ದುಬೈ: ಕ್ರೀಡೆಯ ಸಮಗ್ರತೆ ಮತ್ತು ಆಟಗಾರರ ಸುರಕ್ಷತೆ ಹೆಚ್ಚಿಸುವ ಉದ್ದೇಶದಿಂದ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಲ್ಲಿ ತೃತೀಯ ಲಿಂಗಿಗಳಿಗೆ ನಿಷೇಧ ಹೇರಿರುವುದಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ತಿಳಿಸಿದೆ.
Advertisement
ಐಸಿಸಿ ಸಭೆಯಲ್ಲಿ (ICC Meeting) ಈ ನಿರ್ಧಾರ ಪ್ರಕಟಿಸಲಾಗಿದೆ. ಈ ನಿರ್ಧಾರವು ಮಹಿಳಾ ಕ್ರಿಕೆಟ್ನ ಸಾರವನ್ನು ರಕ್ಷಿಸುವ ಗುರಿ ಹೊಂದಿದೆ. ಆಟದ ಸಮಗ್ರತೆ, ಸುರಕ್ಷತೆ ಮತ್ತು ಒಳಗೊಳ್ಳುವಿಕೆಯನ್ನು ಕೇಂದ್ರೀಕರಿಸಿದ ಈ ನಿಯಮಗಳನ್ನ ಮಾಡಲಾಗಿದ್ದು, 2 ವರ್ಷಗಳಲ್ಲಿ ಮೌಲ್ಯಮಾಪನಕ್ಕೆ ಒಳಗಾಗುತ್ತವೆ ಎಂಬುದಾಗಿ ತಿಳಿಸಿದೆ. ಇದನ್ನೂ ಓದಿ: ವಿಶ್ವಕಪ್ ಮುಗೀತು, T20 ಹಂಗಾಮ ಶುರು – ಟೀಂ ಇಂಡಿಯಾದ ಮುಂದಿದೆ ಸಾಲು ಸಾಲು ಸರಣಿ!
Advertisement
Advertisement
ಜನನದ ಸಮಯದಲ್ಲಿ ಪುರುಷನಾಗಿದ್ದು, ಪುರುಷನಾಗಿಯೇ ಪ್ರೌಢಾವಸ್ಥೆಗೆ ಒಳಗಾದ ವ್ಯಕ್ತಿ, ನಂತರದಲ್ಲಿ ಲಿಂಗ ಬದಲಾವಣೆ ಕಾರ್ಯವಿಧಾನಗಳಿಗೆ ಒಳಗಾಗಿದ್ದರೇ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ಅರ್ಹತೆ ಪಡೆಯುವುದಿಲ್ಲ ಎಂಬುದನ್ನು ಐಸಿಸಿ ದೃಢೀಕರಿಸಿದೆ. 9 ತಿಂಗಳ ಸಮಾಲೋಚನೆಯ ನಂತರ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ರಿಚರ್ಡ್ ಥಾಂಪ್ಸನ್ ಸೇರಿದಂತೆ ಐಸಿಸಿ ಮಂಡಳಿಯು ಈ ಲಿಂಗ ಅರ್ಹತಾ ನಿಯಮಗಳನ್ನು ಅಂತಿಮಗೊಳಿಸಿತು. ಇದನ್ನೂ ಓದಿ: 3 ಬಾರಿ ಆತ್ಮಹತ್ಯೆಗೆ ಯೋಚಿಸಿದ್ದ ಶಮಿ – ಕೋಪವನ್ನೇ ಶಕ್ತಿಯಾಗಿಸಿ ಪಿಚ್‌ಗೆ ಇಳಿದಿದ್ದೇ ರೋಚಕ!