ಸಿಡ್ನಿ: 2019ರ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಓವರ್ ಥ್ರೋಗೆ ಅಂಪೈರ್ ಗಳು 6 ರನ್ ನೀಡಿದ ಕುರಿತು ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಈ ವಿಚಾರದ ಬಗ್ಗೆ ಎಚ್ಚೆತ್ತುಕೊಂಡ ಐಸಿಸಿ ಅಂಪೈರ್ ನಿರ್ಧಾರದ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿ ಈ ಪ್ರಕರಣದಿಂದ ಜಾರಿಕೊಂಡಿದೆ.
ಓವರ್ ಥ್ರೋ ಕುರಿತು ಫಾಕ್ಸ್ ನ್ಯೂಸ್‍ಗೆ ಐಸಿಸಿಯ ವಕ್ತಾರರು ಪ್ರತಿಕ್ರಿಯಿಸಿ, ಮೈದಾನದಲ್ಲಿರುವ ಅಂಪೈರ್‍ಗಳು ಐಸಿಸಿಯ ನಿಯಮಗಳ ಪುಸ್ತಕವನ್ನು ಆಧಾರಿಸಿ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಾರೆ. ಅಂಪೈರ್‌ಗಳು ತೆಗೆದುಕೊಳ್ಳುವ ಈ ತೀರ್ಮಾನಗಳ ಬಗ್ಗೆ ನಾವು ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ದಾರೆ.
Advertisement
Advertisement
ಅಂಪೈರ್ ನಿರ್ಣಯದ ಬಗ್ಗೆ ಸೋಮವಾರವೇ ಪ್ರತಿಕ್ರಿಯೆ ನೀಡಿದ್ದ ಆಸ್ಟ್ರೇಲಿಯಾದ ಖ್ಯಾತ ಮಾಜಿ ಅಂಪೈರ್ ಸೈಮನ್ ಟಫೆಲ್ ಅವರು, ಫೈನಲ್ ಪಂದ್ಯದಲ್ಲಿ ಆನ್ ಫೀಲ್ಡ್ ಅಂಪೈರ್‌ಗಳು ಓವರ್ ಥ್ರೋ ಕಾರಣಕ್ಕೆ 6 ರನ್ ನೀಡಿದ್ದು ತಪ್ಪು. ನಿಯಮಗಳ ಅನ್ವಯ ಅಲ್ಲಿ 5 ರನ್ ಮಾತ್ರ ನೀಡಬೇಕಿತ್ತು ಎಂದು ಹೇಳಿದ್ದರು.
Advertisement
ವಿಶ್ವಕಪ್ ಪಂದ್ಯ ಟೈನಲ್ಲಿ ಅಂತ್ಯಗೊಂಡ ಬಳಿಕ ಅಂಪೈರ್ ಓವರ್ ಥ್ರೋಗೆ 6 ರನ್ ನೀಡಿದ್ದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಫಾಕ್ಸ್ ಸ್ಫೋಟ್ರ್ಸ್‍ಗೆ ಪ್ರತಿಕ್ರಿಯೆ ನೀಡಿದ ಟಫೆಲ್, ಇದರಲ್ಲಿ ತಪ್ಪು ಸ್ಪಷ್ಟವಾಗಿದೆ. 6 ರನ್ ನೀಡುವಂತಿಲ್ಲ. 5 ರನ್ ಮಾತ್ರ ನೀಡಬೇಕಿತ್ತು ಎಂದು ತಿಳಿಸಿದ್ದಾರೆ.
Advertisement
ಕಾನೂನು ಏನು ಹೇಳುತ್ತೆ?
ಓವರ್ ಥ್ರೋಗೆ ಸಂಬಂಧಿಸಿದ ಐಸಿಸಿಯ 19.8 ಕಾನೂನು ಪ್ರಕಾರ ಫೀಲ್ಡರ್ ಎಸೆದ ಬಾಲ್ ಓವರ್ ಥ್ರೋ ಅಥವಾ ಉದ್ದೇಶಪೂರ್ವಕವಾಗಿ ಬಾಲ್ ಎಸೆದಾಗ ಇಬ್ಬರು ಬ್ಯಾಟ್ಸ್ ಮನ್ ಗಳು ಪಿಚ್ ಮಧ್ಯದಲ್ಲಿ ಒಬ್ಬರನ್ನೊಬ್ಬರು ದಾಟಿರಬೇಕು.
