ಟೆಲ್ ಅವಿವ್: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿರುವ ಹೊತ್ತಿನಲ್ಲೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಹಾಗೂ ಇಸ್ರೇಲ್‌ನ ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ (Yoav Gallant) ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ (ICC) ಬಂಧನ ವಾರೆಂಟ್ ಹೊರಡಿಸಿದೆ.
ಗಾಜಾ ಪಟ್ಟಿಯಲ್ಲಿನ (Gaza Strip) ಯುದ್ಧ ಹಾಗೂ 2023ರ ಅಕ್ಟೋಬರ್ ನಲ್ಲಿ ನಡೆದ ಘರ್ಷಣೆಗಳಲ್ಲಿ ಯುದ್ಧಾಪರಾಧ ಹಾಗೂ ಮಾನವೀಯತೆಯ ವಿರುದ್ಧ ಅಪರಾಧ ಎಸಗಿದ್ದಾರೆ ಎಂಬ ಆರೋಪದ ಮೇಲೆ ಕೋರ್ಟ್ ನೆತನ್ಯಾಹು ಹಾಗೂ ಗ್ಯಾಲಂಟ್ ವಿರುದ್ಧ ಬಂಧನ ವಾರೆಂಟ್ ಜಾರಿಗೊಳಿಸಿದೆ. ಇದನ್ನೂ ಓದಿ: Uttar Pradesh| ಟ್ರಕ್‌ಗೆ ಹಿಂಬದಿಯಿಂದ ಡಬಲ್ ಡೆಕ್ಕರ್ ಬಸ್ ಡಿಕ್ಕಿ – ಐವರು ಸಾವು, 15 ಮಂದಿಗೆ ಗಾಯ
Advertisement
Advertisement
ಜೊತೆಗೆ ಹಮಾಸ್ (Hamas) ಮಿಲಿಟರಿ ಪಡೆಯ ಮುಖ್ಯಸ್ಥರಾದ ಮೊಹಮ್ಮದ್ ಡೆಫ್ (Mohammed Deif) ಹಾಗೂ ಮುಖ್ಯಸ್ಥ ಮೊಹಮ್ಮದ್ ದಿಯಾಬ್ ಇಬ್ರಾಹಿಂ ಅಲ್-ಮಸ್ರಿ ವಿರುದ್ಧವೂ ಬಂಧನ ವಾರೆಂಟ್ ಹೊರಡಿಸಿದೆ. ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾದ ICBM ದಾಳಿ – 60 ವರ್ಷಗಳ ಇತಿಹಾಸದಲ್ಲೇ ಯುದ್ಧಕ್ಕೆ ಕ್ಷಿಪಣಿ ಮೊದಲ ಬಳಕೆ
Advertisement
ಕಳೆದ ಮೇ ತಿಂಗಳಿನಲ್ಲಿ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್‌ನ ಮುಖ್ಯ ಪ್ರಾಸಿಕ್ಯೂಟರ್ ಕರೀಮ್ ಖಾನ್ ಅವರು ಇಸ್ರೇಲ್ ನಾಯಕರ ವಿರುದ್ಧ ಯುದ್ಧಾಪರಾಧಗಳು ಹಾಗೂ ಮಾನವೀಯತೆಯ ವಿರುದ್ಧದದ ಅಪರಾಧಗಳಿಗಾಗಿ ವಾರೆಂಟ್ ಜಾರಿಗೊಳಿಸುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು. ಈ ಮನವಿಯನ್ನು ಕೋರ್ಟ್ ಪುರಸ್ಕರಿಸಿತು. ಐಸಿಸಿಯ ಪ್ರೀ-ಟ್ರಯಲ್ ಚೇಂಬರ್ I, ತ್ರಿಸದಸ್ಯ ನ್ಯಾಯ ಪೀಠವು ಪ್ರಕರಣದ ವಿಚಾರಣೆ ನಡೆಸಿತು.
Advertisement
ವಿಚಾರಣೆ ವೇಳೆ ಇಸ್ರೇಲ್ ದಾಳಿಯಿಂದ ಗಾಜಾದ ಜನ ಸಂಕಷ್ಟಕ್ಕೀಡಾಗಿದ್ದಾರೆ. ಆಹಾರ, ನೀರು, ಔಷಧ, ವೈದ್ಯಕೀಯ ಸೌಲಭ್ಯ, ಇಂಧನ ಹಾಗೂ ವಿದ್ಯುತ್ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂಬ ಅಂಶಗಳನ್ನು ಕೋರ್ಟ್ ಉಲ್ಲೇಖಿಸಿತು. ಅಲ್ಲದೇ ನಾಗರಿಕರ ಮೇಲೆ ಉದ್ದೇಶಪೂರ್ವಕವಾಗಿ ದಾಳಿ ನಡೆಸಲು ನಿರ್ದೇಶನ ನೀಡುವುದು ಮತ್ತು ಹಸಿವನ್ನು ಯುದ್ಧದ ಅಸ್ತ್ರವಾಗಿ ಬಳಸುವುದು ಅಪರಾಧ ಎಂದಿರುವ ನೆತನ್ಯಾಹು ಸೇರಿ ಹಲವರ ವಿರುದ್ಧ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ. ಇದನ್ನೂ ಓದಿ: 56 ವರ್ಷಗಳ ಬಳಿಕ ಗಯಾನದಲ್ಲಿ ಭಾರತದ ಪ್ರಧಾನಿ – ಮೋದಿಗೆ ಭವ್ಯವಾದ ಸ್ವಾಗತ
ಈ ನಡುವೆ ನೆತನ್ಯಾಹು ನೆದರ್ಲೆಂಡ್‌ಗೆ ಪ್ರಯಾಣಿಸುವ ಸಾಧ್ಯತೆಯಿದೆ. ಒಂದು ವೇಳೆ ತೆರಳಿದರೆ, ಐಸಿಸಿ ವಾರೆಂಟ್ ಅಡಿಯಲ್ಲಿ ಅಲ್ಲಿಯೇ ಬಂಧಿಸಲಾಗುತ್ತದೆ ಎಂದು ಡಚ್ ವಿದೇಶಾಂಗ ಸಚಿವ ಕ್ಯಾಸ್ಪರ್ ವೆಲ್ಡ್‌ಕ್ಯಾಂಪ್ ಹೇಳಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ಗುತ್ತಿಗೆ ಪಡೆಯಲು ಭಾರತದಲ್ಲಿ 2,200 ಕೋಟಿ ಲಂಚ – ಅದಾನಿ ವಿರುದ್ಧ ಅಮೆರಿಕ ಕೋರ್ಟ್ ಅರೆಸ್ಟ್ ವಾರೆಂಟ್