ಬೆಳಗಾವಿ: ಮಾಜಿ ಸಿಎಂ ಸಿದ್ದರಾಮಯ್ಯ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ನೀಡಿದ ಹೇಳಿಕೆಗೆ ತಿರುಗೇಟು ನೀಡಿರುವ ಶಾಸಕ ಜಮೀರ್ ಅಹ್ಮದ್ ಅವರು, ಇಬ್ರಾಹಿಂ ಸಾಹೇಬ್ರು ಸೋತು ಸುಣ್ಣವಾಗಿದ್ದಾರೆ. ಅದೇ ರೀತಿ ಎಲ್ಲವನ್ನೂ ತಿಳಿದುಕೊಂಡಿದ್ದಾರೆ ಎಂದರು.
Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2013ರ ಚುನಾವಣೆಯಲ್ಲಿ ಅವರ ತವರು ಕ್ಷೇತ್ರ ಭದ್ರಾವತಿಯಲ್ಲಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿ ಸೋತಿದ್ದಾರೆ. ಸಿದ್ದರಾಮಯ್ಯ ನಿಯಮ ಉಲ್ಲಂಘಿಸಿ ಹಾಲಿ ಶಾಸಕರಿಗೆ ಟಿಕೆಟ್ ತಪ್ಪಿಸಿ ಇಬ್ರಾಹಿಂಗೆ ಟಿಕೆಟ್ ಕೊಡಿಸಿದ್ದರು. ರಾಹುಲ್ ಗಾಂಧಿ, ಸೋನಿಯಾ ಗಾಂಧಿಗೆ ಹೇಳಿ ಸಿದ್ದರಾಮಯ್ಯ ಟಿಕೆಟ್ ಕೊಡಿಸಿದ್ದರು. ಮೂರನೇ ಸ್ಥಾನಕ್ಕೆ ಕುಸಿದು ಸೋಲು ಕಂಡರು ಎಂದು ಟೀಕಿಸಿದರು. ಇದನ್ನೂ ಓದಿ: ಹಳ್ಳದಲ್ಲಿ ಕೊಚ್ಚಿ ಹೋಗಿದ್ದವ ಶವವಾಗಿ ಪತ್ತೆ – ತಕ್ಷಣವೇ ಐದು ಲಕ್ಷ ರೂ. ಪರಿಹಾರ ವಿತರಣೆ
Advertisement
Advertisement
ಸಿದ್ದರಾಮಯ್ಯ ಅವರಿಗೆ ಚಾಮರಾಜಪೇಟೆಯಿಂದ ಸ್ಪರ್ಧೆ ಮಾಡಿ ಎಂದು ನಾನೇ ಒತ್ತಡ ಹಾಕುತ್ತಿದ್ದೇನೆ. ಅವರು ಎಂದಿಗೂ ಯಾರನ್ನೂ ಸ್ಪರ್ಧೆ ಮಾಡುವ ಬಗ್ಗೆ ಒತ್ತಡ ಹೇರಿಲ್ಲ. ಸಿದ್ದರಾಮಯ್ಯ ಸ್ಪರ್ಧೆಗೆ ಎಲ್ಲ ಕಡೆಯಿಂದ ಒತ್ತಡ ಬರುತ್ತಿದೆ. ಹರಿಹರ, ಕೋಲಾರ, ಚಿಕ್ಕಪೇಟೆ ಸೇರಿ ರಾಜ್ಯದ ಎಲ್ಲ ಮೂಲೆಗಳಿಂದ ಸ್ಪರ್ಧಿಸುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಿದರು.
Advertisement
ಮಾಜಿ ಸಚಿವ ಈಶ್ವರಪ್ಪ ಮುಸ್ಲಿಮರ ಮತಗಳು ಬೇಡ ಎನ್ನುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹಗಲು ಹೊತ್ತಿನಲ್ಲಿ ಬೇಡ ಎನ್ನುತ್ತಾರೆ. ರಾತ್ರಿ ಮುಸ್ಲಿಂ ಮತಗಳನ್ನು ಕೇಳುತ್ತಾರೆ. ಈ ಬಗ್ಗೆ ನೀವೇ ಈಶ್ವರಪ್ಪ ಅವರನ್ನು ಕೇಳಿ ವ್ಯಂಗ್ಯವಾಡಿದರು. ಇದನ್ನೂ ಓದಿ: ದ್ರೌಪದಿ ಮುರ್ಮು ಗೆಲುವಿಗೆ ಪುಟಿನ್ ಅಭಿನಂದನೆ ಸಂದೇಶ