ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸುವ ಆಸೆ ಇದೆ. ಕ್ಷೇತ್ರದ ಜನರು ಕೂಡ ಸ್ಪರ್ಧಿಸುವಂತೆ ಒತ್ತಾಯ ಮಾಡುತ್ತಿದ್ದಾರೆ ಎಂದು ಜೆಡಿಎಸ್ ನಾಯಕಿ ಅನಿತಾ ಕುಮಾರಸ್ವಾಮಿ ಅವರು ಪಬ್ಲಿಕ್ ಟಿವಿ ಎಕ್ಸ್ ಕ್ಲೂಸೀವ್ ಸಂದರ್ಶನದಲ್ಲಿ ಹೇಳಿದ್ದಾರೆ.
ಕಳೆದ ಬಾರಿ ಇದೇ ಕ್ಷೇತ್ರದಿಂದ ಕಡಿಮೆ ಅಂತರದಿಂದ ಸೋತಿದ್ದೆ. ಹಾಗಾಗಿ ಈ ಬಾರಿ ನೀವು ನಿಲ್ಲಬೇಕು ಅಂತಾ ಅಲ್ಲಿನ ಜನರ ಒತ್ತಾಯವಿದ್ದು, ನನಗೂ ಅಲ್ಲಿಂದಲೇ ಸ್ಪರ್ಧಿಸುವ ಆಸೆ ಇದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ಆಭ್ಯರ್ಥಿಗಳು ಇಲ್ಲ. ನನ್ನ ಬೆಂಬಲಕ್ಕೆ ನಿಂತಿರುವ ಕಾರ್ಯಕರ್ತರ ಹಿತಕ್ಕಾಗಿಯಾದ್ರು ನಾನು ಸ್ಪರ್ಧೆ ಮಾಡ್ತೀನಿ. ಇದರ ಬಗ್ಗೆ ಅಂತಿಮವಾಗಿ ನಮ್ಮ ರಾಷ್ಟ್ರೀಯ ಅಧ್ಯಕ್ಷರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.
Advertisement
Advertisement
ಈ ಕುರಿತು ಪ್ರತಿಕ್ರಿಯಿಸಿರುವ ಪತಿ, ಮಾಜಿ ಸಿಎಂ ಕುಮಾರಸ್ವಾಮಿ, ಚನ್ನಪಟ್ಟಣದಲ್ಲಿ ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋತಿದ್ದರು. ಕ್ಷೇತ್ರದ ಜನರು ಮತ್ತು ಕಾರ್ಯಕರ್ತರು ನೀವೇ ಸ್ಪರ್ಧೆ ಮಾಡಿ ಅಂತಾ ಒತ್ತಾಯಿಸುತ್ತಿದ್ದಾರೆ. ಇಷ್ಟಾದ್ರೂ ಅನಿತಾ ಸ್ಪರ್ಧೆ ಬಗ್ಗೆ ಸದ್ಯಕ್ಕೆ ಯಾವುದೇ ನಿರ್ಧಾರ ಮಾಡಿಲ್ಲ ಅಂದ್ರು. ಪ್ರಜ್ವಲ್ ಚುನಾವಣೆಗೆ ಸ್ಪರ್ಧಿಸುವ ಆಸೆಯನ್ನು ಹೊಂದಿದ್ದು, ದೇವೇಗೌಡುರು ಸದ್ಯಕ್ಕೆ ಬೇಡ. ಮುಂದೆ ನೋಡೋಣ ಎಂದಿದ್ದಾರೆ. ಪ್ರಜ್ವಲ್‍ಗೆ ಇನ್ನೂ ಮೆಚ್ಯೂರಿಟಿ ಸಮಸ್ಯೆ, ಮುಂದೆ ಕಲಿತುಕೊಳ್ತಾನೆ. ಮಾತನಾಡುವ ಭರಾಟೆಯಲ್ಲಿ ಹಾಗೆಲ್ಲ ಮಾತನಾಡುತ್ತಾನೆ. ಮುಂದೆ ಅದನ್ನು ಕಲಿತುಕೊಳ್ಳುತ್ತಾನೆ ಎಂದು ಹೇಳಿದರು.
Advertisement
ದೀಪಾವಳಿ ಹಬ್ಬದ ಪ್ರಯುಕ್ತ ಪಬ್ಲಿಕ್ ಟಿವಿ ಗೆ ಎಚ್.ಡಿ. ಕುಮಾರಸ್ವಾಮಿ ಮತ್ತು ಪತ್ನಿ ಅನಿತಾ ಕುಮಾರಸ್ವಾಮಿ ಅವರು ವಿಶೇಷ ಸಂದರ್ಶನ ನೀಡಿದ್ದಾರೆ. ಇಂದು ರಾತ್ರಿ 8 ಗಂಟೆಗೆ ಪ್ರಸಾರವಾಗುವ `ಜೋಡಿ ದೀಪ’ ಕಾರ್ಯಕ್ರಮವನ್ನು ವೀಕ್ಷಿಸಿ.
Advertisement