ಕಲಬುರಗಿ: ರಸ್ತೆ ಅಪಘಾತದಲ್ಲಿ ತೀವ್ರಗಾಯಗೊಂಡಿದ್ದ ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ (KSMS) ಎಂಡಿ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (Mahantesh Bilagi) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಕೆಎಸ್‌ಎಂಸಿಎಲ್ ಎಂಡಿಯಾಗಿದ್ದ ಮಹಾಂತೇಶ್ ಬೀಳಗಿ ಇನ್ನೋವಾ ಕಾರಿನಲ್ಲಿ ವಿಜಯಪುರದಿಂದ ಕಲಬುರಗಿಗೆ ಆಗಮಿಸುತ್ತಿದ್ದ ವೇಳೆ ಅಪಘಾತವಾಗಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಗೌನಹಳ್ಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಅವರಿಗೆ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಾಂತೇಶ್ ಬೀಳಗಿ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಧಾರವಾಡ ಜಿಲ್ಲಾಡಳಿತಕ್ಕೆ ಹಿನ್ನಡೆ – ಕನ್ನೇರಿ ಶ್ರೀಗಳ ಪ್ರವೇಶಕ್ಕೆ ಅನುಮತಿ
ಅಪಘಾತದಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಬೀಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 2012 ರ ಕರ್ನಾಟಕ ಕೆಡರ್ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದ ಇವರು ಈ ಮೊದಲು ಮೊದಲು ಬೆಸ್ಕಾಂ ಎಂಡಿಯಾಗಿ ಕಾರ್ಯ ನಿರ್ವಹಿಸಿದ್ದರು. ಬೆಂಗಳೂರಿನ ಮೇಕ್ರಿ ಸರ್ಕಲ್ ಬಳಿ ಮಹಾಂತೇಶ್ ಬೀಳಗಿ ಪತ್ನಿ, ಮಗಳ ಜೊತೆ ನೆಲೆಸಿದ್ದರು. ಇದನ್ನೂ ಓದಿ: ಬಂಗಾಳದ ಜನರ ಮೇಲೆ ದಾಳಿ ಮಾಡಿದರೆ ಇಡೀ ರಾಷ್ಟ್ರವನ್ನು ನಡುಗಿಸುತ್ತೇನೆ: ಮಮತಾ ಗುಡುಗು

