕ್ಷದ ಜೊತೆ ಇರ್ತೇನೆ, ಜೆಡಿಎಸ್‌ಗೆ ಟಿಕೆಟ್ ಕೊಟ್ರೂ ಕೆಲಸ ಮಾಡ್ತೇನೆ: ಸಿಪಿವೈ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಟಿಕೆಟ್ ಸಿಗಲಿ, ಸಿಗದೇ ಇರಲಿ ಪಕ್ಷದ ಜೊತೆ ಇರ್ತೇನೆ, ಜೆಡಿಎಸ್‌ಗೆ ಟಿಕೆಟ್ ಕೊಟ್ರೂ ಕೆಲಸ ಮಾಡ್ತೇನೆ: ಸಿಪಿವೈ

Districts

ಟಿಕೆಟ್ ಸಿಗಲಿ, ಸಿಗದೇ ಇರಲಿ ಪಕ್ಷದ ಜೊತೆ ಇರ್ತೇನೆ, ಜೆಡಿಎಸ್‌ಗೆ ಟಿಕೆಟ್ ಕೊಟ್ರೂ ಕೆಲಸ ಮಾಡ್ತೇನೆ: ಸಿಪಿವೈ

Public TV
Last updated: September 2, 2024 7:28 pm
Public TV
Share
2 Min Read
CP Yogeshwar
SHARE

ರಾಮನಗರ: ವರಿಷ್ಠರ ಭೇಟಿ ಬಳಿಕ ಪಕ್ಷ ನನ್ನ ಜೊತೆ ಇದೆ, ಪಕ್ಷದ ವರಿಷ್ಠರು ಜೊತೆಗಿದ್ದಾರೆ ಎಂದು ಎನಿಸಿದೆ. ಟಿಕೆಟ್ ಸಿಗಲಿ, ಸಿಗದೇ ಇರಲಿ ನಾನು ಪಕ್ಷದ ಜೊತೆ ಇರುತ್ತೇನೆ ಎಂದು ಸಚಿವ ಸಿಪಿ ಯೋಗೇಶ್ವರ್ (CP Yogeshwar) ಹೇಳಿದ್ದಾರೆ.

ಚನ್ನಪಟ್ಟಣ (Channapatna) ಉಪಚುನಾವಣೆಯ ಅಭ್ಯರ್ಥಿ ಆಯ್ಕೆ ವಿಚಾರ ಕುರಿತು ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಹಿರಿಯ ಮುಖಂಡರ ಜೊತೆ ರಾಷ್ಟ್ರೀಯ ನಾಯಕರನ್ನು ದೆಹಲಿಯಲ್ಲಿ ಭೇಟಿಯಾಗಿದ್ದೇನೆ. ನಮ್ಮ ಪಕ್ಷದ ನಾಯಕರು ಹಾಗೂ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಉಪಚುನಾವಣೆ ಬಗ್ಗೆ ಚರ್ಚೆ ಮಾಡಿದ್ದಾರೆ. ಚುನಾವಣೆ ಪ್ರಕಟವಾದ ಮೇಲೆ ಟಿಕೆಟ್ ಬಗ್ಗೆ ತೀರ್ಮಾನ ಆಗುತ್ತದೆ. ನಮ್ಮ ಹೈಕಮಾಂಡ್ ನಾಯಕರು ಹಲವು ಸಲಹೆ, ಸೂಚನೆ ನೀಡಿದ್ದಾರೆ. ಎರಡೂ ಪಕ್ಷದ ಮುಖಂಡರು ಒಟ್ಟಾಗಿ ಚುನಾವಣೆಗೆ ಹೋಗಬೇಕು. ಹಾಗಾಗಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧವಾಗಿರಬೇಕು ಎಂದರು. ಇದನ್ನೂ ಓದಿ: Paris Paralympics | ಡಿಸ್ಕಸ್ ಥ್ರೋನಲ್ಲಿ ಭಾರತದ ಯೋಗೇಶ್‌ ಕಥುನಿಯಾಗೆ ಬೆಳ್ಳಿ

