ನವದೆಹಲಿ: ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ (Rohit Sharma) ಸ್ಫೋಟಕ ಶತಕ ಬಾರಿಸಿ ದಾಖಲೆ ನಿರ್ಮಿಸಿದ ನಂತರ ಅವರ ಆಟದ ಬಗ್ಗೆ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ (Sachin Tendulkar) ಪ್ರತಿಕ್ರಿಯಿಸಿದ್ದಾರೆ. ಬುಮ್ರಾ ಮತ್ತು ರೋಹಿತ್ ಅವರ ಎರಡು ಉತ್ತಮ ಪ್ರದರ್ಶನಗಳು ಟೀಂ ಇಂಡಿಯಾಕ್ಕೆ ಬಲ ನೀಡಿದೆ ಎಂದು ಅವರು ಕೊಂಡಾಡಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಐಸಿಸಿ ವಿಶ್ವಕಪ್‍ನಲ್ಲಿ (World Cup) ಟೀಂ ಇಂಡಿಯಾ ಪರ ರೋಹಿತ್ ಶರ್ಮಾ ಅವರ ಸ್ಫೋಟಕ ಶತಕದಿಂದ ಸತತ ಎರಡನೇ ಗೆಲುವು ದಾಖಲಿಸಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಬುಧವಾರ ನಡೆದ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ 8 ವಿಕೆಟ್‍ಗಳ ಜಯ ಗಳಿಸಿತು. ಅಲ್ಲದೆ, ಪ್ರಸ್ತುತ ಅಂಕಪಟ್ಟಿಯಲ್ಲಿ ಭಾರತ 4ನೇ ಸ್ಥಾನದಿಂದ 2ನೇ ಸ್ಥಾನಕ್ಕೆ ಜಿಗಿಯಿತು. ಇದನ್ನೂ ಓದಿ: World Cup 2023: ಗುಡ್‌ನ್ಯೂಸ್ – ಪಾಕ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಸೇರಲಿದ್ದಾರೆ ಗಿಲ್
Advertisement
Two fine performances by Bumrah and Rohit, who were well supported by the bowling and batting units respectively.
The 2 games have seen different players contributing and that sets things up nicely for the 14th of October. Look forward!#INDvAFG pic.twitter.com/EXQltgeut3
— Sachin Tendulkar (@sachin_rt) October 11, 2023
Advertisement
ರೋಹಿತ್ ಶರ್ಮಾ ಕೇವಲ 84 ಎಸೆತಗಳಲ್ಲಿ 16 ಬೌಂಡರಿ ಹಾಗೂ 5 ಸಿಕ್ಸರ್ ಸೇರಿ 131 ರನ್ ಬಾರಿಸಿದರು. ಅಲ್ಲದೇ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ 31ನೇ ಶತಕ ಸಿಡಿಸಿದ ರೋಹಿತ್ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದರು.
Advertisement
Advertisement
ಪ್ರಸ್ತುತ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ 19ನೇ ಇನ್ನಿಂಗ್ಸ್‍ನಲ್ಲಿ 7ನೇ ಶತಕ ಸಿಡಿಸುವ ಮೂಲಕ ಅತಿ ಹೆಚ್ಚು ಶತಕಗಳನ್ನು ಗಳಿಸಿದವರ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದ್ದಾರೆ. ಒಟ್ಟು ಶತಕಗಳ ಪಟ್ಟಿಯಲ್ಲಿ ಸಚಿನ್ (49) ಮೊದಲ ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ (47) 2ನೇ ಸ್ಥಾನದಲ್ಲಿದ್ದಾರೆ. ವಿಶ್ವಕಪ್‍ನಲ್ಲಿ ವೇಗವಾಗಿ 1,000 ರನ್ ಪೂರೈಸಿದರಲ್ಲಿ ರೋಹಿತ್ ಶರ್ಮಾ ಜಂಟಿಯಾಗಿ ಡೇವಿಡ್ ವಾರ್ನರ್ ಮೊದಲನೇ ಸ್ಥಾನದಲ್ಲಿದ್ದಾರೆ. ಈ ಇಬ್ಬರೂ ಆಟಗಾರರು 19 ಇನ್ನಿಂಗ್ಸ್‌ಗಳಿಂದ 1 ಸಾವಿರ ರನ್ ಬಾರಿಸಿದ್ದಾರೆ.
ಐಸಿಸಿ ವಿಶ್ವಕಪ್‍ನಲ್ಲಿ ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್‍ಗಳಿಂದ ಗೆದ್ದುಕೊಂಡಿತ್ತು. ಅಫ್ಘಾನಿಸ್ತಾನ ವಿರುದ್ಧದ ಎರಡನೇ ಪಂದ್ಯದಲ್ಲಿ 8 ವಿಕೆಟ್‍ಗಳು ಗೆಲುವು ಪಡೆದಿದೆ. 2011ರ ವಿಶ್ವಕಪ್‍ನಲ್ಲಿ ಟೀಂ ಇಂಡಿಯಾ ಚಾಂಪಿಯನ್ ಆಗಿತ್ತು. ಆಗ ಸಚಿನ್ ತಂಡದ ಭಾಗವಾಗಿದ್ದರು. ವಿಶ್ವಕಪ್‍ನಲ್ಲಿ ಸಚಿನ್ 44 ಇನ್ನಿಂಗ್ಸ್‌ಗಳನ್ನು ಆಡಿದ್ದು, 6 ಶತಕಗಳನ್ನು ಗಳಿಸಿದ್ದರು. ಇದನ್ನೂ ಓದಿ: ರೋಹಿತ್ ಶರ್ಮಾ ಸ್ಫೋಟಕ ಶತಕ – 8 ವಿಕೆಟ್‌ಗಳ ಜಯದೊಂದಿಗೆ ಪಾಕ್ ಹಿಂದಿಕ್ಕಿದ ಭಾರತ
Web Stories