Monday, 16th September 2019

Recent News

ಪ್ರೀತಿಸಿ ಮದ್ವೆಯಾಗಿದ್ದ ಐಎಎಸ್ ಅಧಿಕಾರಿಗಳು ಒಂದೇ ಜಿಲ್ಲೆಗೆ ವರ್ಗ

ದಾವಣಗೆರೆ: ಪ್ರೇಮಿಗಳ ದಿನದಂದು ಮದುವೆ ಆಗಿದ್ದ ಐಎಎಸ್ ಅಧಿಕಾರಿಗಳಾದ ಡಾ ಬಗಾದಿ ಗೌತಮ್ ಮತ್ತು ಎಸ್ ಅಶ್ವತಿರನ್ನ ರಾಜ್ಯ ಸರ್ಕಾರ ಒಂದೇ ಜಿಲ್ಲೆಗೆ ವರ್ಗಾಯಿಸಿದೆ.

ದಾವಣಗೆರೆ ಜಿಲ್ಲಾಧಿಕಾರಿಯಾಗಿದ್ದ ಗೌತಮ್‍ರನ್ನ ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿಯೂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಅಶ್ವತಿಯನ್ನು ವರ್ಗಾಯಿಸಿದೆ. ನವದಂಪತಿಗಳಾಗಿರುವ ಹಿನ್ನೆಲೆಯಲ್ಲಿ ಒಟ್ಟಿಗೆ ಇರಲಿ ಅನ್ನೋ ಕಾರಣಕ್ಕೆ ಒಂದೇ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಸಿಇಒ ಎಸ್ ಅಶ್ವತಿ ತವರೂರಾದ ಕೇರಳದ ಕೋಯಿಕ್ಕೊಡ್ ನಲ್ಲಿ ಫೆಬ್ರವರಿ 14ರಂದು ಮದುವೆಯಾಗಿದ್ದು, ಹಿಂದೂ ಸಂಪ್ರದಾಯದಂತೆ ಕುಟುಂಬಸ್ಥರ ಜೊತೆ ಸರಳ ವಿವಾಹ ಮಾಡಿಕೊಂಡಿದ್ದರು. ಬಳಿಕ ಫೆಬ್ರವರಿ 17 ಕ್ಕೆ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್‍ರ ಊರಾದ ಆಂಧ್ರದ ವಿಶಾಖಪಟ್ಟಣದ ನಿವಾಸದಲ್ಲಿ ಆರತಕ್ಷತೆ ನಡೆದಿತ್ತು. ಡಾ. ಬಗಾದಿ ಗೌತಮ್ ರಾಯಚೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದ ಸಮಯದಲ್ಲಿ ಎಸ್. ಅಶ್ವತಿ ಜೊತೆಗೆ ಮದುವೆಯ ಮಾತುಕತೆ ನಡೆದಿತ್ತು. ರಾಜ್ಯದ ಪ್ರಮುಖ ಐಎಎಸ್ ಅಧಿಕಾರಿ ಮುಂದಾಳತ್ವದಲ್ಲಿ ಎರಡು ಕುಟುಂಬದ ಜೊತೆ ಮದುವೆ ಮಾತುಕತೆ ನಡೆದಿದ್ದು, ಇದೀಗ ಮದುವೆಯಾಗಿದ್ದಾರೆ. ಇದನ್ನೂ ಓದಿ: ಪ್ರೀತಿ ಬಹಿರಂಗವಾಗಿದ್ದು ಹೇಗೆ..?

ಸದ್ಯ ದಾವಣಗೆರೆ ಡಿಸಿ ಆಗಿ ಜಿ ಎನ್ ಶಿವಮೂರ್ತಿ ಮತ್ತು ಜಿಲ್ಲಾ ಪಂಚಾಯತ್ ಸಿಇಒ ಆಗಿ ಹೆಚ್ ಬಸವರಾಜೇಂದ್ರ ನೇಮಿಸಿ ಸರ್ಕಾರ ಆದೇಶಿಸಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply

Your email address will not be published. Required fields are marked *