ಕ್ಷೇತ್ರದ ವಿದ್ಯಮಾನದ ಬಗ್ಗೆ ಹೈಕಮಾಂಡ್‌ಗೆ ಮಾಹಿತಿ ನೀಡಿದ್ದೇನೆ. ಕಾಂಗ್ರೆಸ್ ಈಗಾಗಲೇ ಕ್ಷೇತ್ರದಲ್ಲಿ ಕಾರ್ಯಪ್ರವೃತ್ತವಾಗಿರುವ ಬಗ್ಗೆಯೂ ದೆಹಲಿ ಪ್ರವಾಸದಲ್ಲಿ ಎಲ್ಲಾ ವಿಚಾರಗಳನ್ನು ಮುಕ್ತವಾಗಿ ಹಂಚಿಕೊಂಡಿದ್ದೇನೆ. ನಾನು ಇಲ್ಲಿ ಆತುರ ಪಡುವ ಅವಶ್ಯಕತೆ ಇಲ್ಲ. ಯಾರೇ ಅಭ್ಯರ್ಥಿ ಆಗಲಿ, ಬೇಗ ತೀರ್ಮಾನ ಆದರೆ ಒಳ್ಳೆಯದು. ಇದು ಉಪಚುನಾವಣೆ ಆಗಿರುವುದರಿಂದ ಇಡೀ ಸರ್ಕಾರ ಚುನಾವಣೆ ಮಾಡುತ್ತದೆ. ಚುನಾವಣೆಯಲ್ಲಿ ಪರೋಕ್ಷವಾಗಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಸರ್ಕಾರದ ವಿರುದ್ಧ ನಾವು ಹೋರಾಡಬೇಕಿದೆ. ಎರಡೂ ಪಕ್ಷದ ಹಿರಿಯರು ಆದಷ್ಟು ಬೇಗ ತೀರ್ಮಾನ ಮಾಡಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಭೂ ಕುಸಿತ; ಇಬ್ಬರು ವೈಷ್ಣೋದೇವಿ ಯಾತ್ರಿಕರ ಸಾವು

ನೀನು ಆತುರ ಪಡಬೇಡ ಎಂದು ಪಕ್ಷ ಹೇಳಿದೆ. ಹಾಗಾಗಿ ಪಕ್ಷದ ಆದೇಶ ಮೀರಿ ಹೋಗಬಾರದು ಎಂದು ಎನಿಸಿದೆ. ಅತಂತ್ರವಾದ ಕಾಂಗ್ರೆಸ್ ಸರ್ಕಾರ ಏನು ಬೇಕಾದರೂ ಆಗಬಹುದು. ಉಪಚುನಾವಣೆ ಬಳಿಕ ಸರ್ಕಾರ ಇರುತ್ತಾ, ಇರಲ್ವಾ ಎಂದು ಗೊತ್ತಿಲ್ಲ. ಸರ್ಕಾರ ಹಗರಣಗಳಲ್ಲಿ ನಲುಗುತ್ತಿದೆ. ಈ ಸಂದರ್ಭದಲ್ಲಿ ಈ ಚುನಾವಣೆ ಗೆಲ್ಲಬೇಕು ಎನ್ನುವ ಹಠ ಮೈತ್ರಿ ಪಕ್ಷದಲ್ಲಿದೆ. ಹಾಗಾಗಿ ಎರಡೂ ಪಕ್ಷದ ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡಬೇಕು ಎಂದು ತಿಳಿಸಿದರು. ಇದನ್ನೂ ಓದಿ: MUDA Scam | ಸಿಎಂ ಸಿದ್ದರಾಮಯ್ಯಗೆ ಮಧ್ಯಂತರ ರಿಲೀಫ್ –‌ ಸೆ.9ಕ್ಕೆ ಮತ್ತೆ ವಿಚಾರಣೆ ಮುಂದೂಡಿಕೆ!

