ದಾವಣಗೆರೆ: ಪ್ರೇಮಿಗಳ ದಿನದಂದೇ ಜಿಲ್ಲೆಯ ಇಬ್ಬರು ಐಎಎಸ್ ಅಧಿಕಾರಿಗಳು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
ದಾವಣಗೆರೆ ಜಿಲ್ಲಾಧಿಕಾರಿ ಡಾ.ಭಗಾಧಿ ಗೌತಮ್ ಹಾಗೂ ದಾವಣಗೆರೆ ಜಿಲ್ಲಾ ಪಂಚಾಯತ್ ಸಿಇಒ ಎಸ್.ಅಶ್ವಥಿ ಇಬ್ಬರ ಮದುವೆ ಫಿಕ್ಸ್ ಆಗಿದೆ. ಇದೇ ಫೆಬ್ರವರಿ 14ರಂದು ಅಂದರೆ ಗುರುವಾರ ಎಸ್.ಅಶ್ವಥಿ ಅವರ ತಮ್ಮ ನಿವಾಸ ಕೇರಳದ ಕ್ಯಾಲಿಕಟ್‍ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ಫೆಬ್ರವರಿ 17 ರಂದು ಜಿಲ್ಲಾಧಿಕಾರಿ ಡಾ. ಭಗಾಧಿ ಗೌತಮ್ ನಿವಾಸ ಆಂಧ್ರದಲ್ಲಿ ರಿಸೆಪ್ಷನ್ ನಡೆಯಲಿದೆ. ಡಾ.ಭಗಾಧಿ ಗೌತಮ್ ಮತ್ತು ಎಸ್.ಅಶ್ವಥಿ ಪರಸ್ಪರ ಪ್ರೀತಿಸುತ್ತಿದ್ದರು. ಈಗ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಡಾ. ಭಗಾಧಿ ಗೌತಮ್ ರಾಯಚೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದ ಸಮಯದಲ್ಲಿ ಎಸ್. ಅಶ್ವಥಿ ಜೊತೆಗೆ ಮದುವೆಯ ಮಾತುಕತೆ ನಡೆದಿತ್ತು.
ರಾಜ್ಯದ ಪ್ರಮುಖ ಐಎಎಸ್ ಅಧಿಕಾರಿ ಮುಂದಾಳತ್ವದಲ್ಲಿ ಎರಡು ಕುಟುಂಬದ ಜೊತೆ ಮದುವೆ ಮಾತುಕತೆ ನಡೆದಿದ್ದು, ಪ್ರೇಮಿಗಳ ದಿನದಂದೇ ಡಾ.ಭಗಾಧಿ ಗೌತಮ್ ಮತ್ತು ಎಸ್.ಅಶ್ವಥಿ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಡುವ ಮೂಲಕ ಐಎಎಸ್ ಜೋಡಿಗಳು ಒಂದಾಗಲಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv