ವಿಜಯಪುರ: ಅಥಣಿ ಶಾಸಕ ಮಹೇಶ್ ಕುಮಟಳ್ಳಿಗೆ (Mahesh Kumathalli) ಟಿಕೆಟ್ ನೀಡಬೇಕು. ಇಲ್ಲದೇ ಹೋದರೆ ನಾನು ಕೂಡಾ ಗೋಕಾಕ್‌ನಿಂದ ಸ್ಪರ್ಧಿಸುವುದಿಲ್ಲ ಎಂದು ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಸ್ನೇಹಿತನ ಪರ ಬ್ಯಾಟ್ ಬೀಸಿ ಹೊಸ ಬಾಂಬ್ ಸಿಡಿಸಿದ್ದಾರೆ.
ವಿಜಯಪುರದಲ್ಲಿ (Vijayapura) ಮಾತನಾಡಿದ ರಮೇಶ್ ಜಾರಕಿಹೊಳಿ, ಬೆಳಗಾವಿಯಲ್ಲಿ 13 ಸ್ಥಾನಗಳಲ್ಲಿ ಬಿಜೆಪಿ ಗೆದ್ದಿದೆ. ಈ ಬಾರಿ ಇನ್ನೂ 2 ಸ್ಥಾನ ಹೆಚ್ಚಿಗೆ ಗೆಲ್ಲಿಸುವ ಪ್ರಯತ್ನ ಮಾಡುತ್ತೇವೆ ಎಂದರು. ಇದನ್ನೂ ಓದಿ: ದಶಪಥ ಹೆದ್ದಾರಿ ಶ್ರೇಯಸ್ಸು ಒಬ್ಬರಿಗೆ ಸಲ್ಲಬೇಕು: ಜಾಣ್ಮೆಯ ಉತ್ತರ ನೀಡಿದ ಪ್ರತಾಪ್ ಸಿಂಹ
ಸಚಿವ ನಾರಾಯಣಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಮುಳುಗುವ ಹಡಗು. ಈಗ ಹೋಗಿ ಏನು ಮಾಡುವುದು? ಬಿಜೆಪಿ ತತ್ವ ಸಿದ್ಧಾಂತ ನಂಬಿ ಕಾಂಗ್ರೆಸ್ ಬಿಟ್ಟು ಬಂದಿದ್ದೇನೆ. ಇನ್ನು ಬಿಜೆಪಿ ದೊಡ್ಡ ಪ್ರವಾಹ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿಯನ್ನು ಕೊಂಡಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ಶಾಸಕ ಕೆ.ಜಿ ಬೋಪಯ್ಯ ವಿರುದ್ಧ ದೂರು ದಾಖಲು