ಲಕ್ನೋ: ಭಾರತೀಯ ಸೇನೆಗೆ ಪ್ರಧಾನಿ ಮೋದಿ ಮೊದಲೇ ಅಧಿಕಾರವನ್ನು ನೀಡಬಹುದಿತ್ತು ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದ ಬಗ್ಗೆ ಅವರು ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.
ಜೈಷ್ ಭಯೋತ್ಪಾದಕರ ವಿರುದ್ಧ ಪಾಕ್ ಆಕ್ರಮಿತ ಕಾಶ್ಮೀರಗೆ ಪ್ರವೇಶಿಸುವ ಮೂಲಕ ವಾಯುಪಡೆಯ ಕೆಚ್ಚೆದೆಯ ಯೋಧರ ಧೈರ್ಯವನ್ನು ನಾನು ಸನ್ಮಾನಿಸುತ್ತೇನೆ ಹಾಗೂ ಗೌರವಿಸುತ್ತೇನೆ. ಸೇನೆಗೆ ನೀಡಿದ್ದ ಅಧಿಕಾರವನ್ನು ಮೋದಿ ಮೊದಲೇ ನೀಡಿದ್ದರೆ ಚೆನ್ನಾಗಿರುತಿತ್ತು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Advertisement
जैश आतंकियों आदि के खिलाफ पीओके में घुसकर भारतीय वायुसेना के बहादुर जाँबाज़ों की साहसिक कार्रवाई को सलाम व सम्मान। काश हमारी सेना को फ्री हैण्ड बीजेपी की सरकार पहले दे देती तो बेहतर होता।
— Mayawati (@Mayawati) February 26, 2019
Advertisement
ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಈ ದಾಳಿಯಲ್ಲಿ ಸುಮಾರು 200-300 ಉಗ್ರರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗುತ್ತಿದೆ. ಮೊದಲಿಗೆ ಮುಂಜಾನೆ 3.45ರ ಸುಮಾರಿಗೆ ಬಾಲ್‍ಕೋಟ್ ಮೇಲೆ ದಾಳಿ ಮಾಡಿದೆ. ಬಳಿಕ ಮುಂಜಾನೆ 3.48ಕ್ಕೆ ಮುಜಾಫರ್ ಬಾದ್ ಮೇಲೆ ದಾಳಿ ಮಾಡಲಾಗಿದೆ. ಕೊನೆಗೆ ಮುಂಜಾನೆ 3.58ಕ್ಕೆ ಚಕೋಟಿ ಉಗ್ರರ ತರಬೇತಿ ಕೇಂದ್ರಗಳ ಮೇಲೆ ಭಾರತೀಯ ವಾಯುಸೇನೆ ದಾಳಿ ಮಾಡಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv