ಬೆಂಗಳೂರು: ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ಏಕೈಕ ಸೇನಾಧಿಕಾರಿ, ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ತೀವ್ರ ಗಾಯಗಳೊಂದಿಗೆ ವೆಲ್ಲಿಂಗ್ಟನ್‍ನ ಸೇನಾಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾರೆ. ಇದೀಗ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗುತ್ತಿದೆ.
Advertisement
ನಿನ್ನೆ ನಡೆದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸೇನಾ ದಂಡನಾಯಕರಾದ ಬಿಪಿನ್ ರಾವತ್ ಸೇರಿ 13 ಮಂದಿ ಮೃತಪಟ್ಟಿದ್ದರು. ಆದರೆ ಇದೇ ತಂಡದಲ್ಲಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ತೀವ್ರ ಗಾಯಗೊಂಡು ವೆಲ್ಲಿಂಗ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವರುಣ್ ಸಿಂಗ್ 95% ಕ್ಕೂ ಹೆಚ್ಚು ಸುಟ್ಟ ಗಾಯಗಳೊಂದಿಗೆ ಸದ್ಯ ವೆಂಟಿಲೇಟರ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವರುಣ್ ಸಿಂಗ್ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ. ಆದರೂ ಅವರ ಆರೋಗ್ಯ ಸ್ಥಿರವಾಗಿದೆ. ಅವರನ್ನು ಪಾಡಿಕೊಳ್ಳಲು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಅಗತ್ಯಬಿದ್ದರೇ ಹೆಚ್ಚಿನ ಚಿಕಿತ್ಸೆಗಾಗಿ ವರುಣ್ ಸಿಂಗ್‍ರನ್ನು ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ಏರ್‌ಲಿಫ್ಟ್ ಮಾಡಲು ಕೂಡ ಸೇನೆ ಚಿಂತನೆ ನಡೆಸಿದೆ ಎಂದು ಸಂಸತ್ತಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಹಿತಿ ಹಂಚಿಕೊಂಡಿದ್ದರು. ಇದೀಗ ವರುಣ್ ಸಿಂಗ್ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಏರ್‌ಲಿಫ್ಟ್ ಮೂಲಕ ಕರೆತರಲಾಗುತ್ತಿದೆ. ಇದನ್ನೂ ಓದಿ: ಹೆಲಿಕಾಪ್ಟರ್ ದುರಂತದಲ್ಲಿ ಮಡಿದವರ ಪಾರ್ಥಿವ ಶರೀರ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತ!
Advertisement
Advertisement
ವರುಣ್ ಸಿಂಗ್ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ವರುಣ್ ಸಿಂಗ್ ಅವರ ಪಕ್ಕದ ಮನೆಯಲ್ಲೇ ವಾಸವಾಗಿರುವ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಇಶಾನ್, ಘಟನೆ ನಡೆದಾಗ ವರುಣ್ ಸಿಂಗ್ ತಂದೆ ಕೆ.ಪಿ.ಸಿಂಗ್ ಮತ್ತು ಅವರ ಪತ್ನಿ ಇಬ್ಬರೂ ಮುಂಬೈನಲ್ಲಿ ತಮ್ಮ ಕಿರಿಯ ಮಗ ತನುಜ್ ಮನೆಯಲ್ಲಿ ಇದ್ದರು. ತನುಜ್ ಕೂಡ ಭಾರತೀಯ ನೌಕಾಪಡೆಯಲ್ಲಿ ಲೆಫ್ಟಿನೆಂಟ್ ಕಮಾಂಡರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ನಾನು ದೂರವಾಣಿ ಮೂಲಕ ಕೆ.ಪಿ.ಸಿಂಗ್ ಬಳಿ ಮಾತನಾಡಿದ್ದೇನೆ. ಕೆ.ಪಿ.ಸಿಂಗ್ ಅವರಿಗೆ ವರುಣ್ ಸಿಂಗ್ ಬಗ್ಗೆ ಹೆಮ್ಮೆಯಿದೆ. ಆತ ಫೈಟರ್, ಜೀವನ್ಮರಣದ ಹೋರಾಟದಲ್ಲೂ ಗೆದ್ದು ಬರುತ್ತಾನೆ ಎಂಬ ನಂಬಿಕೆಯಿದೆ ಎಂದು ಅವರು ನನ್ನ ಬಳಿ ಹೇಳಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಕೆ.ಪಿ. ಸಿಂಗ್ ಕೂಡ ನಿವೃತ್ತ ಕರ್ನಲ್ ಆಗಿದ್ದು ತಮ್ಮ ಮಗ ಮತ್ತೆ ಬರುತ್ತಾನೆ ಎಂಬ ನಂಬಿಕೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 2015ರಲ್ಲಿ ಹೆಲಿಕಾಪ್ಟರ್ ಪತನಗೊಂಡಾಗ ಪಾರಾಗಿದ್ದರು ಬಿಪಿನ್ ರಾವತ್
Advertisement
ಶೌರ್ಯ ಚಕ್ರ
14 ಮಂದಿಯಲ್ಲಿ ಬದುಕುಳಿದ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರಿಗೆ ಈ ವರ್ಷದ ಸ್ವಾತಂತ್ರ್ಯ ದಿನದಂದು 2020 ರಲ್ಲಿ ವೈಮಾನಿಕ ತುರ್ತು ಪರಿಸ್ಥಿಸಿ ಸಂದರ್ಭದಲ್ಲಿ ಎಲ್‍ಸಿಎ ತೇಜಸ್ ಯುದ್ಧ ವಿಮಾನವನ್ನು ಸಮರ್ಥವಾಗಿ ಲ್ಯಾಂಡಿಂಗ್ ಮಾಡಿ ಅದರಲ್ಲಿದ್ದ ಯೋಧರ ಪ್ರಾಣ ಉಳಿಸಿದಕ್ಕಾಗಿ ಶೌರ್ಯ ಚಕ್ರವನ್ನು ನೀಡಿ ಗೌರವಿಸಲಾಗಿತ್ತು. ಲೈಟ್ ಕಾಂಬ್ಯಾಟ್ ಏರ್‍ಕ್ರಾಫ್ಟ್ ಸ್ಕ್ವಾಡ್ರನ್‍ನಲ್ಲಿ ಪೈಲಟ್ ಆಗಿದ್ದ ವಿಂಗ್ ಕಮಾಂಡರ್ ವರುಣ್ ಸಿಂಗ್, ಅವರ ಅಸಾಧಾರಣ ಶೌರ್ಯಕ್ಕಾಗಿ ಭಾರತದ ಮೂರನೇ ಅತ್ಯುನ್ನತ ಶೌರ್ಯ ಪ್ರಶಸ್ತಿಯನ್ನು ಈ ವರ್ಷದ ಆಗಸ್ಟ್ 15 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೀಡಿ ಗೌರವಿಸಿದ್ದರು. ಇದನ್ನೂ ಓದಿ: ಕೊನೆ ಕ್ಷಣದಲ್ಲಿ ಬಿಪಿನ್ ರಾವತ್ ಕುಡಿಯಲು ನೀರು ಕೇಳಿದ್ದರು- ಪ್ರತ್ಯಕ್ಷದರ್ಶಿ ಮಾತು