ಬೆಂಗಳೂರು: ಮಾನಸಿಕ ಕಾಯಿಲೆ ಬಹುದೊಡ್ಡ ಸಮಸ್ಯೆ. ಇದಕ್ಕೆ ಔಷಧಿ ಹಾಗೂ ಕೌನ್ಸಿಲಿಂಗ್ ಅವಶ್ಯಕತೆಯಿದೆ. ಜವಾಬ್ದಾರಿ ಸ್ಥಾನದಲ್ಲಿರುವವರಿಗೆ ಈ ರೀತಿಯ ಸಮಸ್ಯೆ ಬಂದರೇ ತುಂಬಾ ಅಪಾಯ ಎಂದು ರೂಪಾ (Roopa IPS) ಹೇಳಿಕೆಗೆ ರೋಹಿಣಿ ಸಿಂಧೂರಿ (Rohin Sindhuri) ತಿರುಗೇಟು ನೀಡಿದರು.
ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಐಪಿಎಸ್ ರೂಪಾ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ನನ್ನ ಮೇಲೆ ಹಬ್ಬಿಸುತ್ತಿರುವ ಸುಳ್ಳು ಆಪಾದನೆಗಳೆಲ್ಲ ವ್ಯವಸ್ಥಿತ ಪಿತೂರಿಯಾಗಿದೆ. ಎಲ್ಲಾ ಕಡೆಯೂ ಹೀಗೆ ಸುಳ್ಳು ಆಪಾದನೆಗಳನ್ನು ಹಬ್ಬಿಸಲಾಗುತ್ತಿದೆ. ಸದ್ಯ ಈಗ ಕೆಲಸ ಮಾಡುತ್ತಿರುವ ಹಾಗೂ ನಾನ್ ಕೇಡರ್ ಪೋಸ್ಟ್‌ನಲ್ಲೂ ಕೂಡ ಈ ರೀತಿ ಮಾಡಲಾಗಿದೆ. ಐಪಿಸಿ ಅಡಿಯಲ್ಲಿ ರೂಪಾ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಭೂಕಂಪದಿಂದ ತತ್ತರಿಸಿರುವ ಸಿರಿಯಾಗೆ ಮತ್ತೊಂದು ಆಘಾತ – ಇಸ್ರೇಲ್ ಕ್ಷಿಪಣಿ ದಾಳಿಗೆ 15 ಬಲಿ
Advertisement
Advertisement
ರೂಪಾ ಯಾವಾಗಲೂ ಮಾಧ್ಯಮದ ಗಮನವನ್ನು ತನ್ನೆಡೆಗೆ ಸೆಳೆದುಕೊಳ್ಳಲು ಬಯಸುವ ವ್ಯಕ್ತಿ. ಆಕೆಯ ಸಾಮಾಜಿಕ ಜಾಲತಾಣದ ಪ್ರೊಫೈಲ್ ಅವಳ ಕೆಲಸದ ಪುರಾವೆಯಾಗಿದೆ. ಅವಳು ಯಾವಾಗಲೂ ಒಬ್ಬರನ್ನು ಗುರಿಯಾಗಿಸಿಕೊಳ್ಳುವುದೇ ಅವಳ ನೆಚ್ಚಿನ ಟೈಮ್ ಪಾಸ್ ಕೆಲಸವಾಗಿದೆ. ಫೋಟೊಗಳು ಸೋಷಿಯಲ್ ಮೀಡಿಯಾದಿಂದ ತೆಗೆದುಕೊಳ್ಳಲಾಗಿದೆ. ಆಕೆ ನಾನು ಯಾರಿಗೆ ಫೋಟೋ ಕಳಿಸಿದ್ದೆ ಅಂತಾ ಹೆಸರು ಹೇಳಲಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಪ್ರಕಟಿಸಿದ ಫೋಟೋಗಳು ಸ್ಯಾಂಪಲ್ ಅಷ್ಟೇ: ರೋಹಿಣಿ ವಿರುದ್ಧ ರೂಪಾ ಕೆಂಡ
