ನವದೆಹಲಿ: ಹಾರುವ ಶವಪೆಟ್ಟಿಗೆ ಎಂದೇ ಕುಖ್ಯಾತಿ ಪಡೆದಿರುವ ಮಿಗ್ ವಿಮಾನಗಳನ್ನು ಬಳಸದೇ ಇರಲು ವಾಯುಸೇನೆ (IAF) ನಿರ್ಧರಿಸಿದೆ.
ರಾಜಸ್ಥಾನದಲ್ಲಿ ನಡೆದ ಯುದ್ಧವಿಮಾನಗಳ ಪತನದ ಬಳಿಕ ಎಚ್ಚೆತ್ತ ಭಾರತೀಯ ವಾಯುಪಡೆ ಎಲ್ಲಾ ಮಿಗ್-21 ಯುದ್ಧ ವಿಮಾನಗಳನ್ನು (MiG-21Bison Aircraft) ತಪಾಸಣೆ ನಡೆಸುವವರೆಗೆ ಹಾರಾಟ ನಡೆಸದಿರಲು ತೀರ್ಮಾನಿಸಿದೆ. ಇದನ್ನೂ ಓದಿ: ಪಾಕಿಸ್ತಾನದ ಮೇಲೆ ಪರಾಕ್ರಮ ಮೆರೆದಿದ್ದ ಭಾರತದ ಮಿಗ್-21 ಫೈಟರ್ ಜೆಟ್ ಸೇನೆಯಿಂದ ನಿವೃತ್ತಿ
Advertisement
Advertisement
ಇದೇ ತಿಂಗಳ ಮೇ 8ರಂದು ರಾಜಸ್ಥಾನದ ಸೂರತ್‌ಗಢದ ವಾಯುನೆಲೆಯ ಮಿಗ್-21 ಬೈಸನ್ ಯುದ್ಧವಿಮಾನವು ಹನುಮಾನ್‌ಗಢದ ಹಳ್ಳಿಯೊಂದರಲ್ಲಿ ಪತನಗೊಂಡಿತ್ತು. ಈ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದರು. ಈ ಸಂಬಂಧ ತನಿಖೆ ನಡೆಸುತ್ತಿದ್ದು ಅಪಘಾತಕ್ಕೆ ನಿಖರ ಕಾರಣ ತಿಳಿಯುವವರೆಗೆ MiG-21 ಬೈಸನ್ ಎಲ್ಲಾ ಯುದ್ಧ ವಿಮಾನಗಳನ್ನು ಹಾರಾಟ ನಡೆಸದಂತೆ ಹಿರಿಯ ರಕ್ಷಣಾಧಿಕಾರಿಗಳು ಸೂಚಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದಿಂದ ಭಾರತಕ್ಕೆ ಡ್ರಗ್ಸ್ ಸಾಗಾಟ – ಎರಡು ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್
Advertisement
Advertisement
ಪ್ರಸ್ತುತ ಭಾರತೀಯ ವಾಯುಪಡೆಯಲ್ಲಿ ಮಿಗ್-21 ಬೈಸನ್ ರೂಪಾಂತರವನ್ನು ಒಳಗೊಂಡಂತೆ 31 ಯುದ್ಧ ವಿಮಾನ ಸ್ಕ್ವಾಡ್ರನ್‌ಗಳನ್ನು ಒಳಗೊಂಡಿದೆ. 1960ರಲ್ಲಿ ಮಿಗ್-21 ವಿಮಾನಗಳು ಭಾರತೀಯ ವಾಯುಪಡೆಗೆ ಸೇರ್ಪಡೆಯಾದವು. ಇವುಗಳ ಕಾರ್ಯಕ್ಷಮತೆ ಕಡಿಮೆ ಆಗುತ್ತಿದ್ದು 2025ರ ವೇಳೆಗೆ ಎಲ್ಲಾ ಮಿಗ್-21 ವಿಮಾನಗಳನ್ನ ಸೇನೆಯಿಂದ ಹಂತ-ಹಂತವಾಗಿ ತೆಗೆದುಹಾಕಲು ಯೋಜಿಸಿದೆ. ಅಂತಿಮವಾಗಿ 2025ರ ವೇಳೆ ಎಲ್ಲಾ ಮಿಗ್-21 ವಿಮಾನಗಳನ್ನು ಸೇನೆಯಿಂದ ಕೈಬಿಡಲು ನಿರ್ಧಾರ ಮಾಡಲಾಗಿದೆ.
