ತಿರುವನಂತಪುರಂ: ಪುಲ್ವಾಮಾ ದಾಳಿಗೆ ಭಾರತೀಯ ವಾಯು ಪಡೆ ಹಾಗೂ ಕೇಂದ್ರ ಸರ್ಕಾರ ಪ್ರತ್ಯುತ್ತರ ನೀಡಿದ್ದಕ್ಕೆ ಸೋಮವಾರ ದೇಶದಲ್ಲಿ ಸಂಭ್ರಮ ಮನೆ ಮಾಡಿತ್ತು. ಆದರೆ ಕೇರಳದ ಸಿಪಿಐ(ಎಂ) ಮುಖಂಡರೊಬ್ಬರು ಲೋಕಸಭಾ ಚುನಾವಣೆಗೆ ಹೆದರಿರುವ ಬಿಜೆಪಿಯು ಯುದ್ಧದ ವಾತಾವರಣ ಸೃಷ್ಟಿಸುತ್ತಿದೆ ಎಂದು ಹೇಳಿಕೆ ನೀಡುವ ಮೂಲಕ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ಸಿಪಿಐಎಂ ಪಕ್ಷದಿಂದ ಇಡುಕ್ಕಿ ಜಿಲ್ಲೆಯ ನೆಡುಂಕಂಡಂನಲ್ಲಿ ಸಮಾವೇಶ ಆಯೋಜಿಸಲಾಗಿತ್ತು. ಈ ವೇಳೆ ಸಿಪಿಐಎಂ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಅವರು ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲುತ್ತೇವೆ ಎನ್ನುವ ಭಯ ಬಿಜೆಪಿಯಲ್ಲಿದೆ. ಹೀಗಾಗಿ ಯುದ್ಧದ ಮೂಲಕ ಮತದಾರರನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.
Advertisement
CPI(M) leader Kodiyeri Balakrishnan at an event in Kerala yesterday: Before declaring Lok Sabha poll dates,RSS is aiming at creating war-like situation & sabotaging polls. BJP has foreseen their loss in the Lok Sabha polls, trying to sabotage polls & impose emergency. pic.twitter.com/YmIHKdstuo
— ANI (@ANI) February 27, 2019
Advertisement
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕಾಶ್ಮೀರ ಜನತೆಯನ್ನು ದೇಶ ವಿರೋಧಿಗಳನ್ನಾಗಿ ಮಾಡುತ್ತಿದೆ. ಬಿಜೆಪಿಯವರು ದೇಶದ ಮುಸ್ಲಿಮರ ವಿರುದ್ಧ ದ್ವೇಷ ಸೃಷ್ಟಿಸುತ್ತಿದ್ದಾರೆ. ದೇಶದಲ್ಲಿ ಕೋಮುಗಲಭೆ ಹೆಚ್ಚಿಸುವುದು ಆರ್‍ಎಸ್‍ಎಸ್ ಉದ್ದೇಶವಾಗಿದೆ ಎಂದು ಆರೋಪಿಸಿದ್ದಾರೆ.
Advertisement
ಕೊಡಿಯೇರಿ ಬಾಲಕೃಷ್ಣನ್ ಅವರ ಹೇಳಿಕೆಯನ್ನು ದೇಶದ ಅನೇಕ ನಾಯಕರು ಖಂಡಿಸಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕೂಡ ಬಾಲಕೃಷ್ಣನ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
Advertisement
CPI(M) leader Kodiyeri Balakrishnan on IAF strike in Balakot,y'day:BJP is trying to lead this problem into war&use it to propagate hatred against Pakistan. They're also trying to create hatred against Muslims in the country. RSS aims to create communal polarisation in the country pic.twitter.com/DF9EsLYy1t
— ANI (@ANI) February 27, 2019
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv