ನವದೆಹಲಿ: ʻಆಪರೇಷನ್ ಸಿಂಧೂರʼ ದಾಳಿಯ ಬೆನ್ನಲ್ಲೇ ಕಾಶ್ಮೀರದ ಗಡಿ ನಿಯಂತ್ರಣ ರೇಖೆ (LoC) ಉದ್ದಕ್ಕೂ ಉದ್ವಿಗ್ನತೆ ಹೆಚ್ಚಿರುವ ಪರಿಣಾಮ ಭಾರತೀಯ ವಾಯುಪಡೆಯು (IAF) ಶ್ರೀನಗರ ವಿಮಾನ ನಿಲ್ದಾಣವನ್ನ ನಿಯಂತ್ರಣಕ್ಕೆ ಪಡೆದಿದೆ.
ಜೊತೆಗೆ ನಾಗರಿಕ ವಿಮಾನಗಳ ಕಾರ್ಯಾಚರಣೆಯನ್ನು ಅನಿರ್ದಿಷ್ಟಾವಧಿ ವರೆಗೆ ಸ್ಥಗಿತಗೊಳಿಸಲಾಗಿದೆ. ಅಲ್ಲದೇ ಜಮ್ಮು ಮತ್ತು ಕಾಶ್ಮೀರ (Jammu and Kashmir), ಅಮೃತಸರ, ಚಂಡೀಗಢ, ಧರ್ಮಶಾಲಾ, ಲೇಹ್‌ನ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ಸ್ಥಗಿತಗೊಂಡಿದ್ದು, ವಿಮಾನಯಾನ ಸಂಸ್ಥೆಗಳು ವಿಮಾನಗಳ ಹಾರಾಟವನ್ನು ರದ್ದುಗೊಳಿಸಿವೆ. ಇದನ್ನೂ ಓದಿ: Operation Sindoor | ಮೋಸ್ಟ್ ಡೇಂಜರಸ್ ಉಗ್ರರನ್ನ ತಯಾರು ಮಾಡ್ತಿದ್ದ ತಾಣಗಳು ಉಡೀಸ್
ಸದ್ಯದ ಮಟ್ಟಿಗೆ ಶ್ರೀನಗರ ಕೇವಲ ನಾಗರಿಕ ವಿಮಾನ ನಿಲ್ದಾಣವಲ್ಲ. ಬದಲಾಗಿ ಇದು ಒಂದು ಕಾರ್ಯತಂತ್ರದ ನೆಲೆಯಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: Operation Sindoor | 23 ನಿಮಿಷದ ದಾಳಿಗೆ 80ಕ್ಕೂ ಹೆಚ್ಚು ಉಗ್ರರು ಮಟ್ಯಾಶ್
ಸದ್ಯ ಶ್ರೀನಗರ ವಿಮಾನ ನಿಲ್ದಾಣವು ಭಾರತೀಯ ವಾಯುಪಡೆಯ ನಿಯಂತ್ರಣದಲ್ಲಿದ್ದು, ವಿಮಾನಗಳ ಸಂಚಾರ, ಲ್ಯಾಂಡಿಂಗ್ ಅನ್ನು ನಿಯಂತ್ರಿಸುತ್ತದೆ. ವಾಯುಪ್ರದೇಶವನ್ನು ಹೊರತುಪಡಿಸಿ ಅಗ್ನಿಶಾಮಕ, ಎಲ್ಲಾ ವಾಯು ಸುರಕ್ಷತಾ ಕಾರ್ಯವಿಧಾನಗಳನ್ನ ಸಹ ನಿಯಂತ್ರಿಸುತ್ತದೆ ಎಂದು ವರದಿಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಚೀನಾ ನಿರ್ಮಿತ ಪಾಕ್‌ನ JF-17 ವಿಮಾನವನ್ನು ಹೊಡೆದು ಹಾಕಿದ ಭಾರತ!
ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ:
ಭಾರತದ ಪ್ರತೀಕಾರದ ದಾಳಿಯ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರ ವ್ಯಾಪ್ತಿಯಲ್ಲಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಮ್ಮು, ಸಾಂಬಾ, ಕಥುವಾ, ರಜೌರಿ ಮತ್ತು ಪೂಂಚ್ ಜಿಲ್ಲೆಗಳಲ್ಲಿ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ವಿಶ್ವಸಂಸ್ಥೆ, ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆ: ಪಾಕ್ ಉಪಪ್ರಧಾನಿ ಇಶಾಕ್ ದಾರ್
ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಓರ್ವ ವಿದೇಶಿ ಪ್ರವಾಸಿಗ ಸೇರಿದಂತೆ 26 ಪ್ರವಾಸಿಗರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಮಂಗಳವಾರ ತಡರಾತ್ರಿ ಪಾಕ್‌ನ ಉಗ್ರ ನೆಲೆಗಳ ಮೇಲೆ ಏರ್‌ಸ್ಟ್ರೈಕ್ ನಡೆಸಿದೆ.