ಹಾರುವ ಶವಪೆಟ್ಟಿಗೆ ಅನ್ನೋದೇಕೆ?
ರಷ್ಯಾದ ಮಿಕೋಯಾನ್ ಗುರೇವಿಚ್(ಮಿಗ್) 21 ಬೈಸನ್ 1959 ರಲ್ಲಿ ತಯಾರಾಗಿದ್ದು, 1963 ರಲ್ಲಿ ಮಿಗ್ 21 ವಿವಿಧ ಆವೃತ್ತಿಯ ಒಟ್ಟು 874 ವಿಮಾನಗಳು ಭಾರತದ ವಾಯುಸೇನೆಗೆ ಸೇರ್ಪಡೆಯಾಗಿತ್ತು. 1971 ರಲ್ಲಿ ಬಾಂಗ್ಲಾ ಕದನದ ವೇಳೆ ಪ್ರಮುಖ ಪಾತ್ರವಾಹಿಸಿದ್ದ ಮಿಗ್ ಪಾಕಿಸ್ತಾನ 9 ವಿಮಾನಗಳನ್ನು ಹೊಡೆದು ಹಾಕಿತ್ತು. ಉಳಿದ ಯುದ್ಧ ವಿಮಾನಗಳಿಗೆ ಹೋಲಿಸಿದರೆ ಈ ವಿಮಾನಗಳ ಸಾಮರ್ಥ್ಯ ಕಡಿಮೆ ಎಂದು ಗೊತ್ತಾದ ಬಳಿಕ 1990 ರಲ್ಲಿ ಇವುಗಳನ್ನು ಮೇಲ್ದರ್ಜೆಗೆ ಏರಿಸಲಾಗಿತ್ತು. ಸದ್ಯ ಭಾರತದಲ್ಲಿ 100ಕ್ಕೂ ಅಧಿಕ ಮಿಗ್ ವಿಮಾನಗಳು ಕಾರ್ಯಾಚರಣೆ ನಡೆಸುತ್ತಿವೆ. ಖರೀದಿಸಿದ ಪೈಕಿ 500ಕ್ಕೂ ಹೆಚ್ಚು ವಿಮಾನಗಳು ಪತನಗೊಂಡಿದೆ. ಹೀಗಾಗಿ ವಾಯುಪಡೆಯಲ್ಲಿ ಈ ವಿಮಾನಗಳು ಹಾರುವ ಶವಪೆಟ್ಟಿಗೆ ಎಂದೇ ಕುಖ್ಯಾತಿ ಪಡೆದಿವೆ.
2016 ರಲ್ಲಿ 110 ಮಿಗ್ 21 ಜೆಟ್ ವಿಮಾನಗಳನ್ನು ಮೇಲ್ದರ್ಜೆಗೆ ಏರಿಸಲಾಗಿತ್ತು. ಈ ಸಂದರ್ಭದಲ್ಲಿ ಮಲ್ಟಿ ಮೋಡ್ ರೇಡಾರ್, ಉತ್ತಮ ಏವಿಯಾನಿಕ್ಸ್, ಸಂವಹನ ವ್ಯವಸ್ಥೆಯನ್ನು ನೀಡಲಾಗಿತ್ತು. ಹಾರುವ ಶವಪೆಟ್ಟಿಗೆ ಎಂಬ ಕುಖ್ಯಾತಿ, F16 ಮುಂದೆ ಏನು ಅಲ್ಲ ಎಂದು ಭಾವಿಸಿದ್ದರೂ ಅಭಿನಂದನ್ ಈ ವಿಮಾನದಿಂದಲೇ ಪಾಕ್ ಸೇನೆಯನ್ನು ಹಿಮ್ಮೆಟ್ಟಿಸಿ ಒಂದು ವಿಮಾನವನ್ನೂ ಉರುಳಿಸುವ ಮೂಲಕ ಸಾಧನೆ ಮಾಡಿದ್ದರು.