Advertisement
ಮಾಧ್ಯಮ ಹೇಳಿಕೆಯಲ್ಲಿ ಏನಿದೆ?: ಮಾನಸಿಕ ಅಸ್ವಸ್ಥತೆ ಒಂದು ಬಹುದೊಡ್ಡ ಸಮಸ್ಯೆ. ಅದನ್ನ ಸೂಕ್ತ ವೈದ್ಯಕೀಯ ಚಿಕಿತ್ಸೆ ಮತ್ತು ಕೌನ್ಸಿಲಿಂಗ್ ಮೂಲಕ ಗುಣಪಡಿಸಬೇಕು. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಮಾನಸಿಕ ಅಸ್ವಸ್ಥತೆಗೆ ಒಳಗಾದರೆ, ಅದು ಸಮಾಜಕ್ಕೆ ಬಹುದೊಡ್ಡ `ಅಪಾಯಕಾಲಿ ಬೆಳವಣಿಗೆಯಾಗಿದೆ. ರೂಪಾ ಐಪಿಎಸ್ ಅವರು, ಜವಾಬ್ದಾರಿಯುತ ಸ್ಥಾನದಲ್ಲಿದ್ದು, ನನ್ನ ಮೇಲೆ ವೈಯಕ್ತಿಕ ಹಗೆಯನ್ನ ಸಾಧಿಸಲು ಮಾನಸಿಕ ಸ್ಥಿಮಿತೆಯನ್ನು ಕಳೆದುಕೊಂಡಿರುವವರ ರೀತಿಯಲ್ಲಿ ವರ್ತಿಸುತ್ತಿದ್ದಾರೆ.
Advertisement
ಐಪಿಎಸ್ ರೂಪಾ ಅವರಿಗೆ, ಇದೊಂದು ಅಭ್ಯಾಸವಾಗಿ ಬಿಟ್ಟಿದೆ. ಅವರು ಇತ್ತೀಚಿನ ವರ್ಷಗಳಲ್ಲಿದ್ದ ಎಲ್ಲಾ ಹುದ್ದೆಗಳಲ್ಲಿ ಇದೇ ರೀತಿಯ ಆಧಾರ ರಹಿತ ಆರೋಪಗಳನ್ನು ಮಾಡುವ ಮೂಲಕ ಮಾಧ್ಯಮಗಳ ಗಮನ ಸೆಳೆಯುವ ಹಾಗೂ ತಾವು ದ್ವೇಷಿಸುವ ವ್ಯಕ್ತಿಗಳ ಮೇಲೆ ವೈಯಕ್ತಿಕವಾಗಿ ಹಗೆತನ ಸಾಧಿಸಲು ಕೀಳು ಮಟ್ಟದ ಪ್ರವೃತ್ತಿಯನ್ನು ಪ್ರದರ್ಶಿಸುತ್ತಿದ್ದಾರೆ. ಅವರು ಯಾವಾಗಲೂ ಸುದ್ದಿಯಲ್ಲಿರಬೇಕು ಎನ್ನುವುದನ್ನು ಬಯಸುತ್ತಾರೆ ಹಾಗೂ ಅದಕ್ಕೆ ಬೇಕಾದಂತಹ ಪೋಸ್ಟ್‌ಗಳನ್ನು ತಮ್ಮ ಸಾಮಾಜಿಕ ಮಾಧ್ಯಮದ ಪುಟಗಳಲ್ಲಿ ಹಾಕುವ ಮೂಲಕ ಸುದ್ದಿಯ ಕೇಂದ್ರ ಬಿಂದುವಾಗಲು ಯತ್ನಿಸುತ್ತಿದ್ದಾರೆ.
