ಮುಂಬೈ: ICC ಚಾಂಪಿಯನ್ಸ್ ಟ್ರೋಫಿ 2025 ರ ಪಂದ್ಯಗಳ ಆಯೋಜನೆ ಸ್ಥಳದ ಕುರಿತು ಎದ್ದಿದ್ದ ಗೊಂದಲ ಕೊನೆಗೊಂಡಿದೆ. ತಿಂಗಳ ವಿಳಂಬದ ನಂತರ, ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಅಂತಿಮವಾಗಿ ಸ್ಥಳಗಳನ್ನು ಅಧಿಕೃತವಾಗಿ ಘೋಷಿಸಿದೆ.
ICC ಪುರುಷರ ಚಾಂಪಿಯನ್ಸ್ ಟ್ರೋಫಿ 2025 ಅನ್ನು ಪಾಕಿಸ್ತಾನ ಮತ್ತು ತಟಸ್ಥ ಸ್ಥಳದಲ್ಲಿ ಆಯೋಜಿಸಲಾಗುವುದು ಎಂದು ICC ಹೇಳಿಕೆಯಲ್ಲಿ ತಿಳಿಸಿದೆ. ಇದರರ್ಥ ಭಾರತವು ತನ್ನ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಡುತ್ತದೆ. ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಪಂದ್ಯಗಳನ್ನು ತಟಸ್ಥ ಸ್ಥಳಗಳಲ್ಲಿ ಆಡಲಾಗುವುದು ಎಂದು ಜಯ್ ಶಾ ನೇತೃತ್ವದ ಮಂಡಳಿ ಘೋಷಿಸಿದೆ.
Advertisement
2024-2027 ರ ಐಸಿಸಿ ಈವೆಂಟ್‌ಗಳಲ್ಲಿ ಭಾರತ ಮತ್ತು ಪಾಕಿಸ್ತಾನ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಡಲಾಗುವುದು ಎಂದು ಐಸಿಸಿ ಮಂಡಳಿಯು ಇಂದು ದೃಢಪಡಿಸಿದೆ.