ಆಂಟಿಗುವಾ: 2022ರ ಅಂಡರ್-19 ವಿಶ್ವಕಪ್ ಫೈನಲ್‍ನಲ್ಲಿ ಟೀಂ ಇಂಡಿಯಾ, ಇಂಗ್ಲೆಂಡ್ ತಂಡವನ್ನು 4 ವಿಕೆಟ್‍ಗಳಿಂದ ಬಗ್ಗು ಬಡಿದು ವಿಶ್ವಕಪ್ ಮುಡಿಗೇರಿಸಿಕೊಂಡಿದೆ.
ಮೊದಲ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಟೀಂ ಇಂಡಿಯಾದ ಯುವ ಆಟಗಾರರಾದ ರಾಜ್ ಬಾವಾ ಮತ್ತು ರವಿ ಕುಮಾರ್ ದಾಳಿಗೆ ಪತರುಗಟ್ಟಿ 44.5 ಓವರ್‌ಗಳಲ್ಲಿ 189 ರನ್‍ಗಳಿಗೆ ಆಲೌಟ್ ಆಯಿತು.
Advertisement
Advertisement
ಭಾರತದ ಪರ ಬೌಲಿಂಗ್ ವಿಭಾಗದಲ್ಲಿ ರವಿ ಕುಮಾರ್ 34 ರನ್‍ಗಳನ್ನು ನೀಡಿ 4 ವಿಕೆಟ್ ಹಾಗೂ ರಾಜ್ ಬಾವ 31 ರನ್ ನೀಡಿ 5 ವಿಕೆಟ್ ಪಡೆದು ಮಿಂಚಿದರು. ಇಬ್ಬರೂ ಬೌಲರ್‍ಗಳು ತಲಾ 1 ಮೆಡಿನ್ ಓವರ್ ಮಾಡಿದರು.
Advertisement
ಇಂಗ್ಲೆಂಡ್‍ನ ಸಾಧಾರಣ ಮೊತ್ತ ಬೆನ್ನಟ್ಟಿದ ಭಾರತ ತಂಡಕ್ಕೆ ಆಂಗ್ಕ್ರಿಶ್ ರಘುವಂಶಿ ಎರಡು ಎಸೆತಗಳನ್ನು ಎದುರಿಸಿ ಯಾವುದೇ ರನ್ ಗಳಿಸದೇ ವಿಕೆಟ್ ನೀಡಿದ್ದು ಆರಂಭಿಕ ಆಘಾತವಾಯಿತು. ಮತ್ತೋರ್ವ ಆರಂಭಿಕ ಆಟಗಾರ ಹರ್ನೂರ್ ಸಿಂಗ್ ಸಹ 46 ಎಸೆತಗಳನ್ನು ಎದುರಿಸಿ 21 ರನ್‍ಗಳ ಸಾಧಾರಣ ಮೊತ್ತವನ್ನು ಕಲೆಹಾಕಿದ್ದು, 2ನೇ ಕ್ರಮಾಂಕದ ಬ್ಯಾಟ್ಸ್‍ಮನ್‍ಗಳ ಮೇಲೆ ಒತ್ತಡ ಹೆಚ್ಚಿಸಿತ್ತು. ನಂತರ 84 ಎಸೆತಗಳನ್ನು ಎದುರಿಸಿ 50 ರನ್ ಗಳಿಸುವ ಮೂಲಕ ಶೇಖ್ ರಶೀದ್ ತಂಡಕ್ಕೆ ಚೇತರಿಕೆ ನೀಡಿದರಾದರೂ ಯಶ್ ಧುಲ್ ಉತ್ತಮ ಜೊತೆಯಾಟ ನೀಡಲು ಸಾಧ್ಯವಾಗಲಿಲ್ಲ.
Advertisement
ನಿಶಾಂತ್ ಸಿಂಧು 54 ಎಸೆತಗಳಲ್ಲಿ 50 ರನ್ ಗಳಿಸಿ ತಂಡದ ಗೆಲುವಿನ ಕನಸನ್ನು ಜೀವಂತವಾಗಿರಿಸಿದರು. ರಾಜ್ ಬಾವ 54 ಎಸೆತಗಳಲ್ಲಿ 34 ರನ್ ಗಳಿಸಿದರೆ, ನಿಶಾಂತ್ ಸಿಂಧು ಹಾಗೂ ದಿನೇಶ್ ಬನಾ ಭಾರತ ತಂಡವನ್ನು ಗೆಲುವಿನ ದಡ ಸೇರಿಸಿದರು. ಇದನ್ನೂ ಓದಿ: ರಾಜ್ ಭಾವ, ರವಿ ದಾಳಿಗೆ ಬೆವರಿದ ಇಂಗ್ಲೆಂಡ್ – ಭಾರತಕ್ಕೆ 190 ರನ್ ಗುರಿ
Congratulations to the under 19 team and the support staff and the selectors for winning the world cup in such a magnificent way ..The cash prize announced by us of 40 lakhs is a small token of appreciation but their efforts are beyond value .. magnificent stuff..@bcci
— Sourav Ganguly (@SGanguly99) February 5, 2022
ಭಾರತ ಇಂಗ್ಲೆಂಡ್ ತಂಡದ ವಿರುದ್ಧ 4 ವಿಕೆಟ್‍ಗಳ ಜಯ ಸಾಧಿಸುವ ಮೂಲಕ ಮತ್ತೊಮ್ಮೆ ಐಸಿಸಿ ಅಂಡರ್-19 ಕ್ರಿಕೆಟ್ ವಿಶ್ವಕಪ್‍ನ್ನು ಮುಡಿಗೇರಿಸಿಕೊಂಡಿತು. ಈ ವಿಶ್ವಕಪ್ ಗೆಲುವಿನ ಮೂಲಕ ಭಾರತ 5ನೇ ಅಂಡರ್-19 ವಿಶ್ವಕಪ್ ಗೆದ್ದು ಸಂಭ್ರಮಿಸಿತು. ಇದನ್ನೂ ಓದಿ: ಆಸ್ಟ್ರೇಲಿಯಾ ತಂಡವನ್ನು ಯಶಸ್ಸಿನ ಮಟ್ಟಿಲೇರಿಸಿದ ಕೋಚ್ ಜಸ್ಟಿನ್ ಲ್ಯಾಂಗರ್ ರಾಜೀನಾಮೆ
ಅಂಡರ್-19 ಇತಿಹಾಸದಲ್ಲಿ ಟೀಂ ಇಂಡಿಯಾ 7 ಬಾರಿ ಫೈನಲ್ ತಲುಪಿದೆ. ಭಾರತ 2000ದಲ್ಲಿ ಮೊಹಮ್ಮದ್ ಕೈಫ್, 2008ರಲ್ಲಿ ವಿರಾಟ್ ಕೊಹ್ಲಿ, 2012ರಲ್ಲಿ ಉನ್ಮುಕ್ ಚಾಂದ್ ಮತ್ತು 2018ರಲ್ಲಿ ಪೃಥ್ವಿ ಶಾ ಮತ್ತು 2022ರಲ್ಲಿ ಯಶ್ ಧುಲ್ ನಾಯಕತ್ವದಲ್ಲಿ ವಿಶ್ವಕಪ್ ಗೆದ್ದು ಬೀಗಿದೆ.