ಚಂಡೀಗಢ: ದಿನೇ ದಿನೇ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇತ್ತ ಐಎಎಸ್ ಅಧಿಕಾರಿಯೊಬ್ಬರು ಸರ್ಕಾರಿ ಕರ್ತವ್ಯದಲ್ಲಿ ವೈಯಕ್ತಿಕ ಸುರಕ್ಷತೆಯ ಆತಂಕದಿಂದ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
2014ರ ಬ್ಯಾಚ್‍ನ ಹರಿಯಾಣ ಕೇಡರ್‌ನ ಐಎಎಸ್ ಅಧಿಕಾರಿ ರಾಣಿ ನಗರ್ (35) ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಪ್ರಸ್ತುತ ಇವರು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಹೆಚ್ಚುವರಿ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ತಮ್ಮ ರಾಜೀನಾಮೆಯನ್ನು ಹರಿಯಾಣ ಮುಖ್ಯ ಕಾರ್ಯದರ್ಶಿ ಕೇಶಾನಿ ಆನಂದ್ ಅರೋರಾ ಅವರಿಗೆ ನೀಡಿದ್ದು, ಕೇಂದ್ರ ಸರ್ಕಾರದ ಪ್ರಾಧಿಕಾರಕ್ಕೆ ರವಾನಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
Advertisement
Advertisement
ಸರ್ಕಾರಿ ಕರ್ತವ್ಯದಲ್ಲಿ ವೈಯಕ್ತಿಕ ಸುರಕ್ಷತೆಯ ಆತಂಕದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುತ್ತಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ನನ್ನ ಐಎಎಸ್ ಹುದ್ದೆಗೆ ನಾನು ರಾಜೀನಾಮೆ ನೀಡಿದ್ದೇನೆ. ರಾಜೀನಾಮೆ ಪತ್ರದ ಪ್ರತಿಗಳನ್ನು ಅಧ್ಯಕ್ಷರು, ಪ್ರಧಾನಿ, ಹರಿಯಾಣ ಗವರ್ನರ್ ಮತ್ತು ಮುಖ್ಯಮಂತ್ರಿಗೆ ಇ-ಮೇಲ್ ಮೂಲಕ ಕಳುಹಿಸಿದ್ದೇನೆ ಎಂದು ರಾಣಿ ಅವರು ತಿಳಿಸಿದ್ದಾರೆ.
Advertisement
ಐಎಎಸ್ ಅಧಿಕಾರಿ ಪತ್ರವನ್ನು ತಮ್ಮ ಫೇಸ್‍ಬುಕ್ ಫೇಜಿನಲ್ಲಿ ಪೋಸ್ಟ್ ಮಾಡಿದ್ದಾರೆ. ಇದಕ್ಕೂ ಮೊದಲು ಅಂದರೆ ಕಳೆದ ತಿಂಗಳು ತಮ್ಮ ಫೇಸ್‍ಬುಕ್‍ನಲ್ಲಿ ಲಾಕ್‍ಡೌನ್ ನಂತರ ಐಎಎಸ್ ಹುದ್ದೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದರು. ಅಲ್ಲದೇ ಉತ್ತರ ಪ್ರದೇಶದ ಘಜಿಯಾಬಾದ್‍ಗೆ ಹಿಂದಿರುಗುವ ಬಗ್ಗೆ ಹೇಳಿದ್ದರು.
Advertisement
ಸದ್ಯಕ್ಕೆ ರಾಣಿ ನಗರ್ ಪ್ರಸ್ತುತ ತಮ್ಮ ಸಹೋದರಿಯೊಂದಿಗೆ ಚಂಡೀಗಢದಲ್ಲಿ ವಾಸಿಸುತ್ತಿದ್ದಾರೆ. 2018ರಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಟ್ಟದ ಅಧಿಕಾರಿಯೊಬ್ಬರು ಕಿರುಕುಳ ನೀಡಿದ್ದಾರೆ ಎಂದು ರಾಣಿ ನಗರ್ ಆರೋಪಿಸಿದ್ದರು.