ದುಬೈ: ಟೀಂ ಇಂಡಿಯಾ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಪಾದಾರ್ಪಣೆ ಪಂದ್ಯದಲ್ಲೇ ಶತಕ ಸಿಡಿಸಿ ದಾಖಲೆ ಬರೆದಿದ್ದರು. ಇದರ ಬೆನ್ನಲ್ಲೇ ಅಧಿಕ ಕ್ಯಾಚ್, ರನ್‍ಗಳಿಸಿ ದಾಖಲೆ ನಿರ್ಮಿಸಿದ್ದರು. ಸದ್ಯ ಆಡಿರುವ 9 ಟೆಸ್ಟ್ ಪಂದ್ಯದಲ್ಲಿ ಜೀವನ ಶ್ರೇಷ್ಠ ಶ್ರೇಯಾಂಕವನ್ನು ಪಡೆಯುವ ಮೂಲಕ ಧೋನಿಯನ್ನು ಹಿಂದಿಕ್ಕಿದ್ದಾರೆ.
ಐಸಿಸಿ ಪ್ರಕಟಿಸಿರುವ ಟೆಸ್ಟ್ ಕ್ರಿಕೆಟ್ ಶ್ರೇಯಾಂಕ ಪಟ್ಟಿಯಲ್ಲಿ ರಿಷಬ್ ಪಂತ್ 17ನೇ ಸ್ಥಾನ ಪಡೆದಿದ್ದು, ಈ ಹಿಂದೆ ಟೀಂ ಇಂಡಿಯಾ ಪರ ಮಾಜಿ ನಾಯಕ, ವಿಕೆಟ್ ಕೀಪರ್ ಎಂಎಸ್ ಧೋನಿ 19ನೇ ಶ್ರೇಯಾಂಕ ಪಡೆದಿದ್ದರು. ಸದ್ಯ 21 ಸ್ಥಾನಗಳಲ್ಲಿ ಮುಂಬಡ್ತಿ ಪಡೆದಿರುವ ರಿಷಬ್ ಜನವರಿ 8 ರಂದು ಐಸಿಸಿ ಬಿಡುಗಡೆ ಮಾಡಿರುವ ಶ್ರೇಯಾಂಕ ಪಟ್ಟಿಯಲ್ಲಿ 673 ಅಂಕಗಳನ್ನು ಪಡೆದಿದ್ದಾರೆ.
ಕಳೆದ 7 ಇನ್ನಿಂಗ್ಸ್ ಗಳಲ್ಲಿ ರಿಷಬ್ ಪಂತ್ 58.33 ಸರಾಸರಿಯಲ್ಲಿ 350 ರನ್ ಸಿಡಿಸಿ ಭಾರತದ ಪರ ಎರಡನೇ ಟಾಪ್ ರನ್ ಸ್ಕೋರರ್ ಆಗಿ ಹೊರ ಹೊಮ್ಮಿದ್ದರು. ಅಲ್ಲದೇ ಸದ್ಯ 2 ಶತಕಗಳು ಹಾಗೂ 2 ಬಾರಿ 90 ಪ್ಲಸ್ ರನ್ ಗಳನ್ನು ಸಿಡಿಸಿದ ಸಾಧನೆ ಮಾಡಿದ್ದಾರೆ. ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಅಜೇಯ 159 ರನ್ ಗಳಿಸಿದ್ದ ಪಂತ್ ವಿದೇಶಿ ನೆಲದಲ್ಲಿ ಟೀಂ ಇಂಡಿಯಾ ವಿಕೆಟ್ ಕೀಪರ್ ಗಳಿಸಿದ ಹೆಚ್ಚು ರನ್ ಎಂಬ ದಾಖಲೆ ಬರೆದಿದ್ದರು. ಈ ಹಿಂದೆ ಧೋನಿ ಪಾಕಿಸ್ತಾನದ ವಿರುದ್ಧ 148 ರನ್ ಸಿಡಿಸಿದ್ದರು.
ಉಳಿದಂತೆ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 922 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲೇ ಮುಂದುವರಿದಿದ್ದು, ಚೇತೇಶ್ವರ ಪೂಜಾರ 881 ಅಂಕಗಳೊಂದಿಗೆ 3ನೇ ಸ್ಥಾನ ಪಡೆದಿದ್ದಾರೆ. ಇದರೊಂದಿಗೆ ಐಸಿಸಿ ಟಾಪ್ 5 ಪಟ್ಟಿಯಲ್ಲಿ ಇಬ್ಬರು ಭಾರತೀಯ ಆಟಗಾರರು ಸ್ಥಾನ ಪಡೆದಂತಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv