ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ವೇಗವಾಗಿ ಬೆಳೆಯುತ್ತಿದೆ. ಇದರಿಂದಾಗಿ ಹಲವಾರು ಸಮಸ್ಯೆಗಳು ಉದ್ಭವಿಸುತ್ತಿವೆ. ಈ ಸಮಸ್ಯೆಗಳು ಬೃಹದಾಕಾರವಾಗಿ ಬೆಳಯುವ ಮೊದಲು ನಾವೆಲ್ಲರೂ ಸೇರಿ ಅದನ್ನು ಸರಿಪಡಿಸಬೇಕಾಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (D K Shivakumar) ತಿಳಿಸಿದ್ದಾರೆ.
ಬೆಂಗಳೂರಲ್ಲಿ ನಡೆಯುತ್ತಿರುವ 27ನೇ ಆವೃತ್ತಿಯ ಬೆಂಗಳೂರು ಟೆಕ್ ಸಮ್ಮಿಟ್ (Bengaluru Tech Summit) ಉದ್ಘಾಟನೆ ಮಾಡಿ ಮಾತನಾಡಿದ ಅವರು, ಬೆಂಗಳೂರು ವೇಗವಾಗಿ ಬೆಳೆಯುತ್ತಿದೆ. ಇದರಿಂದ ಅನೇಕ ಸಮಸ್ಯೆಗಳು ಉದ್ಭವ ಆಗುತ್ತಿವೆ. ಬೆಂಗಳೂರು ಉಸ್ತುವಾರಿ ಹೊತ್ತಿರುವ ನಾನು ಈ ಸಮಸ್ಯೆಗಳನ್ನು ಸರಿಪಡಿಸುವ ತನಕ ವಿರಮಿಸುವುದಿಲ್ಲ ಎಂದು ಭರವಸೆ ನೀಡಿದರು. ಇದನ್ನೂ ಓದಿ: ವಕ್ಫ್ ವಿರುದ್ಧ ಬಿಜೆಪಿ ಹೋರಾಟಕ್ಕೆ ಮುಹೂರ್ತ; ನ.21, 22ರಂದು ರಾಜ್ಯಾದ್ಯಂತ ಪ್ರತಿಭಟನೆ: ಅಶ್ವಥ್ ನಾರಾಯಣ್
Advertisement
Advertisement
ನಾವು ಅಧಿಕಾರಕ್ಕೆ ಬಂದ ಕಡಿಮೆ ಅವಧಿಯಲ್ಲಿಯೇ ಬೆಂಗಳೂರಿನ (Bengaluru) ಅಭಿವೃದ್ದಿಗೆ ಅನೇಕ ಬೃಹತ್ ಯೋಜನೆಗಳನ್ನು ಪ್ರಾರಂಭಿಸಿದ್ದೇವೆ. ಸುರಂಗ ರಸ್ತೆ ಯೋಜನೆ ಹಾಗೂ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬೆಂಗಳೂರು ಬಿಜಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ ನೀಡಿದ್ದೇವೆ. ಮುಂದಿನ 6 ತಿಂಗಳಲ್ಲಿ ಕಾಮಗಾರಿ ಆರಂಭವಾಗಲಿದೆ. ಈ ಯೋಜನೆಯಿಂದ ನಗರದ ಸಂಚಾರ ದಟ್ಟಣೆಗೆ ಪರಿಹಾರ ದೊರೆಯಲಿದೆ. ಸುರಂಗ ರಸ್ತೆ ಯೋಜನೆಗೆ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿದೆ. ಆದಷ್ಟು ಬೇಗ ಈ ಕನಸನ್ನು ನನಸು ಮಾಡಲಾಗುವುದು ಎಂದರು. ಇದನ್ನೂ ಓದಿ: ಕರ್ನಾಟಕ ದೇಶದ ತಂತ್ರಜ್ಞಾನ ವಲಯದ ಹೃದಯ ಬಡಿತ: ಡಿಕೆಶಿ
Advertisement
Advertisement
ಹಲವಾರು ಯೋಜನೆಗಳ ಮೂಲಕ ಬೆಂಗಳೂರನ್ನು ಭವಿಷ್ಯದಲ್ಲಿ ವ್ಯಾಪಾರಿ, ನಾಗರಿಕ ಸ್ನೇಹಿ, ವಾಸಿಯಾಗಿಸಲು ಯೋಗ್ಯವಾದ ನಗರವನ್ನಾಗಿ ಮಾಡಲು ನಮ್ಮ ಕರ್ನಾಟಕ ಸರ್ಕಾರ ಬದ್ಧವಾಗಿದೆ. ಬೆಂಗಳೂರು ಟೆಕ್ ಸಮ್ಮಿಟ್ ವಿಶ್ವದ ಅತ್ಯಂತ ಮಹತ್ವದ ಟೆಕ್ ಸಮ್ಮಿಟ್‌ಗಳಲ್ಲಿ ಒಂದು. ಎಲ್ಲಾ ಸರ್ಕಾರಗಳು, ಐಟಿ ಉದ್ಯಮ, ಅಧಿಕಾರಿಗಳು, ರಾಜಕೀಯ ಮುಖಂಡರು ಈ ಕಾರ್ಯಕ್ರಮ ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆಯಲು ಶ್ರಮಪಟ್ಟಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಕೊಡ್ತೀವಿ: ಸಚಿವ ಕೆ.ಜೆ.ಜಾರ್ಜ್