ಇಸ್ಲಾಮಾಬಾದ್: ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‍ನ (Word Cup) ವೇಳಾಪಟ್ಟಿ ಹೊರ ಬಿದ್ದಿದೆ. ಆದರೆ ರಾಷ್ಟ್ರೀಯ ತಂಡದ ವೇಳಾಪಟ್ಟಿ ಮತ್ತು ಸ್ಥಳಗಳ ಕುರಿತು ಪಾಕಿಸ್ತಾನ (Pakistan) ಕ್ರಿಕೆಟ್ ಮಂಡಳಿ (PCB) ಆಕ್ಷೇಪ ಎತ್ತಿದೆ.
ಪಾಕ್‍ನ ಈ ಆಕ್ಷೇಪಗಳನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ನಿರ್ಲಕ್ಷಿಸಿದೆ. ಐಸಿಸಿ ಮತ್ತು ಬಿಸಿಸಿಐ ಮಂಗಳವಾರ ಬಿಡುಗಡೆ ಮಾಡಿದ ವಿಶ್ವಕಪ್‍ನ ಅಂತಿಮ ವೇಳಾಪಟ್ಟಿಯಲ್ಲಿ ಈ ಹಿಂದೆ ಪ್ರಸ್ತಾಪಿಸಿದಂತೆ ಭಾರತದ ವಿರುದ್ಧ ಪಾಕಿಸ್ತಾನದ ಪಂದ್ಯವನ್ನು ಅಹಮದಾಬಾದ್‍ನಲ್ಲಿ ನಿಗದಿಪಡಿಸಲಾಗಿದೆ. ಆದರೆ ಅಫ್ಘಾನಿಸ್ತಾನ ಮತ್ತು ಆಸ್ಟ್ರೇಲಿಯಾ ವಿರುದ್ಧದ ಪಂದ್ಯಗಳಿಗೆ ಸ್ಥಳಗಳನ್ನು ಬದಲಾಯಿಸುವ ಪಿಸಿಬಿಯ ಮನವಿಯನ್ನು ನಿರ್ಲಕ್ಷಿಸಲಾಗಿದೆ. ಇದನ್ನೂ ಓದಿ: ICC ODI World Cup 2023: ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ
Advertisement
ಪಾಕಿಸ್ತಾನ ತಂಡದ ಮ್ಯಾನೇಜ್‍ಮೆಂಟ್‍ನ ಅಪೇಕ್ಷೆಯಂತೆ ಅಫ್ಘಾನಿಸ್ತಾನ ವಿರುದ್ಧದ ಪಂದ್ಯವನ್ನು ಚೆನ್ನೈನಿಂದ ಬೆಂಗಳೂರಿಗೆ ಮತ್ತು ಆಸ್ಟ್ರೇಲಿಯಾ ವಿರುದ್ಧದ ಪಂದ್ಯವನ್ನು ಬೆಂಗಳೂರಿನಿಂದ ಚೆನ್ನೈಗೆ ಮರು ನಿಗದಿಪಡಿಸುವಂತೆ ಪಿಸಿಬಿ, ಐಸಿಸಿ ಮತ್ತು ಬಿಸಿಸಿಐಗೆ ಕೇಳಿಕೊಂಡಿದೆ.
Advertisement
Advertisement
ಪಾಕಿಸ್ತಾನದ ಯಾವುದೇ ಆಕ್ಷೇಪಣೆಗಳು ಹಾಗೂ ವಿನಂತಿಗಳನ್ನು ಐಸಿಸಿ ಗಂಭೀರವಾಗಿ ಪರಿಗಣಿಸಿಲ್ಲ. ಮುಂಬೈ ಮತ್ತು ಕೋಲ್ಕತ್ತಾದಲ್ಲಿ ಸೆಮಿಫೈನಲ್‍ಗಳನ್ನು ನಿಗದಿಪಡಿಸಲಾಗಿದೆ. ಆದರೂ ಪಿಸಿಬಿ ರಾಜಕೀಯ ಮತ್ತು ರಾಜತಾಂತ್ರಿಕ ಕಾರಣಗಳಿಂದಾಗಿ ಮುಂಬೈನಲ್ಲಿ ಆಡುವುದು ಆರಾಮದಾಯಕವಲ್ಲ ಎಂದು ಐಸಿಸಿಗೆ ತಿಳಿಸಿದೆ. ಅಲ್ಲದೇ ವೇಳಾಪಟ್ಟಿಯನ್ನು ಅನುಮತಿಗಾಗಿ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ಮೂಲಗಳು ಸ್ಪಷ್ಟಪಡಿಸಿವೆ. ಇದನ್ನೂ ಓದಿ: ವಿಂಡೀಸ್ ವಿರುದ್ಧ T20 ಸರಣಿ – ಟೀಂ ಇಂಡಿಯಾಕ್ಕೆ ರಿಂಕು ಸಿಂಗ್ ಆಯ್ಕೆ?
Advertisement