ದುಬೈ: 2024 ರಿಂದ 2031 ಮುಂದಿನ 10 ವರ್ಷಗಳ ವರೆಗೆ ನಡೆಯಲಿರುವ ಐಸಿಸಿ ಟೂರ್ನಿಗಳ ಆತಿಥ್ಯ ವಹಿಸಲಿರುವ ದೇಶಗಳ ಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ (ಐಸಿಸಿ) ಬಿಡುಗಡೆ ಮಾಡಿದೆ. ಏಕದಿನ, ಟಿ20 ವಿಶ್ವಕಪ್ ಸೇರಿ 3 ಟೂರ್ನಿಗೆ ಭಾರತ ಆತಿಥ್ಯ ವಹಿಸಲಿದ್ದು, ಪಾಕಿಸ್ತಾನಕ್ಕೆ ಚಾಂಪಿಯನ್ ಟ್ರೋಫಿ ಆತಿಥ್ಯ ನೀಡಲಾಗಿದೆ.
Advertisement
2014 ರಿಂದ 2031ರ ವರೆಗೆ 8 ಐಸಿಸಿ ಟೂರ್ನಿಗಳನ್ನು 14 ದೇಶಗಳು ಆತಿಥ್ಯ ವಹಿಸಲಿದೆ. ಈ ಎಲ್ಲಾ ಟೂರ್ನಿಗಳ ಆತಿಥ್ಯದ ಸಿಂಹಪಾಲು ಭಾರತದ ಪಾಲಾಗಿದ್ದು, ಭಾರತದಲ್ಲಿ 2026ರ ಟಿ20 ವಿಶ್ವಕಪ್, 2029ರ ಚಾಂಪಿಯನ್ಸ್ ಟ್ರೋಫಿ ಮತ್ತು 2031ರ ಏಕದಿನ ವಿಶ್ವಕಪ್ ಆತಿಥ್ಯ ಭಾರತದ ಪಾಲಾಗಿದೆ. ಅಚ್ಚರಿ ಎಂಬಂತೆ 2025ರ ಚಾಂಪಿಯನ್ಸ್ ಟ್ರೋಫಿ ಆಯೋಜಿಸಲು ಪಾಕಿಸ್ತಾನಕ್ಕೆ ಐಸಿಸಿ ಗ್ರೀನ್ ಸಿಗ್ನಲ್ ನೀಡಿದ್ದು, ಈ ಮೂಲಕ ಪಾಕಿಸ್ತಾನದಲ್ಲಿ 29 ವರ್ಷಗಳ ಬಳಿಕ ಮೊದಲ ಗ್ಲೋಬಲ್ ಟೂರ್ನಿ ನಡೆಸಲು ಪಾಕಿಸ್ತಾನ ಸಿದ್ಧವಾಗುತ್ತಿದೆ. ಈ ನಡುವೆ ಪಾಕಿಸ್ತಾನದಲ್ಲಿ ಆಡಲು ಇತರ ದೇಶಗಳ ತಂಡ ಒಪ್ಪಿಕೊಳ್ಳಲಿದೆಯೇ ಎಂಬ ಆತಂಕವಿದೆ. ಇದನ್ನೂ ಓದಿ: 5 ಕೋಟಿ ಬೆಲೆಯ 2 ವಾಚ್ ಸೀಜ್: ಹಾರ್ದಿಕ್ ಪಾಂಡ್ಯ ಹೇಳಿದ್ದೇನು?
Advertisement
Advertisement
ದುಬೈನಲ್ಲಿ ಕೆಲದಿನಗಳ ಹಿಂದೆ ಮುಗಿದಿದ್ದ 2021ರ ಟಿ20 ವಿಶ್ವಕಪ್ ಬಳಿಕ 2022ರಲ್ಲಿ ನಡೆಯಲಿರುವ ಟಿ20 ವಿಶ್ವಕಪ್‍ಗೆ ಆಸ್ಟ್ರೇಲಿಯಾ ಆತಿಥ್ಯ ವಹಿಸಲಿದ್ದು, 2024ರಲ್ಲಿ ನಡೆಯುವ ಟಿ20 ವಿಶ್ವಕಪ್ ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಜಂಟಿ ಆತಿಥ್ಯ ವಹಿಸಲಿದೆ. 2026ರಲ್ಲಿ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಟಿ20 ವಿಶ್ವಕಪ್ ಆಯೋಜಿಸಲಿದೆ. 2028ರ ಟಿ20 ವಿಶ್ವಕಪ್ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಜಂಟಿಯಾಗಿ ನಡೆಸಲಿದೆ. 2030 ಟಿ20 ವಿಶ್ವಕಪ್ ಇಂಗ್ಲೆಂಡ್, ಐರ್ಲೆಂಡ್, ಸ್ಕಾಟ್ಲೆಂಡ್ ಆತಿಥ್ಯದಲ್ಲಿ ನಡೆಸಲು ಐಸಿಸಿ ತೀರ್ಮಾನಿಸಿದೆ. ಇದನ್ನೂ ಓದಿ: IPLನಲ್ಲಿ ಬೇಡವಾಗಿದ್ದ ವಾರ್ನರ್ ಟಿ20 ವಿಶ್ವಕಪ್‍ನಲ್ಲಿ ದಾಖಲೆಯ ಒಡೆಯ
Advertisement
Are you ready for the best-ever decade of men’s white-ball cricket?
Eight new tournaments announced ????
14 different host nations confirmed ????
Champions Trophy officially returns ????https://t.co/OkZ2vOpvVQ pic.twitter.com/uwQHnna92F
— ICC (@ICC) November 16, 2021
2027ರ ಏಕದಿನ ವಿಶ್ವಕಪ್ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ, ನಮೀಮಿಯಾ ಆತಿಥ್ಯ ವಹಿಸಲಿದ್ದು, 2031 ರಲ್ಲಿ ಭಾರತ ಮತ್ತು ಬಾಂಗ್ಲಾದೇಶ ಜಂಟಿಯಾಗಿ ಏಕದಿನ ವಿಶ್ವಕಪ್ ಟೂರ್ನಿ ನಡೆಸಿಕೊಡಲಿದೆ. 2023ರಲ್ಲಿ ಚಾಂಪಿಯನ್ ಟ್ರೋಫಿ ಪಾಕಿಸ್ತಾನದಲ್ಲಿ ನಡೆಯಲಿದ್ದು, 2029ರ ಚಾಂಪಿಯನ್ ಟ್ರೋಫಿ ಭಾರತದಲ್ಲಿ ನಡೆಯಲಿದೆ. ಇದನ್ನೂ ಓದಿ: ಟಿ20 ವಿಶ್ವಕಪ್ ಗೆದ್ದ ಖುಷಿಗೆ ಬೂಟ್‍ನಲ್ಲಿ ಬಿಯರ್ ಸೇವಿಸಿದ ಆಸ್ಟ್ರೇಲಿಯಾ ಆಟಗಾರರು