ನವದೆಹಲಿ: ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (Line Of Control) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ.
ಮೊದಲಿಗೆ ಮುಂಜಾನೆ 3.45ರ ಸುಮಾರಿಗೆ ಬಾಲ್‍ಕೋಟ್ ಮೇಲೆ ದಾಳಿ ಮಾಡಿದೆ. ಬಳಿಕ ಮುಂಜಾನೆ 3.48ಕ್ಕೆ ಮುಜಾಫರ್ ಬಾದ್ ಮೇಲೆ ದಾಳಿ ಮಾಡಲಾಗಿದೆ. ಕೊನೆಗೆ ಮುಂಜಾನೆ 3.58ಕ್ಕೆ ಚಕೋಟಿ ಉಗ್ರರ ತರಬೇತಿ ಕೇಂದ್ರಗಳ ಮೇಲೆ ಭಾರತೀಯ ವಾಯುಸೇನೆ ದಾಳಿ ಮಾಡಿದೆ. ಇದನ್ನೂ ಓದಿ:ಏರ್ ಸರ್ಜಿಕಲ್ ಸ್ಟ್ರೈಕ್-ಪಾಕ್ ಉಗ್ರ ನೆಲೆಯ ಮೇಲೆ ಸಾವಿರ ಕೆಜಿಯ ಬಾಂಬ್ ಸಿಡಿಸಿದ ಐಎಎಫ್
Advertisement
Payload of hastily escaping Indian aircrafts fell in open. pic.twitter.com/8drYtNGMsm
— DG ISPR (@OfficialDGISPR) February 26, 2019
Advertisement
ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್‍ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ ಶಿಬಿರದ ಮೇಲೆ 100 ಕೆಜಿಯ 10 ಬಾಂಬ್ ಸಿಡಿಸಲಾಗಿದ್ದು, ಉಗ್ರರ ತಾಣದ 500 ಮೀ. ವ್ಯಾಪ್ತಿ ಧ್ವಂಸಗೊಂಡಿದೆ.
Advertisement
ಈಗಾಗಲೇ ದಾಳಿಯ ಬಗ್ಗೆ ಪ್ರಧಾನಿಗಳಿಗೆ ಎನ್‍ಎಸ್‍ಎ ಮುಖ್ಯಸ್ಥ ಅಜಿತ್ ಧೋವಲ್ ವಿವರಣೆ ನೀಡಿದ್ದಾರೆ. ದಾಳಿಯ ಬಳಿಕ ಭಾರತದ ಮುಂದಿನ ನಡೆ ಹೇಗಿರಬೇಕು ಎಂಬುದನ್ನು ಮೋದಿ ಅವರು ಅಜಿತ್ ಧೋವಲ್ ಅವರೊಂದಿಗೆ ಚರ್ಚೆಯಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.
Advertisement
???????? I salute the pilots of the IAF. ????????
— Rahul Gandhi (@RahulGandhi) February 26, 2019
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv