ದುಬೈ: ಐಸಿಸಿ (ICC) ವಿಶ್ವ ಟೆಸ್ಟ್ ರ‍್ಯಾಂಕಿಗ್ ಪಟ್ಟಿಯಲ್ಲಿ ಭಾರತ ಕ್ರಿಕೆಟ್ ತಂಡ (Team India) ಆಸ್ಟ್ರೇಲಿಯಾ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದೆ.
ಜೂನ್ 7 ರಿಂದ 11ರ ವರೆಗೆ ಲಂಡನ್‌ನಲ್ಲಿ ಆಸ್ಟ್ರೇಲಿಯಾ (Australia) ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ನಡೆಯಲಿದೆ. ಡಬ್ಲ್ಯೂಟಿಸಿಗೆ ಕೆಲವೇ ದಿನಗಳು ಬಾಕಿಯಿರುವ ಹೊತ್ತಿನಲ್ಲೇ ಭಾರತ ಕ್ರಿಕೆಟ್ ತಂಡ ಟೆಸ್ಟ್ ರ‍್ಯಾಂಕಿಗ್ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿದೆ. ಇದನ್ನೂ ಓದಿ: ಲಂಕಾ ವಿರುದ್ಧ ಕಿವೀಸ್‌ಗೆ ರೋಚಕ ಜಯ – 2ನೇ ಬಾರಿ WTC ಫೈನಲ್‌ಗೆ ಭಾರತ
Advertisement
Advertisement
ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಮುಕ್ತಾಯವಾದ ಒಂದು ವಾರಗಳ ನಂತರ ಇಂಗ್ಲೆಂಡ್‌ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ ನಡೆಯಲಿದೆ.
Advertisement
ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಈವರೆಗೆ ಆಸ್ಟ್ರೇಲಿಯಾ ತಂಡವೇ ಟೆಸ್ಟ್ ಮಾದರಿಯಲ್ಲಿ ನಂ.1 ತಂಡ ಎನಿಸಿಕೊಂಡಿತ್ತು. ಆದರೀಗ ಈಗ ಭಾರತ ಆಸ್ಟ್ರೇಲಿಯಾವನ್ನು ಹಿಂದಿಕ್ಕುವಲ್ಲಿ ಯಶಸ್ವಿಯಾಗಿದೆ. ಮೇ 2 ಮಂಗಳವಾರ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಬಿಡುಗಡೆ ಮಾಡಿದ ರ‍್ಯಾಂಕಿಗ್ ಪಟ್ಟಿಯಲ್ಲಿ ಭಾರತಕ್ಕೆ ನಂ.1 ಸ್ಥಾನ ದೊರೆತಿದೆ. ಇದನ್ನೂ ಓದಿ: WTCಗೆ ಟೀಂ ಇಂಡಿಯಾ ಆಯ್ಕೆ ಪ್ರಕಟ – ರಹಾನೆ ಇನ್, ಸೂರ್ಯಕುಮಾರ್ ಔಟ್
Advertisement
ಟೀಂ ಇಂಡಿಯಾ ಫೈನಲ್ ಪ್ರವೇಶಿಸಿದ್ದು ಹೇಗೆ?
ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧ ನಡೆದ 4 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯನ್ನು ಭಾರತ 3-0 ಅಥವಾ 3-1 ಅಂತರದಲ್ಲಿ ಗೆಲ್ಲಬೇಕಾಗಿತ್ತು. ಆದ್ರೆ ಭಾರತ 2-1 ರಲ್ಲಿ ಮುನ್ನಡೆ ಸಾಧಿಸಿತ್ತು. ಅಹಮದಾಬಾದ್ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡಕ್ಕೆ ಗೆಲುವು ಅಗತ್ಯವಿತ್ತು. ಅಂತಿಮ ಪಂದ್ಯ ಡ್ರಾ ನಲ್ಲಿ ಅಂತ್ಯಗೊಂಡಿದ್ದರಿಂದ ಫೈನಲ್ ಪ್ರವೇಶಿಸುವ ಹಾದಿ ಕಠಿಣವಾಗಿತ್ತು.
ಮತ್ತೊಂದೆಡೆ ಶ್ರೀಲಂಕಾ ತಂಡ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆ ಪಡೆಯಲು ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ಅಗತ್ಯವಿತ್ತು. ಆದರೆ ಮೊದಲ ಟೆಸ್ಟ್ ಪಂದ್ಯದಲ್ಲೇ ನ್ಯೂಜಿಲೆಂಡ್ ಎದುರು ಕೇವಲ 2 ವಿಕೆಟ್‌ಗಳ ವಿರೋಚಿತ ಸೋಲು ಅನುಭವಿಸುವ ಮೂಲಕ ಫೈನಲ್ ರೇಸ್‌ನಿಂದ ಹೊರ ಬಿದ್ದಿತು. ಭಾರತ 60.29 ಪಿಸಿಟಿಯೊಂದಿಗೆ (Percentage Of Points Earned) ಫೈನಲ್ ಪ್ರವೇಶಿಸಿತು.
ಐಸಿಸಿ ಟೆಸ್ಟ್ – ಯಾವ ತಂಡಕ್ಕೆ ಎಷ್ಟು ಶ್ರೇಯಾಂಕ
1. ಭಾರತ – 121
2. ಆಸ್ಟ್ರೇಲಿಯಾ – 116
3. ಇಂಗ್ಲೆಂಡ್ – 114
4. ದಕ್ಷಿಣ ಆಫ್ರಿಕಾ – 104
5. ನ್ಯೂಜಿಲೆಂಡ್ – 100
6. ಪಾಕಿಸ್ತಾನ – 86
7. ಶ್ರೀಲಂಕಾ – 84
8. ವೆಸ್ಟ್ ಇಂಡೀಸ್ – 76
9. ಬಾಂಗ್ಲಾದೇಶ – 45
10. ಜಿಂಬಾಬ್ವೆ – 32