ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಮದುವೆ ವಿಚಾರದಲ್ಲಿ ಮತ್ತೆ ಸುದ್ದಿಯಲ್ಲಿದ್ದಾರೆ. ಲೈಫ್ ಪಾರ್ಟ್ನರ್ (Life Partner) ಕುರಿತು ಕೇಳಿದ ಪ್ರಶ್ನೆಗೆ ರಾಹುಲ್ ಪ್ರತಿಕ್ರಿಯೆ ಕೂಡ ನೀಡಿದ್ದಾರೆ.
ನನ್ನ ಬಾಳ ಸಂಗಾತಿಯಾಗುವವರಿಗೆ ತಾಯಿ ಸೋನಿಯಾ ಗಾಂಧಿ (Sonia Gandhi) ಮತ್ತು ಅಜ್ಜಿ ಇಂದಿರಾ ಗಾಂಧಿ (Indira Gandhi) ಇಬ್ಬರ ಗುಣಗಳು ಇರಬೇಕು. ಅಂತಹ ಸಂಗಾತಿಯೊಂದಿಗೆ ಜೀವನ ನಡೆಸಲು ನಾನು ಬಯಸುತ್ತೇನೆ ಎಂದು ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಮೋದಿ ಧರಿಸಿದ್ದ ಖಾಸಿ ಉಡುಗೆ ಬಗ್ಗೆ ವ್ಯಂಗ್ಯ – ಕೀರ್ತಿ ಆಜಾದ್ ವಿರುದ್ಧ ಎಫ್ಐಆರ್
ಇದೇ ವೇಳೆ ಅಜ್ಜಿ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಸ್ಮರಿಸಿರುವ ರಾಹುಲ್ ಗಾಂಧಿ, ಅವರು ನನ್ನ ಜೀವನದ ಪ್ರೀತಿ ಮತ್ತು ನನ್ನ ಎರಡನೇ ತಾಯಿ ಎಂದು ತಿಳಿಸಿದ್ದಾರೆ.
ಅನೇಕ ಹೆಸರುಗಳಿಂದ ತಮ್ಮನ್ನು ನಿಂದಿಸುವವರ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕ, ಅದರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಅವರು ಏನು ಹೇಳಿದರೂ ಪರವಾಗಿಲ್ಲ. ನಾನು ಯಾರನ್ನೂ ದ್ವೇಷಿಸುವುದಿಲ್ಲ. ನನ್ನನ್ನು ನಿಂದಿಸಿದರೂ, ಹೊಡೆದರೂ ನಾನು ಯಾರನ್ನೂ ದ್ವೇಷಿಸುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಆಸ್ಪತ್ರೆ ಸೇರಿರೋ ಪ್ರಧಾನಿ ತಾಯಿ – ನಿಮ್ಮೊಂದಿಗೆ ನಾನಿದ್ದೇನೆ ಎಂದು ಮೋದಿಗೆ ರಾಹುಲ್ ಗಾಂಧಿ ಅಭಯ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ನೇತೃತ್ವದಲ್ಲಿ ʼಭಾರತ್ ಜೋಡೋ ಯಾತ್ರೆʼ (Bharat Jodo Yatra) ನಡೆಸುತ್ತಿದ್ದಾರೆ. ಪಾದಯಾತ್ರೆಯು ಸದ್ಯ ದೆಹಲಿ ತಲುಪಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಈ ಪಾದಯಾತ್ರೆ ಕೈಗೊಳ್ಳಲಾಗಿದೆ.