ಇನ್ನೂ ಚನ್ನಪಟ್ಟಣ ಕ್ಷೇತ್ರವನ್ನು ಜೆಡಿಎಸ್ ಉಳಿಸಿಕೊಂಡರೆ ಸಿಪಿವೈ ಮುಂದಿನ ನಡೆ ವಿಚಾರದ ಕುರಿತು ಮಾತನಾಡಿದ ಅವರು, ನಾನು ಪಕ್ಷದ ಜೊತೆ ನಿಲ್ಲಬೇಕು ಎಂದು ತೀರ್ಮಾನ ಮಾಡಿದ್ದೇನೆ. ನಾನು ಸ್ಪರ್ಧೆ ಮಾಡಬೇಕು ಅನ್ನೋದು ಕಾರ್ಯಕರ್ತರ ಒತ್ತಾಯ. ಇಷ್ಟು ವರ್ಷ ಪಕ್ಷದ ಜೊತೆ ಕೆಲಸ ಮಾಡಿದ್ದೇನೆ. ಸಾಕಷ್ಟು ಏಳು-ಬೀಳು ಕಂಡಿದ್ದೇನೆ. ಹಾಗಾಗಿ ಪಕ್ಷದ ಜೊತೆ ಹೋಗೋದು ಒಳ್ಳೆಯದು ಎಂಬುದು ಹಿತೈಷಿಗಳ ಭಾವನೆ. ಕುಮಾರಸ್ವಾಮಿ ಅವರೇ ಜೆಡಿಎಸ್‌ಗೆ ಟಿಕೆಟ್ ತೆಗೆದುಕೊಂಡರೆ ನಾನು ಕೆಲಸ ಮಾಡುತ್ತೇನೆ. ನಾನು ಹಾಗೂ ನಮ್ಮ ಕಾರ್ಯಕರ್ತರು ಅವರ ಪರವಾಗಿ ಕೆಲಸ ಮಾಡುತ್ತೇವೆ. ವರಿಷ್ಠರು ಯಾವುದೇ ತೀರ್ಮಾನ ತೆಗೆದುಕೊಂಡರೂ ಅದಕ್ಕೆ ನಾನು ಬದ್ಧ. ಮುಂದೆ ಅವಕಾಶ ಬರುತ್ತಿರುತ್ತದೆ, ಕಾದು ನೋಡೊಣ ಎಂದರು. ಇದನ್ನೂ ಓದಿ: ಎಕ್ಸ್‌ಪ್ರೆಸ್‌ ವೇಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಸರ್ವಿಸ್ ರಸ್ತೆಗೆ ಉರುಳಿದ ಕಾರು

TAGGED:ChannapatnaCP Yogeshwarhd kumaraswamyjdsramanagaraಚನ್ನಪಟ್ಟಣಜೆಡಿಎಸ್ರಾಮನಗರಸಿಪಿ ಯೋಗೇಶ್ವರ್ಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

crocodile
Crime

ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿ ಮೇಲೆ ಮೊಸಳೆ ದಾಳಿ – ಗಂಭೀರ ಗಾಯ

Public TV
By Public TV
4 minutes ago
Mission Drishti launched its the worlds 1st OptoSAR satellite Why is it a headache for Pakistan and China
Karnataka

ಬೆಂಗಳೂರಿನ ಗ್ಯಾಲಕ್ಸ್ ಐ ಅಭಿವೃದ್ಧಿ ಪಡಿಸಿದ ವಿಶ್ವದ ಮೊದಲ OptoSAR ಉಪಗ್ರಹ ಉಡಾವಣೆ ಯಶಸ್ವಿ – ಪಾಕಿಸ್ತಾನ, ಚೀನಾಗೆ ತಲೆನೋವು ಯಾಕೆ?

Public TV
By Public TV
12 minutes ago
Kyle Jamieson Vaibhav Suryavanshi
Cricket

IPL 2026 | ವೈಭವ್‌ ಅಬ್ಬರಕ್ಕೆ ಹೆದರಿದ್ದೆ – ಕೈಲ್ ಜೇಮಿಸನ್

Public TV
By Public TV
15 minutes ago
pune rape case
Belgaum

4 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಬರ್ಬರ ಹತ್ಯೆಗೈದ ವೃದ್ಧ

Public TV
By Public TV
16 minutes ago
Ramanagara Farmer Death copy
Districts

ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೇ ಸಾವು

Public TV
By Public TV
45 minutes ago
Two sons die in family dispute Mother attempts suicide after poisoning children
Bengaluru City

ಕೌಟುಂಬಿಕ ಕಲಹಕ್ಕೆ ಎರಡು ಕಂದಮ್ಮಗಳು ಬಲಿ: ಮಕ್ಕಳಿಗೆ ವಿಷವಿಕ್ಕಿ ತಾಯಿಯೂ ಆತ್ಮಹತ್ಯೆಗೆ ಯತ್ನ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?