ವಿವಾದ ಏನು?
ಗುಪ್ಟಿಲ್ ಚೆಂಡನ್ನು ಎಸೆಯುವ ವೇಳೆ ಸ್ಟೋಕ್ಸ್ ಹಾಗೂ ಆದಿಲ್ ರಶೀದ್ ಒಬ್ಬರನ್ನೊಬ್ಬರನ್ನು ದಾಟಿರಲಿಲ್ಲ. ಎರಡನೇ ರನ್ ಪೂರ್ಣಗೊಳಿಸುವ ಸಂದರ್ಭದಲ್ಲಿ ಬಾಲ್ ಬ್ಯಾಟಿಗೆ ಬಡಿದ ಕಾರಣ ಚೆಂಡು ಬೌಂಡರಿಗೆ ಹೋಗಿದೆ. ಈ ಕಾರಣಕ್ಕೆ ಎರಡನೇಯ ರನ್ ಪರಿಗಣಿಸಬಾರದು. ಆದರೆ ಬೌಂಡರಿ ಜೊತೆಗೆ 2 ರನ್ ನೀಡಿದ ಪರಿಣಾಮ ಪಂದ್ಯ ಟೈ ಆಗಿದೆ. 5 ರನ್ ಮಾತ್ರ ನೀಡಿದ್ದರೆ ನ್ಯೂಜಿಲೆಂಡ್ ಜಯಗಳಿಸುತಿತ್ತು ಎಂದು ಕ್ರಿಕೆಟ್ ಅಭಿಮಾನಿಗಳು ವಾದಿಸುತ್ತಿದ್ದಾರೆ.
242 ರನ್ ಬೆನ್ನತ್ತಿದ್ದ ಇಂಗ್ಲೆಂಡ್‍ಗೆ ಕೊನೆಯ 3 ಎಸೆತಗಳಿಗೆ 9 ರನ್ ಗಳಿಸುವ ಅನಿವಾರ್ಯತೆ ಎದುರಾಗಿತ್ತು. ಈ ಸಂದರ್ಭದಲ್ಲಿ ಸ್ಟೋಕ್ಸ್ ಬ್ಯಾಟಿಗೆ ತಾಗಿದ್ದ ಚೆಂಡು ಬೌಂಡರಿ ಗೆರೆದಾಡಿತ್ತು. ಆದರೆ ಈ ಸಂದರ್ಭದಲ್ಲಿ ಸ್ಟೋಕ್ಸ್ 2ನೇ ರನ್ ಕದಿಯುವ ಪ್ರಯತ್ನದಲ್ಲಿದ್ದರು.
