ನವದೆಹಲಿ: ಪೈಲಟ್ ಅಭಿನಂದನ್ ಅವರ ಬಿಡುಗಡೆ ಮಾಡಿ ದೊಡ್ಡತನ ಮೆರೆದ ಪಾಕಿಸ್ತಾನಕ್ಕೆ ನಾವು ಕೃತಜ್ಞರು ಎಂದು ಭಾರತ ಸರ್ಕಾರ ಹೇಳಿದೆ.
ಪುಲ್ವಾಮಾ ದಾಳಿಯ ವಿಚಾರವಾಗಿ ಭಾರತವು ಪಾಕಿಸ್ತಾನಕ್ಕೆ ಚಾಟಿ ಬೀಸಿದ್ದು, ನಾವು ಕೊಟ್ಟ ಸಾಕ್ಷ್ಯಗಳ ಆಧಾರದಲ್ಲಿ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ವಿರುದ್ಧವೂ ಕ್ರಮಕೈಗೊಳ್ಳುತ್ತೀರಾ ಅಂತ ಭಾವಿಸುತ್ತೇವೆ ಎಂದು ಭಾರತ ಸರ್ಕಾರವು ತಿಳಿಸಿದೆ. ಇದನ್ನು ಓದಿ: ಪೈಲಟ್ ಪ್ರಾಜೆಕ್ಟ್ ಈಗಷ್ಟೇ ಮುಗಿದಿದೆ, ರಿಯಲ್ ಬಾಕಿಯಿದೆ: ಪ್ರಧಾನಿ ಮೋದಿ
Advertisement
Advertisement
ಭಾರತೀಯ ವಾಯು ಪಡೆಯ ಪೈಲಟ್ ಅಭಿನಂದನ್ ಅವರನ್ನು ಶುಕ್ರವಾರ ಅಧಿಕೃತವಾಗಿ ಬಿಡುಗಡೆ ಮಾಡುವುದಾಗಿ ಪಾಕಿಸ್ತಾನವು ತಿಳಿದೆ. ದೇಶದಲ್ಲಿ ಸಂಭ್ರಮ ಮನೆ ಮಾಡಿದ್ದು, ಅಭಿನಂದನ್ ಅವರು ದೇಶಕ್ಕೆ ಮರಳುವ ಕ್ಷಣಕ್ಕಾಗಿ ಭಾರತೀಯರು ಕಾತುರದಿಂದ ಕಾಯುತ್ತಿದ್ದಾರೆ.
Advertisement
ಪಾಕ್ ಆಕ್ರಮಿತ ಕಾಶ್ಮೀರದ ಪ್ರದೇಶದಲ್ಲಿ ಬಿದ್ದಿದ್ದ ಅಭಿನಂದನ್ ಅವರನ್ನು ಪಾಕ್ ಸೇನೆ ಕಸ್ಟಡಿಗೆ ತೆಗೆದುಕೊಂಡಿತ್ತು. ಜಿನೀವಾ ಒಪ್ಪಂದ ಪ್ರಕಾರ ಪಾಕ್ ಸೇನೆ ಅಭಿನಂದನ್ ಅವರನ್ನು ಬಿಡುಗಡೆ ಮಾಡಲೇಬೇಕಿತ್ತು. ಹೀಗಾಗಿ ಪಾಕಿಸ್ತಾನ ಶುಕ್ರವಾರ ಅಭಿನಂದನ್ ಅವರನ್ನು ಬಿಡುಗಡೆ ಮಾಡಲಿದೆ.
Advertisement
ಏನಿದು ಜಿನೀವಾ ಒಪ್ಪಂದ..?
ಎರಡನೇ ಮಹಾಯುದ್ಧದ ಬಳಿಕ 1949ರಲ್ಲಿ 196 ದೇಶಗಳ ನಡುವೆ ಏರ್ಪಟ್ಟ ವೇಳೆ ಒಪ್ಪಂದ ನಡೆದಿತ್ತು. ಈ ಒಪ್ಪಂದ ಪ್ರಕಾರ ಯುದ್ಧ ಕೈದಿಗಳನ್ನು ಮಾನವೀಯವಾಗಿ ನಡೆಸಿಕೊಳ್ಳಬೇಕು. ಗಾಯಗೊಂಡ, ಅನಾರೋಗ್ಯಕ್ಕೆ ತುತ್ತಾದ ಯುದ್ಧ ಕೈದಿಗಳಿಗೆ ಚಿಕಿತ್ಸೆ ನೀಡಬೇಕು. ಜಿನೀವಾ ಒಪ್ಪಂದ ಆರ್ಟಿಕಲ್ 3 ಅಘೋಷಿತ ಯುದ್ಧಕ್ಕೆ ಸಂಬಂಧಿಸಿದ್ದಾಗಿದೆ. ಯುದ್ಧ ಕೈದಿಯ ಕೊಲೆ, ಹಲ್ಲೆ, ಶಿರಚ್ಛೇದ, ಒತ್ತೆಯಂತಹ ಕೃತ್ಯಗಳನ್ನು ಮಾಡಬಾರದು. ಕಾನೂನು ಪ್ರಕ್ರಿಯೆಗಳನ್ನು ಮಾಡದೇ, ಆರೋಪ ಸಾಬೀತಾಗದೇ ಶಿಕ್ಷೆ ನೀಡಬಾರದು. ಆರೋಪ ಸಾಬೀತಾಗದೇ ಇದ್ದಲ್ಲಿ ಯುದ್ಧ ಕೈದಿಯನ್ನು ಅವರ ದೇಶಕ್ಕೆ ಒಪ್ಪಿಸಬೇಕು ಎಂಬ ನಿಯಮಗಳನ್ನು ರೂಪಿಸಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv