ಕೋಲ್ಕತ್ತಾ: ಸಂಘಟಿತ ಬೌಲಿಂಗ್ ದಾಳಿ ಹಾಗೂ ನಾಯಕ ಸ್ಕಾಟ್ ಎಡ್ವರ್ಡ್ಸ್ (Scott Edwards) ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ನೆದರ್ಲೆಂಡ್ಸ್ ತಂಡವು ಬಾಂಗ್ಲಾದೇಶದ (Bangladesh) ವಿರುದ್ಧ 87 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಬಲಿಷ್ಠ ಇಂಗ್ಲೆಂಡ್ (England) ತಂಡವನ್ನು ಹಿಂದಿಕ್ಕಿ 8ನೇ ಸ್ಥಾನಕ್ಕೆ ಜಿಗಿದಿದೆ.
2019 – World Cup winners.
2023 – bottom of the table. pic.twitter.com/dKR3aClBoO
— Mufaddal Vohra (@mufaddal_vohra) October 28, 2023
Advertisement
ಇಲ್ಲಿನ ಈಡನ್ ಗಾರ್ಡನ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನೆದರ್ಲೆಂಡ್ಸ್ 50 ಓವರ್‌ಗಳಲ್ಲಿ 229 ರನ್‌ಗಳಿಗೆ ಆಲೌಟ್ ಆಗಿತ್ತು. 230 ರನ್‌ಗಳ ಗುರಿ ಬೆನ್ನತ್ತಿದ ಬಾಂಗ್ಲಾದೇಶ 42.2 ಓವರ್‌ಗಳಲ್ಲೇ 142 ರನ್ ಗಳಿಗೆ ಸರ್ವಪತನ ಕಂಡಿತು. ಇದನ್ನೂ ಓದಿ: World Cup 2023: ಸಿಕ್ಸರ್, ಬೌಂಡರಿಗಳ ಸುರಿಮಳೆ – ಭಾರತದ ನೆಲದಲ್ಲಿ ಇತಿಹಾಸ ಸೃಷ್ಟಿಸಿದ ಆಸೀಸ್
Advertisement
ಚೇಸಿಂಗ್ ಆರಂಭಿಸಿದ ಬಾಂಗ್ಲಾದೇಶ ತಂಡದಲ್ಲಿ ಮೆಹಿದಿ ಹಸನ್ ಮಿರಾಜ್ 35 ರನ್, ಮಹಮ್ಮದುಲ್ಲಾ ಹಾಗೂ ಮುಸ್ತಫಿಜುರ್ ರೆಹಮಾನ್ ತಲಾ 20 ರನ್ ಗಳಿಸಿದ್ದು ಬಿಟ್ಟರೆ, ಉಳಿದ ಯಾರೊಬ್ಬರೂ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಉಳಿಯದೇ ಡಚ್ಚರ ಬೌಲಿಂಗ್ ದಾಳಿಗೆ ತತ್ತರಿಸಿದರು. ನಾಯಕ ಶಕೀಬ್ ಅಲ್ ಹಸನ್ (Shakib Al Hasan) ಕೂಡ 5 ರನ್‌ಗಳಿಗೆ ವಿಕೆಟ್ ಒಪ್ಪಿಸಿದರು. ಅಂತಿಮವಾಗಿ 142 ರನ್‌ಗಳಿಸಲಷ್ಟೇ ಸಾಧ್ಯವಾಯಿತು.
Advertisement
Advertisement
ನೆದರ್ಲೆಂಡ್ಸ್ ಪರ ಪಾಲ್ ವ್ಯಾನ್ ಮೀಕೆರೆನ್ 4 ವಿಕೆಟ್ ಕಬಳಿಸಿದರೆ, ಬಾಸ್ ಡಿ ಲೀಡೆ 2 ವಿಕೆಟ್, ಕಾಲಿನ್ ಅಕರ್ಮನ್, ಲೋಗನ್ ವ್ಯಾನ್ ಬೀಕ್, ಆರ್ಯನ್ ದತ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು. ಇದನ್ನೂ ಓದಿ: ಧರ್ಮಶಾಲಾ ಅಂಗಳದಲ್ಲಿ ವಂದೇ ಮಾತರಂ ಝೇಂಕಾರ – ಅದ್ಭುತ ವೀಡಿಯೋ ನೀವೇ ನೋಡಿ
ಇದಕ್ಕೂ ಮುನ್ನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನೆದರ್ಲೆಂಡ್ಸ್ ಆರಂಭದಲ್ಲಿ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೀಡಾದರೂ ಮಧ್ಯಮ ಕ್ರಮಾಂಕದ ಬ್ಯಾಟರ್ ನೆರವಿನಿಂದ ಚೇತರಿಸಿಕೊಂಡಿತು. ವೆಸ್ಲಿ ಬ್ಯಾರೆಸಿ 41 ರನ್, ನಾಯಕ ಸ್ಕಾಟ್ ಎಡ್ವರ್ಡ್ಸ್ 68 ರನ್, ಸೈಬ್ರಾಂಡ್ ಎಂಗಲ್‌ಬ್ರೆಕ್ಟ್ 35 ರನ್ ಹಾಗೂ ಲೋಗನ್ ವ್ಯಾನ್ ಬೀಕ್ 23 ರನ್‌ಗಳ ಕೊಡುಗೆ ನೀಡುವ ಮೂಲ ತಂಡವನ್ನು 200 ರನ್‌ಗಳ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.
Web Stories