ಇಂಗ್ಲೆಂಡಿಗೆ 50ನೇ ಓವರಿನಲ್ಲಿ 15 ರನ್ ಬೇಕಿತ್ತು. ಬೌಲ್ಟ್ ಎಸೆದ ಮೊದಲ ಎರಡು ಎಸೆತಗಳಲ್ಲಿ ಯಾವುದೇ ರನ್ ಬಾರದೇ ಇದ್ದರೆ ಮೂರನೇ ಎಸೆತವನ್ನು ಬೆನ್ ಸ್ಟೋಕ್ಸ್ ಸಿಕ್ಸರಿಗೆ ಅಟ್ಟಿದ್ದರು. ನಾಲ್ಕನೇ ಎಸೆತದಲ್ಲಿ ಒಂದು ರನ್ ಓಡಿ ಎರಡನೇ ರನ್ ಕದಿಯುವ ವೇಳೆ ಗುಪ್ಟಿಲ್ ಎಸೆದ ಚೆಂಡು ಬೆನ್ ಸ್ಟೋಕ್ಸ್ ಬ್ಯಾಟಿಗೆ ತಗಲಿ, ಕೀಪರ್ ಹಿಂದುಗಡೆ ಸಾಗಿ ಬೌಂಡರಿ ಗೆರೆಯನ್ನು ತಲುಪಿತು. ಎರಡು ರನ್ ಜೊತೆಗೆ ಇತರೇ ರೂಪದಲ್ಲಿ 4 ರನ್ ಬಂತು. ಹೀಗಾಗಿ ಕೊನೆಯ ಎರಡು ಎಸೆತಗಳಲ್ಲಿ ಮೂರು ರನ್ ಗಳಿಸಬೇಕಿತ್ತು. ಸ್ಟ್ರೈಕ್ ನಲ್ಲಿದ್ದ ಬೆನ್ ಸ್ಟೋಕ್ಸ್ ಎರಡು ರನ್ ಕದಿಯಲು ಯತ್ನಿಸಿದಾಗ ನಾನ್ ಸ್ಟ್ರೈಕ್ ನಲ್ಲಿದ್ದ ಅದಿಲ್ ರಶೀದ್ ರನೌಟ್ ಆದರು. ಕೊನೆಯ ಎಸೆತದಲ್ಲಿ 2 ರನ್ ಬೇಕಿತ್ತು. ಈ ಎಸೆತದಲ್ಲಿ ಒಂದು ರನ್ ಕಸಿದು ಎರಡನೇ ರನ್ ಓಡಲು ಯತ್ನಿಸಿದಾಗ ಮಾಕ್ ವುಡ್ ರನೌಟ್ ಆದರು. ಈ ಮೂಲಕ ಪಂದ್ಯ ಟೈ ಆಗಿ ಫಲಿತಾಂಶಕ್ಕೆ ಮೊದಲ ಬಾರಿಗೆ ಸೂಪರ್ ಓವರ್ ಮೊರೆ ಹೋಗಲಾಯಿತು.
ಸೂಪರ್ ಓವರಿನ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 15 ರನ್ ಹೊಡೆಯಿತು. ನ್ಯೂಜಿಲೆಂಡ್ ತಂಡಕ್ಕೆ ಕೊನೆಯ ಎಸೆತದಲ್ಲಿ 2 ರನ್ ಬೇಕಿತ್ತು. ಈ ವೇಳೆ ಎರಡು ರನ್ ಕದಿಯಲು ಮುಂದಾಗಿದ್ದ ಗುಪ್ಟಿಲ್ ರನ್ ಔಟ್ ಆದರು. ಟ್ರೆಂಟ್ ಬೌಲ್ಟ್ ಎಸೆದ ಓವರ್ ನಲ್ಲಿ ಬೆನ್ ಸ್ಟೋಕ್ಸ್ ಮತ್ತು ಬಟ್ಲರ್ ಒಂದೊಂದು ಬೌಂಡರಿ ಹೊಡೆದಿದ್ದರು. ಜೋಫ್ರಾ ಅರ್ಚರ್ ಎಸೆದ ಓವರ್ ನಲ್ಲಿ ನಿಶಮ್ ಒಂದು ಸಿಕ್ಸರ್ ಹೊಡೆದರೆ ಯಾವುದೇ ಬೌಂಡರಿ ಬಂದಿರಲಿಲ್ಲ. ಎರಡು ತಂಡಗಳ ರನ್ ಸಮವಾಗಿದ್ದರೂ ಒಟ್ಟು 24 ಬೌಂಡರಿ ಸಿಡಿದ ಪರಿಣಾಮ ಇಂಗ್ಲೆಂಡ್ ಚಾಂಪಿಯನ್ ಆಗಿ ಹೊರಹೊಮ್ಮಿತು. ನ್ಯೂಜಿಲೆಂಡ್ 17 ಬೌಂಡರಿ ಹೊಡೆದಿತ್ತು.
"To put that performance together in a World Cup final is a really special feeling."
Liam Plunkett and Jason Roy react to England's nail-biting victory with @Elmakapelma. pic.twitter.com/D7y17OUWOd
— ICC Cricket World Cup (@cricketworldcup) July 15, 2019