CricketLatestLeading NewsMain PostSports

ICC ಟೆಸ್ಟ್ ರ‍್ಯಾಂಕಿಂಗ್: ಕಳಪೆ ಬ್ಯಾಟಿಂಗ್‌ನಿಂದ ಟಾಪ್-10 ಪಟ್ಟಿಯಲ್ಲಿ ಸ್ಥಾನ ಕಳೆದುಕೊಂಡ ಕೊಹ್ಲಿ

Advertisements

ದುಬೈ: ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ನಿರಂತರ ಕಳಪೆ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಒಂದಿಲ್ಲೊಂದು ಆಘಾತ ಎದುರಿಸುತ್ತಿದ್ದಾರೆ. 15ನೇ ಆವೃತ್ತಿಯ ಐಪಿಎಲ್‌ನಲ್ಲಿ ಕಳಪೆ ಬ್ಯಾಟಿಂಗ್ ಮಾಡಿ ಸಾಕಷ್ಟು ಟ್ರೋಲ್ ಹಾಗೂ ಟೀಕೆಗಳಿಗೆ ಗುರಿಯಾಗಿದ್ದರು. ಐಪಿಎಲ್ ಬಳಿಕ ಇಂಗ್ಲೆಂಡ್ ವಿರುದ್ಧ ನಡೆದ ಟೆಸ್ಟ್ ಕ್ರಿಕೆಟ್‌ನಲ್ಲೂ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ಐಸಿಸಿ (ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ) ಟೆಸ್ಟ್ ರ‍್ಯಾಂಕಿಗ್‌ನ ಟಾಪ್-10 ಪಟ್ಟಿಯಿಂದ ಹೊರಗುಳಿದಿದ್ದಾರೆ.

ಜುಲೈ 1 ರಿಂದ 5ರ ವರೆಗೆ ಎಡ್ಜ್‌ಬಸ್ಟನ್‌ನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ ಐಸಿಸಿ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿಯಲ್ಲಿ 8 ರಿಂದ 13ನೇ ಸ್ಥಾನಕ್ಕೆ ಕುಸಿದಿದ್ದಾರೆ. ಇದನ್ನೂ ಓದಿ: ಭಾರತ – ವೆಸ್ಟ್ಇಂಡೀಸ್ ಏಕದಿನ ಕ್ರಿಕೆಟ್‌ ಸರಣಿಗೆ ಆಯ್ಕೆ ಪಟ್ಟಿ ಪ್ರಕಟ – ಶಿಖರ್ ಧವನ್ ಕ್ಯಾಪ್ಟನ್

ಭಾರತ-ಇಂಗ್ಲೆಂಡ್ ನಡುವಿನ ಟೆಸ್ಟ್ ಕ್ರಿಕೆಟ್ ಸರಣಿಯ ಅಂತಿಮ ಪಂದ್ಯದಲ್ಲಿನ ಪ್ರದರ್ಶನಗಳು ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಸಾಕಷ್ಟು ಬದಲಾವಣೆಯನ್ನುಂಟು ಮಾಡಿವೆ. ಅಂತಿಮ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ 7 ವಿಕೆಟ್‌ಗಳ ಅಂತರದಿಂದ ಜಯ ಸಾಧಿಸಿತು. ಈ ಪಂದ್ಯದಲ್ಲಿ ಜೋ ರೂಟ್ ಹಾಗೂ ಜಾನಿ ಬೈರ್‌ಸ್ಟೋವ್ ತಮ್ಮ ಆಕರ್ಷತಕ ಶತಕಗಳಿಂದ ಇಂಗ್ಲೆಂಡ್ ತಂಡವನ್ನು ಗೆಲುವಿನ ದಡಕ್ಕೆ ಸೇರಿಸಿದ್ದಲ್ಲದೇ ಟೆಸ್ಟ್ ರ‍್ಯಾಂಕಿಂಗ್‌ನಲ್ಲೂ ಸ್ಥಾನ ಪಡೆದುಕೊಳ್ಳುವಂತೆ ಮಾಡಿದೆ.

ಟಾಪ್-10 ಆಟಗಾರರಲ್ಲಿ ಅಗ್ರಸ್ಥಾನದಲ್ಲಿರುವ ಜೋ ರೂಟ್ ತಮ್ಮ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದ್ದಾರೆ. ಆದರೆ 11ನೇ ಸ್ಥಾನದಲ್ಲಿದ್ದ ಬೈರ್‌ಸ್ಟೋವ್ 10ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಟೆಸ್ಟ್ನಲ್ಲಿ ಶತಕ ಹಾಗೂ ಅರ್ಧಶತಕ ಸಿಡಿಸುವ ಮೂಲಕ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ರಿಷಭ್ ಪಂತ್ ತಮ್ಮ ಕ್ರಿಕೆಟ್ ವೃತ್ತಿ ಜೀವನದ ಅತ್ಯುತ್ತಮ 5ನೇ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನೂ ಕೋವಿಡ್ ಪಾಸಿಟಿವ್ ಪ್ರಕರಣದಿಂದಾಗಿ ಇಂಗ್ಲೆಂಡ್ ಟೆಸ್ಟ್‌ನಿಂದ ಹೊರಗುಳಿದ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ 8 ರಿಂದ 9ನೇ ಸ್ಥಾನಕ್ಕೆ ಕುಸಿದಿದ್ದಾರೆ. ಇದನ್ನೂ ಓದಿ: ಭಾರತ ತಂಡದ ಒಂದು ಎಡವಟ್ಟಿನಿಂದಾಗಿ ರ್‍ಯಾಂಕಿಂಗ್‌ನಲ್ಲಿ ಜಿಗಿತ ಕಂಡ ಪಾಕ್

4ನೇ ಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿ ತಮ್ಮ ನಿರಂತರ ಕಳಪೆ ಬ್ಯಾಟಿಂಗ್ ಪ್ರದರ್ಶನದಿಂದಾಗಿ 13ನೇ ಸ್ಥಾನಕ್ಕೆ ಇಳಿದಿದ್ದಾರೆ. ಇದು ವಿರಾಟ್ ಅಭಿಮಾನಿಗಳಲ್ಲೂ ಬೇಸರ ಮೂಡಿಸಿದೆ.

Live Tv

Leave a Reply

Your email address will not be published.

Back to top button