ಜವಾಬ್ದಾರಿಯುತ ಸ್ಥಾನದಲ್ಲಿದ್ದು ಒಳ್ಳೆಯ ಕೆಲಸಗಳ ಕಡೆ ಗಮನ ಹರಿಸುವುದನ್ನು ಬಿಟ್ಟು ಒಬ್ಬ ವ್ಯಕ್ತಿ ಅಥವಾ ಇನ್ನೊಬ್ಬರನ್ನು ಗುರಿಯಾಗಿಸಿಕೊಂಡು ಅವರ ತೇಜೋವಧೆ ಮಾಡುವುದೇ ಅವರ ಪ್ರಾಥಮಿಕ ಕೆಲಸ ಎಂದು ತೋರುತ್ತದೆ. ಅದರಲ್ಲೂ ನನ್ನ ವಿರುದ್ಧ ಯಾವುದೋ ವೈಯಕ್ತಿಕ ಹಗೆಯನ್ನಿಟ್ಟುಕೊಂಡು ಸುಳ್ಳು, ವೈಯಕ್ತಿಕ ನಿಂದನೆಯ ಅಭಿಯಾನವನ್ನು ನಡೆಸುತ್ತಿದ್ದಾರೆ.
ಸಾಮಾಜಿಕ ಮಾಧ್ಯಮಗಳಿಂದ ಹಾಗೂ ವಾಟ್ಸ್‌ಆಪ್ ಸ್ಟೇಟಸ್‌ಗಳಿಂದ ಸ್ಕ್ರೀನ್‌ಶಾಟ್‌ಗಳ ಮೂಲಕ ಸಂಗ್ರಹಿಸಿರುವ ಫೋಟೋಗಳನ್ನು ನನ್ನ ತೇಜೋವಧೆ ಮಾಡಲು ರೂಪಾ ಐಪಿಎಸ್ ಅವರು ಬಳಸಿದ್ದಾರೆ. ಈ ಫೋಟೋಗಳನ್ನು ನಾನು ಕೆಲ ಅಧಿಕಾರಿಗಳಿಗೆ ಕಳುಹಿಸಿದ್ದೇನೆ ಎನ್ನುವ ಸುಳ್ಳು ಆರೋಪ ಮಾಡಿರುವ ಅವರು ಅಧಿಕಾರಿಗಳ ಹೆಸರನ್ನ ಬಹಿರಂಗಪಡಿಸಬೇಕು ಎಂದು ಆಗ್ರಹಿಸುತ್ತೇನೆ.
ನನ್ನ ವಿರುದ್ಧ ರೂಪಾ ಐಪಿಎಸ್ ಅವರು ರೂಪಾ ಅವರ ಮೇಲೆ ಸರ್ವೀಸ್ ಕಂಡಕ್ಟ್ ರೂಲ್ಸ್ (ಸೇವಾ ನಡತೆ ನಿಯಮಗಳ) ಉಲ್ಲಂಘನೆಗಾಗಿ ಶಿಸ್ತು ಕ್ರಮ ಕೈಗೊಳ್ಳುವಂತೆ ನಾನು ಸಕ್ಷಮ ಪ್ರಾಧಿಕಾರದ ಮುಂದೆ ದೂರು ಸಲ್ಲಿಸಲಿದ್ದೇವೆ. ಹಾಗೂ, ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ರೂಪಾ ಐಪಿಎಸ್ ಅವರ ಮೇಲೆ ಎಲಾ ರೀತಿಯ ಕಾನೂನಿನ ಕ್ರಮಗಳನ್ನ ಕೈಗೊಳ್ಳುತ್ತೇನೆ.
ಇಂತಹ ಆಧಾರರಹಿತ ಆರೋಪಗಳಿಂದ ನಾನು ಸ್ವಲ್ಪವೂ ವಿಚಲತಳಾಗದೆ, ಸರ್ಕಾರಿ ಅಧಿಕಾರಿಯಾಗಿ ನನ್ನ ಕರ್ತವ್ಯಗಳನ್ನು ಶ್ರದ್ಧೆ ಮತ್ತು ನಿಷ್ಠೆಯಿಂದ ಮುಂದುವರೆಸುತ್ತೇನೆ ಎಂಬ ಅಂಶವನ್ನು ಇಂತಹ ಕ್ಷುಲ್ಲಕ ವ್ಯಕ್ತಿಗಳ ಗಮನಕ್ಕೆ ತರಬಯಸುತ್ತೇನೆ ಎಂದು ಮಾಧ್ಯಮ ಹೇಳಿಕೆಯಲ್ಲಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k