ದುಬೈ: ಆಸ್ಟ್ರೇಲಿಯಾದಲ್ಲಿ ನಡೆಯಲಿರುವ 2022ರ ಟಿ20 ವಿಶ್ವಕಪ್‍ನ ವೇಳಾಪಟ್ಟಿಯನ್ನು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಪ್ರಕಟಿಸಿದೆ.
Advertisement
ಟೀಂ ಇಂಡಿಯಾ ಟೂರ್ನಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಅಕ್ಟೋಬರ್ 23 ರಂದು ಭಾರತ ಹಾಗೂ ಪಾಕಿಸ್ತಾನ ನಡುವೆ ಪಂದ್ಯ ನಡೆಯಲಿದೆ. 8ನೇ ಆವೃತ್ತಿಯ ಟಿ20 ವಿಶ್ವಕಪ್ ಆಸ್ಟ್ರೇಲಿಯಾ 7 ಮೈದಾನದಲ್ಲಿ ನಡೆಯಲಿದ್ದು, ಅಡಿಲೇಡ್, ಬ್ರಿಸ್ಬೇನ್, ಗೀಲಾಂಗ್, ಹೊಬಾರ್ಟ್, ಮೆಲ್ಬರ್ನ್, ಪರ್ತ್ ಮತ್ತು ಸಿಡ್ನಿಯಲ್ಲಿ ಟೂರ್ನಿಯ ಎಲ್ಲಾ ಪಂದ್ಯಗಳು ನಡೆಯಲಿದ್ದು, ಟೂರ್ನಿಯ ಫೈನಲ್ ಪಂದ್ಯಾಟ ನವೆಂಬರ್ 13 ರಂದು ನಡೆಯಲಿದೆ. ಇದನ್ನೂ ಓದಿ: ಒಂದೇ ರೈಡ್‍ನಲ್ಲಿ 8 ಅಂಕ – ವಿವಾದಾತ್ಮಕ ತೀರ್ಪು, ಸೋತ ಬುಲ್ಸ್
Advertisement
Advertisement
ಒಟ್ಟು 16 ವಿಶ್ವದ ಬಲಾಢ್ಯ ತಂಡಗಳು ವಿಶ್ವಕಪ್‍ಗಾಗಿ ಸೆಣಸಾಡಲಿದ್ದು, 45 ಪಂದ್ಯಗಳು ನಡೆಯಲಿದೆ. ಗ್ರೂಪ್ A ವಿಭಾಗದಲ್ಲಿ ಇಂಗ್ಲಂಡ್, ನ್ಯೂಜಿಲೆಂಡ್, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ ಸ್ಥಾನಪಡೆದಿದ್ದರೆ, ಗ್ರೂಪ್ B ವಿಭಾಗದಲ್ಲಿ ಭಾರತ, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಬಾಂಗ್ಲದೇಶ ಸ್ಥಾನ ಪಡೆದುಕೊಂಡಿದೆ.
Advertisement
????️ Mark The Dates
Here's #TeamIndia's schedule for the #T20WorldCup ⬇️ pic.twitter.com/dlKLiM4tG7
— BCCI (@BCCI) January 21, 2022
2021ರ ಟಿ20 ವಿಶ್ವಕಪ್‍ನಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ಸೋಲು ಕಂಡಿತ್ತು. ಈ ಸೋಲಿನ ಸೇಡು ತೀರಿಸಲು ಭಾರತ ಸಜ್ಜಾಗುತ್ತಿದೆ. ಇದನ್ನೂ ಓದಿ: ಐಸಿಸಿ ವರ್ಷದ ಟಿ20, ಏಕದಿನ ತಂಡದಲ್ಲಿಲ್ಲ ಭಾರತೀಯರು – ಪಾಕ್ ಆಟಗಾರರ ಮೇಲುಗೈ