ಕ್ಯಾಂಡಿ: ಉಪನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಹಾಗೂ ಇಶಾನ್ ಕಿಶನ್ (Ishan Kishan) ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ, ಪಾಕಿಸ್ತಾನಕ್ಕೆ 267 ರನ್ಗಳ ಗುರಿ ನೀಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ (Team India) 48.5 ಓವರ್ಗಳಲ್ಲಿ 266 ರನ್ಗಳಿಗೆ ಸರ್ವಪತನ ಕಂಡಿದ್ದು, ಎದುರಾಳಿ ಪಾಕಿಸ್ತಾನಕ್ಕೆ (Pakistan) 267 ರನ್ಗಳ ಟಾರ್ಗೆಟ್ ನೀಡಿದೆ. ಇದನ್ನೂ ಓದಿ: ಪಾಕ್ ವಿರುದ್ಧ ಸ್ಮರಣೀಯ ದಾಖಲೆ ಬರೆದ ಟಾಪ್-5 ಟೀಂ ಇಂಡಿಯಾ ಬ್ಯಾಟರ್ಗಳು ಇವರೇ
Advertisement
Advertisement
ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಟೀಂ ಇಂಡಿಯಾ ಆರಂಭದಲ್ಲೇ ಅಗ್ರಕ್ರಮಾಂಕದ ಬ್ಯಾಟರ್ಗಳನ್ನ ಕಳೆದುಕೊಂಡು ತೀವ್ರ ಆಘಾತ ಅನುಭವಿಸಿತು. ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ (Rohit Sharma) ಹಾಗೂ ಶುಭಮನ್ ಗಿಲ್ (Shubman Gill) ಜೋಡಿ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಇದನ್ನೂ ಓದಿ: ಪಾಕಿಸ್ತಾನಕ್ಕೆ ಸಪೋರ್ಟ್ ಮಾಡ್ತಿದ್ದಾರೆ ʻಐರಾವತʼಬೆಡಗಿ – ಊರ್ವಶಿ ರೌಟೇಲಾ ಕಾಲೆಳೆದ ಟ್ರೋಲ್ ಗೆಳೆಯರು
Advertisement
Advertisement
ರೋಹಿತ್ ಶರ್ಮಾ 22 ಎಸೆತಗಳಲ್ಲಿ 11 ರನ್ಗಳಿಸಿದ್ರೆ ಮಂದಗತಿಯ ಬ್ಯಾಟಿಂಗ್ ಮಾಡಿದ ಶುಭಮನ್ ಗಿಲ್ 30 ಎಸೆತಗಳಲ್ಲಿ ಕೇವಲ 10 ರನ್ ಗಳಿಸಿ ವಿಕೆಟ್ ಕೈಚೆಲ್ಲಿದರು. ಈ ಬೆನ್ನಲ್ಲೇ ಭರವಸೆ ಆಟಗಾರ ವಿರಾಟ್ ಕೊಹ್ಲಿ (Virat Kohli) ಸಹ 4 ರನ್ ಹಾಗೂ ಸ್ಫೋಟಕ ಆರಂಭ ನೀಡಿದ್ದ ಶ್ರೇಯಸ್ ಅಯ್ಯರ್ (Shreyas Iyer) 14 ರನ್ ಗಳಿಗೆ ಔಟಾಗಿ ಪೆವಿಲಿಯನ್ ಸೇರಿಕೊಂಡರು. ಬೃಹತ್ ಮೊತ್ತ ಕಲೆಹಾಕುವ ನೀರೀಕ್ಷೆಯಲ್ಲಿದ್ದ ಟೀಂ ಇಂಡಿಯಾ ಮೊದಲ 10 ಓವರ್ಗಳಲ್ಲೇ ಕೇವಲ 48 ರನ್ಗಳಿಗೆ ಪ್ರಮುಖ 3 ವಿಕೆಟ್ ಕಳೆದುಕೊಂಡಿತ್ತು. 15 ಓವರ್ಗಳಲ್ಲೀ ಕೇವಲ 74 ರನ್ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಗುರಿಯಾಗಿತ್ತು. ಟೀಂ ಇಂಡಿಯಾ 200 ರನ್ ಗಳಿಸುವುದೂ ಕಷ್ಟವೆಂದು ಭಾವಿಸಿದ್ದಾಗ ಹಾರ್ದಿಕ್ ಪಾಂಡ್ಯ ಹಾಗೂ ಇಶಾನ್ ಕಿಶಾನ್ ಜೊತೆಯಾಟದಿಂದ ಟೀಂ ಇಂಡಿಯಾಕ್ಕೆ ಬೂಸ್ಟರ್ ಡೋಸ್ ಸಿಕ್ಕಂತಾಯಿತು.
ಇಶಾನ್ ಕಿಶನ್-ಪಾಂಡ್ಯ ಪರಾಕ್ರಮ: ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಯುವ ಆಟಗಾರ ಇಶಾನ್ ಕಿಶನ್ ಹಾಗೂ ಹಾರ್ದಿಕ್ ಪಾಂಡ್ಯ ನೆರವಿನಿಂದ ಟೀಂ ಇಂಡಿಯಾ 250 ರನ್ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು. ಮಧ್ಯಮ ಕ್ರಮಾಂಕದಲ್ಲಿ ಈ ಜೋಡಿ 5ನೇ ವಿಕೆಟ್ಗೆ 141 ಎಸೆತಗಳಲ್ಲಿ 138 ರನ್ ಗಳಿಸಿ ಚೇತರಿಕೆ ನೀಡಿತು. ಇಶಾನ್ ಕಿಶನ್ 82 ರನ್ (81 ಎಸೆತ, 9 ಬೌಂಡರಿ, 2 ಸಿಕ್ಸರ್), ಹಾರ್ದಿಕ್ ಪಾಂಡ್ಯ 87 ರನ್ (90 ಎಸೆತ, 7 ಬೌಂಡರಿ, 1 ಸಿಕ್ಸರ್) ಚಚ್ಚಿದರು. ಕೊನೆಯಲ್ಲಿ ರವೀಂದ್ರ ಜಡೇಜಾ 14 ರನ್, ಶಾರ್ದೂಲ್ ಠಾಕೂರ್ 3 ರನ್, ಜಸ್ಪ್ರೀತ್ ಬುಮ್ರಾ 16 ರನ್, ಕುಲ್ದೀಪ್ ಯಾದವ್ 4 ರನ್, ಮೊಹಮ್ಮದ್ ಸಿರಾಜ್ 1 ರನ್ ಗಳಿಸಿದರು.
ಶಾಹೀನ್ ಶಾ ಬೌಲಿಂಗ್ ಮಿಂಚು: ಪಾಕ್ ಪರ ಮಾರಕ ಬೌಲಿಂಗ್ ದಾಳಿ ನಡೆಸಿದ ಶಾಹೀನ್ ಶಾ ಆಫ್ರಿದಿ 4 ವಿಕೆಟ್ ಕಿತ್ತರೆ, ನಸೀಮ್ ಶಾ ಹಾಗೂ ಹ್ಯಾರಿಸ್ ರೌಫ್ ತಲಾ 3 ವಿಕೆಟ್ ಕಿತ್ತು ಮಿಂಚಿದರು.
Web Stories