ಬೆಂಗಳೂರು: ಕೆಪಿಎಸ್‌ಸಿ (KPSC) ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ (Gyanendra Kumar) ಜಾಮೀನು ಅರ್ಜಿ ವಜಾಗೊಳಿಸಲಾಗಿದೆ.
ಗ್ಯಾನೇಂದ್ರ ಕುಮಾರ್ ಜಾಮೀನು ಅರ್ಜಿ ವಜಾ ಮಾಡಿ 52ನೇ ಸಿಸಿಹೆಚ್ ಕೋರ್ಟ್ ಆದೇಶ ಹೊರಡಿಸಿದೆ. ಇದನ್ನೂ ಓದಿ: KPSC ಹಗರಣ – ಇಡಿ ತನಿಖೆಗೆ ಸರಿಯಾಗಿ ಸಹಕರಿಸದಿದ್ದಕ್ಕೆ ಗ್ಯಾನೇಂದ್ರ, ಕನ್ನಾಳೆ ಅರೆಸ್ಟ್
ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಗ್ಯಾನೇಂದ್ರ ಕುಮಾರ್ ಬಂಧಿಸಿತ್ತು. ಅಧಿಕಾರಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ್ದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣದಲ್ಲಿ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಹಾಗೂ ಬಿಜೆಪಿ ಮುಖಂಡ, ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ, ಬಸವರಾಜ್ ಕನ್ನಾಳೆ ಇಬ್ಬರೂ ಜೈಲು ಪಾಲಾಗಿದ್ದಾರೆ. ಇದನ್ನೂ ಓದಿ: KPSC Scam | ಕಿಂಗ್‌ಪಿನ್ ಕನ್ನಾಳೆ, ಗ್ಯಾನೇಂದ್ರ ಜೈಲಲ್ಲೇ ಅರೆಸ್ಟ್ – ಕಸ್ಟಡಿಗೆ ಪಡೆದ ಇಡಿ

