ಕೋಲ್ಕತ್ತಾ: ಐಎಎಸ್ ಅಧಿಕಾರಿ ಪತ್ನಿ ಮೇಲಿನ ಅತ್ಯಾಚಾರ ಪ್ರಕರಣದ (IAS Officer’s Wife’s Rape) ಪ್ರಾಥಮಿಕ ತನಿಖೆಯನ್ನು ತಪ್ಪಾಗಿ ನಿರ್ವಹಿಸಿದ ಮೂವರು ಉನ್ನತ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋಲ್ಕತ್ತಾ ಹೈಕೋರ್ಟ್ (Kolkata High Court) ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ.
ತನಿಖಾ ತಂಡದಿಂದ ನಿರ್ಲಕ್ಷ್ಯ ಕಂಡುಬಂದಿದೆ ಎಂದು ನ್ಯಾಯಮೂರ್ತಿ ರಾಜರ್ಷಿ ಭಾರದ್ವಾಜ್ ನೇತೃತ್ವದ ನ್ಯಾಯಪೀಠ ಹೇಳಿದೆ. ಕಾನೂನಿಗೆ ವಿರುದ್ಧವಾಗಿ ಪುರುಷ ಅಧಿಕಾರಿಯೊಬ್ಬರಿಗೆ ಪ್ರಕರಣ ಹೊಣೆ ನೀಡಲಾಗಿದ್ದು, ಈ ವೇಳೆ ಗಂಭೀರ ಆರೋಪಗಳನ್ನು ಸಣ್ಣ ಆರೋಪಗಳಾಗಿ ಪರಿವರ್ತಿಸಲಾಗಿತ್ತು. ಇದು ಕೆಳ ನ್ಯಾಯಾಲಯದಿಂದ ಆರೋಪಿಯ ಜಾಮೀನಿಗೆ ದಾರಿ ಮಾಡಿಕೊಟ್ಟಿತು. ಆದರೆ ಹೈಕೋರ್ಟ್ ಕೆಳ ನ್ಯಾಯಾಲಯದ ತೀರ್ಪನ್ನು ತಳ್ಳಿಹಾಕಿದ್ದು, ಆರೋಪಿಯ ಜಾಮೀನು ತಿರಸ್ಕರಿಸಿದೆ. ಅಲ್ಲದೇ ತನಿಖೆಯನ್ನು ಡೆಪ್ಯೂಟಿ ಕಮಿಷನರ್ ಮಟ್ಟದ ಅಧಿಕಾರಿಗೆ ವರ್ಗಾಯಿಸುವಂತೆ ನ್ಯಾಯಾಲಯ ಆದೇಶಿಸಿದೆ. ಇದನ್ನೂ ಓದಿ: ಲೋಕಾಯುಕ್ತ FIR ಬೆನ್ನಲ್ಲೇ ಸಿಎಂಗೆ ಇಡಿ ಭಯ; ಇ-ಮೇಲ್ ಮೂಲಕ ಸ್ನೇಹಮಯಿ ಕೃಷ್ಣ ದೂರು
Advertisement
Advertisement
ಜುಲೈ 14 ಮತ್ತು 15 ರಂದು ಈ ಘಟನೆ ನಡೆದಿದ್ದು, ಆರೋಪಿ ರಾತ್ರಿ 11:30ರ ಸುಮಾರಿಗೆ ಮನೆಗೆ ನುಗ್ಗಿ ಬಂದೂಕು ತೋರಿಸಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ. ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಕಾಯಿಸಿದ್ದರು. ಅಪರಾಧ ಗಂಭೀರ ಸ್ವರೂಪದ್ದಾದರೂ ಆರೋಪಿಗಳ ವಿರುದ್ಧ ಸಣ್ಣ ಆರೋಪ ಹೊರಿಸಲಾಗಿದೆ ಎಂದು ಸಂತ್ರಸ್ತೆ ತಿಳಿಸಿದ್ದಾರೆ. ಇದನ್ನೂ ಓದಿ: ಸಿಎಂ ಗೌರವಯುತವಾಗಿ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ನಾಯಕರ ವಿರುದ್ಧ ಯತ್ನಾಳ್ ಕಿಡಿ
Advertisement
ಅತ್ಯಾಚಾರ ಆರೋಪಿಯ ಪತ್ನಿ ಮತ್ತು ಆಕೆಯ ಮಗ ತನ್ನ ದೂರನ್ನು ಹಿಂಪಡೆಯುವಂತೆ ಒತ್ತಡ ಹೇರಿದ್ದರು. ಅಲ್ಲದೇ ಆರೋಪಿಗಳು ತನ್ನ ಮನೆಗೆ ನುಗ್ಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಗಣಿಸಲು ಪೊಲೀಸರು ನಿರಾಕರಿಸಿದರು ಎಂದು ಸಂತ್ರಸ್ತೆ ಹೇಳಿದ್ದಾರೆ. ಇದನ್ನೂ ಓದಿ: ಸುನೀತಾ ವಿಲಿಯಮ್ಸ್ ಕರೆತರಲು ಇಂದು ನಭಕ್ಕೆ ನೆಗೆಯಲಿದೆ ಕ್ರ್ಯೂ -9
Advertisement
ಇದರಿಂದ ಆರೋಪಿಗಳ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಲೈಂಗಿಕ ದೌರ್ಜನ್ಯದ ಆರೋಪದ ಗಂಭೀರತೆಯನ್ನು ಹಾಳು ಮಾಡಿದೆ ಎಂದಿರುವ ಕೋರ್ಟ್, ಪ್ರಕರಣದ ತನಿಖೆಯನ್ನು ನಡೆಸುವಂತೆ ಆದೇಶಿಸಿದೆ. ಅಲ್ಲದೇ ಮೂವರು ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ. ಮೂರು ದಿನಗಳೊಳಗೆ ಎಲ್ಲಾ ದಾಖಲೆಗಳು ಮತ್ತು ಕೇಸ್ ಡೈರಿಯನ್ನು ಜಿಲ್ಲಾಧಿಕಾರಿಗೆ ಹಸ್ತಾಂತರಿಸುವಂತೆ ಹಾಲಿ ತನಿಖಾಧಿಕಾರಿಗೆ ಹೈಕೋರ್ಟ್ ಸೂಚಿಸಿದೆ. ಇದನ್ನೂ ಓದಿ: ನಾನು ರಾಜ್ಯಕ್ಕೆ ಸೇವೆ ಮಾಡ್ಬೇಕು ಅಂತ ದೊಡ್ಡ ಹೋರಾಟ ಆಗ್ತಿದೆ; ಮತ್ತೆ ಸಿಎಂ ಆಸೆ ವ್ಯಕ್ತಪಡಿಸಿದ ಡಿಕೆಶಿ
ಹೈಕೋರ್ಟ್ ನಿರ್ದೇಶನದ ನಂತರ, ತನಿಖೆಯನ್ನು ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಪ್ರಕರಣದ ಮೇಲ್ವಿಚಾರಣೆಗೆ ವಿಭಾಗೀಯ ಉಪ ಆಯುಕ್ತರಿಗೆ (ಡಿಸಿ) ತಿಳಿಸಲಾಗಿದೆ. ಇದನ್ನೂ ಓದಿ: ಅಧಿಕಾರಿಗಳು ಮತ್ತು ಮುಖಂಡರು ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ: ಡಿಕೆಶಿ