ದುಬೈ: ಈ ಬಾರಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ(ICC Champions Trophy) ಭಾರತ ದಾಖಲೆ ಬರೆದಿದೆ. ಲೀಗ್‌ನಲ್ಲಿ ನಡೆದ ಎಲ್ಲಾ ಮೂರು ಪಂದ್ಯಗಳನ್ನು ಗೆದ್ದ ಏಕೈಕ ತಂಡ ಎಂಬ ಹೆಗ್ಗಳಿಕೆಗೆ ಭಾರತ (Team India) ಪಾತ್ರವಾಗಿದೆ.
ದುಬೈನಲ್ಲಿ ಬಾಂಗ್ಲಾ ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿದ್ದ ಭಾರತ ಪಾಕಿಸ್ತಾನದ (Pakistan) ವಿರುದ್ಧವೂ 6 ವಿಕೆಟ್‌ಗಳ ಜಯ ಸಾಧಿಸಿತ್ತು. ಈಗ ನ್ಯೂಜಿಲೆಂಡ್ (New Zealand) ವಿರುದ್ಧ 44 ರನ್‌ಗಳ ಜಯ ಸಾಧಿಸಿದೆ. ಈ ಮೂಲಕ ಹ್ಯಾಟ್ರಿಕ್ ಗೆಲುವಿನೊಂದಿಗೆ ಸೆಮಿ ಫೈನಲ್ ಪ್ರವೇಶಿಸಿದೆ. ಇದನ್ನೂ ಓದಿ: ವರುಣ್ ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್ ಬರ್ನ್ – ಭಾರತಕ್ಕೆ 44 ರನ್‌ಗಳ ಭರ್ಜರಿ ಜಯ
Advertisement
Advertisement
ಗ್ರೂಪ್ ಬಿ ನಲ್ಲಿ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಪಂದ್ಯ ಮಳೆಯಿಂದ ರದ್ದಾಗಿತ್ತು. ಹೀಗಾಗಿ ಎರಡು ತಂಡಗಳಿಗೆ ತಲಾ ಒಂದೊಂದು ಅಂಕವನ್ನು ಹಂಚಲಾಗಿತ್ತು.
Advertisement
ಭಾರತ 6 ಅಂಕ ಸಂಪಾದಿಸಿದ್ದರೆ ದಕ್ಷಿಣ ಆಫ್ರಿಕಾ 5 ಅಂಕ ಸಂಪಾದಿಸಿ ಮೊದಲ ಸ್ಥಾನದಲ್ಲಿದೆ. ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ತಲಾ 4 ಅಂಕ ಸಂಪಾದಿಸಿದೆ.
Advertisement
ಮಂಗಳವಾರ ಭಾರತ ಮತ್ತು ಆಸ್ಟ್ರೇಲಿಯಾ ಮಧ್ಯೆ ಮೊದಲ ಸೆಮಿಫೈನಲ್ ಪಂದ್ಯ ದುಬೈನಲ್ಲಿ ನಡೆದರೆ ಬುಧವಾರ ದಕ್ಷಿಣ ಆಫ್ರಿಕಾ (South Africa) ಮತ್ತು ನ್ಯೂಜಿಲೆಂಡ್ ಮಧ್ಯೆ ಎರಡನೇ ಸೆಮಿಫೈನಲ್ ನಡೆಯಲಿದೆ. ಭಾನುವಾರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ ನಡೆಯಲಿದೆ.