ಪುಣೆ: ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಭಾರತದ ವಿರುದ್ಧ ನಡೆದ ವಿಶ್ವಕಪ್ (World Cup) ಪಂದ್ಯದಲ್ಲಿ ಬಾಂಗ್ಲಾದೇಶ ತಂಡವು (Bangladesh Team) ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 256 ರನ್ ಗಳಿಸಿ, ಭಾರತಕ್ಕೆ 257 ರನ್‌ಗಳ ಗುರಿ ನೀಡಿದೆ.
Advertisement
ಟಾಸ್ ಗೆದ್ದು ಮೊದಲು ಕ್ರೀಸ್‌ಗಿಳಿದ ಬಾಂಗ್ಲಾದೇಶದ ಪರ ಆರಂಭಿಕರಾಗಿ ಕಣಕ್ಕಿಳಿದ ತಂಜಿದ್ ಹಸನ್ ಹಾಗೂ ಲಿಟ್ಟನ್ ದಾಸ್ ಜೋಡಿ ಉತ್ತಮ ಆರಂಭ ನೀಡಿತ್ತು. ಮೊದಲ ವಿಕೆಟ್‌ಗೆ 14.4 ಓವರ್‌ಗಳಲ್ಲಿ 93 ಬಾರಿಸಿತ್ತು. ಈ ಜೋಡಿ ವಿಕೆಟ್ ಬೀಳುತ್ತಿದ್ದಂತೆ ನಿಧಾನಗತಿಯ ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ಸತತ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಾ ಸಾಗಿತು. 37.2 ಓವರ್‌ಗಳಲ್ಲಿ 179 ರನ್‌ಗಳಿಗೆ ಪ್ರಮುಖ 5 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಗಿತ್ತು. ಆದ್ರೆ ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಮುಶಾಫ್ಕುರ್ ರಹೀಮ್ ಮತ್ತು ಮಹಮೂದುಲ್ಲಾ 32 ರನ್‌ಗಳ ಸಣ್ಣ ಪ್ರಮಾಣದ ಜೊತೆಯಾಟದಿಂದ ತಂಡಕ್ಕೆ ಚೇತರಿಕೆ ನೀಡಿದರು. ಅಂತಿಮವಾಗಿ ಬಾಂಗ್ಲಾದೇಶ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 256 ರನ್ ಗಳಿಸಿತು. ಇದನ್ನೂ ಓದಿ: ರೋಹಿತ್ ಶರ್ಮಾಗೆ ಶಾಕ್ ಕೊಟ್ಟ ಮುಂಬೈ ಪೊಲೀಸರು
Advertisement
Advertisement
ತಂಜಿದ್ ಹಸನ್ 51 ರನ್ (43 ಎಸೆತ, 5 ಸಿಕ್ಸರ್, 3 ಬೌಂಡರಿ), ಲಿಟ್ಟನ್ ದಾಸ್ 66 ರನ್ (82 ಎಸೆತ, 7 ಬೌಂಡರಿ), ನಜ್ಮುಲ್ ಹೊಸೈನ್ ಶಾನ್‌ಟೊ 8 ರನ್, ಮೆಹದಿ ಹಸನ್ ಮಿರ್ಜಾ 3 ರನ್, ತೌಹಿದ್ ಹರಿದಿ 16 ರನ್, ಮುಶಾಫ್ಕುರ್ ರಹೀಮ್ 38 ರನ್ (46 ಎಸೆತ, 1 ಸಿಕ್ಸರ್, 1 ಬೌಂಡರಿ), ಮಹಮ್ಮದುಲ್ಲಾ 46 ರನ್ (36 ಎಸೆತ, 3 ಬೌಂಡರಿ, 3 ಸಿಕ್ಸರ್), ನಸುಮ್ ಅಹ್ಮದ್ 14 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರೆ, ಮುಸ್ತಫಿಜುರ್ ರೆಹಮಾನ್ 1 ರನ್, ಶರೀಫುಲ್ ಇಸ್ಲಾಂ 7 ರನ್‌ಗಳಿಸಿ ಅಜೇಯರಾಗುಳಿದರು. ಇದನ್ನೂ ಓದಿ: ಇಂಗ್ಲೆಂಡಿಗೆ ಶಾಕ್ – ಅಫ್ಘಾನ್ ಗೆಲುವಿನ ಹಿಂದಿದೆ ಭಾರತದ ನೆರವು
Advertisement
ಮಿಂಚಿದ ಬೌಲರ್ಸ್: ಇನ್ನೂ ಆರಂಭದಿಂದಲೂ ಬೌಲಿಂಗ್‌ನಲ್ಲಿ ಪ್ರಾಬಲ್ಯ ಮೆರೆಯುತ್ತಿರುವ ಟೀಂ ಇಂಡಿಯಾ ಬೌಲರ್ಸ್‌ಗಳು ಬಾಂಗ್ಲಾದೇಶ ವಿರುದ್ಧವೂ ಹಿಡಿತ ಸಾಧಿಸಿದ್ದಾರೆ. ಟೀಂ ಇಂಡಿಯಾ ಪರ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದರೆ, ಶಾರ್ದೂಲ್ ಠಾಕೂರ್ ಮತ್ತು ಕುಲ್ದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದ್ದಾರೆ. ಇದನ್ನೂ ಓದಿ: ಗೋ ಬ್ಯಾಕ್ ರಿಜ್ವಾನ್ – ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆಯ ಬಿಸಿ
Web Stories