ಹಿರಿಯ ಅಧಿಕಾರಿ ವಿರುದ್ಧ IAF ಫ್ಲೈಯಿಂಗ್‌ ಸ್ಕ್ವಾಡ್‌ ಮಹಿಳಾಧಿಕಾರಿಯಿಂದ ಅತ್ಯಾಚಾರ ಆರೋಪ – ಕೇಸ್‌ ದಾಖಲು

Public TV
2 Min Read
Fighter jet

– ಸಂಭೋಗಕ್ಕೆ ಒತ್ತಾಯಿಸುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖ

ಶ್ರೀನಗರ: ಕೋಲ್ಕತ್ತಾದಲ್ಲಿ (Kolkata) ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜಿನ ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ದೇಶಾದ್ಯಂತ ಸದ್ದು ಮಾಡುತ್ತಿದೆ. ಈ ಬೆನ್ನಲ್ಲೇ ಇದೀಗ ಭಾರತೀಯ ವಾಯುಪಡೆಯಲ್ಲೂ ಅಧಿಕಾರಿಯೊಬ್ಬರ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ.

ಭಾರತೀಯ ವಾಯುಪಡೆಯ ಫ್ಲೈಯಿಂಗ್‌ ಸ್ಕ್ವಾಡ್‌ ಮಹಿಳಾ ಅಧಿಕಾರಿಯೊಬ್ಬರು (IAF Officer) ವಿಂಗ್‌ ಕಮಾಂಡರ್‌ ಮೇಲೆ ಅತ್ಯಾಚಾರ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್‌ ಪೊಲೀಸ್‌ (udgam Police) ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇಬ್ಬರೂ ಅಧಿಕಾರಿಗಳು ಶ್ರೀನಗರದಲ್ಲಿ (Srinagar) ನೆಲೆಸಿದ್ದಾರೆ. ಇದನ್ನೂ ಓದಿ: Haryana Poll | ಬಿಜೆಪಿಯಿಂದ 21 ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್‌ – ವಿನೇಶ್‌ ವಿರುದ್ಧ ಪ್ರಬಲ ಅಭ್ಯರ್ಥಿ ಅಖಾಡಕ್ಕೆ

Rafale IAF

ಪ್ರಕರಣ ದಾಖಲಾಗುತ್ತಿದ್ದಂತೆ ಸ್ಥಳೀಯ ಬುಡ್ಗಾಮ್ ಠಾಣೆಯ ಪೊಲೀಸರು ವಾಯುಪಡೆಯ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ವಾಯುಪಡೆಯ ಅಧಿಕಾರಿಗಳು ಸಹ ಅಧಿಕಾರಿಗಳ ವಿಚಾರಣೆಗೆ ಸಹಕಾರ ನೀಡಿರುವುದಾಗಿ ವರದಿಯಾಗಿದೆ. ಕಳೆದ 2 ವರ್ಷಗಳಿಂದ ಕಿರುಕುಳ, ಲೈಂಗಿಕ ದೌರ್ಜನ್ಯ ಮತ್ತು ಮಾನಸಿಕ ಹಿಂಸೆ ಅನುಭವಿಸುತ್ತಿದ್ದೇನೆ ಎಂದು ಫ್ಲೈಯಿಂಗ್‌ ಸ್ಕ್ವಾಡ್‌ನ ಮಹಿಳಾ ಅಧಿಕಾರಿ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಪ್ರತಿಭಟನೆ ನಿಲ್ಲಿಸಿ, ದುರ್ಗಾಪೂಜೆಗೆ ಗಮನ ಹರಿಸಿ – ದೀದಿ ಹೇಳಿಕೆಗೆ ಮೃತ ಟ್ರೈನಿ ವೈದ್ಯೆಯ ತಾಯಿ ಆಕ್ರೋಶ

rafale iaf mian

ದೂರಿನಲ್ಲಿ ಏನಿದೆ?
2023ರ ಡಿಸೆಂಬರ್‌ 31ರ ಮಧ್ಯರಾತ್ರಿ ಹೊಸ ವರ್ಷದ ಪಾರ್ಟಿ ವೇಳೆ ವಿಂಗ್‌ ಕಮಾಂಡರ್‌ ತನಗೆ ಉಡುಗೊರೆ ನೀಡುವುದಾಗಿ ತನ್ನ ಕೋಣೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಮಹಿಳೆ ನಿಮ್ಮ ಕುಟುಂಬ ಎಲ್ಲಿದೆ ಎಂದು ಕೇಳಿದಾಗ, ಪುರುಷ ಅಧಿಕಾರಿ ಅವರು ಬೇರೆಡೆ ನೆಲೆಸಿದ್ದಾರೆ ಎಂದು ಹೇಳಿದ್ದರು. ಆ ದಿನ ರಾತ್ರಿ ತನ್ನೊಂದಿಗೆ ಸಂಭೋಕ್ಕೆ ಒತ್ತಾಯಿಸಿ, ಕಿರುಕುಳ ನೀಡಿದರು. ನಾನೂ ಇದು ಸರಿಯಿಲ್ಲ ಎಂದು ಪದೇ ಪದೇ ಹೇಳಿದೆ. ಸಾಧ್ಯವಾದಷ್ಟು ವಿರೋಧಿಸಲು ಪ್ರಯತ್ನಿಸಿದೆ, ಆದ್ರೆ ಅವರು ನನ್ನ ಮಾತು ಕೇಳದೇ ಮೇಲೆರಗಲು ಬಂದರು. ಆಗ ನಾನು ಅವರನ್ನು ತಳ್ಳಿ ಅಲ್ಲಿಂದ ಓಡಿ ಹೋದೆ. ಇದಾದ ನಂತರ ಅವರ ಕುಟುಂಬದೊಂದಿಗೆ ಮತ್ತೆ ಭೇಟಿಯಾಗೋಣ ಎಂದು ಕೇಳಿದ್ದರು. ಇದೇ ರೀತಿ ಅನೇಕ ಸಂದರ್ಭಗಳಲ್ಲಿ ಕಿರುಕುಳ ನೀಡುತ್ತಿದ್ದರು.

ಆತನಿಂದ ನನ್ನ ಮಾನಸಿಕ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಿದೆ. ನಿರಂತರ ಭಯದಲ್ಲಿ ಬದುಕುತ್ತಿದ್ದೇನೆ. ಹಲವು ಬಾರಿ ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದು ಯೋಚಿಸಿದ್ದೆ. ಇದರಿಂದ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಬಹಳ ಸಮಯದಿಂದ ಈ ಚಿತ್ರಹಿಂದೆ ಸಹಿಸಿಕೊಂಡಿದ್ದೇನೆ. ಕೊನೆಗೆ ವಿಧಿಯಿಲ್ಲದೇ ದೂರು ನೀಡಿದೆ ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ ತಮ್ಮ ವಿರುದ್ಧ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಅನೇಕ ಸಂರ್ಭಗಳನ್ನು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಅಭಿವೃದ್ಧಿ ವಿಷಯದಲ್ಲಿ ಸಂಘರ್ಷ ಬೇಡ – ಸಚಿವ ಎಂ.ಬಿ ಪಾಟೀಲ್‌ಗೆ ಕೇಂದ್ರ ಸಚಿವ ಹೆಚ್‌ಡಿಕೆ HD ಕುಮಾರಸ್ವಾಮಿ ಭರವಸೆ

Share This Article