ಮುಂಬೈ: ಚೊಚ್ಚಲ ಮಹಿಳಾ ವಿಶ್ವಕಪ್ (ICC Women’s Cricket World) ಕ್ರಿಕೆಟ್ ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತೀಯ ಮಹಿಳಾ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅಭಿನಂದನೆ ಸಲ್ಲಿಸಿದ್ದಾರೆ.
A spectacular win by the Indian team in the ICC Women’s Cricket World Cup 2025 Finals. Their performance in the final was marked by great skill and confidence. The team showed exceptional teamwork and tenacity throughout the tournament. Congratulations to our players. This…
— Narendra Modi (@narendramodi) November 2, 2025
ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2025 ಫೈನಲ್ಸ್‌ನಲ್ಲಿ ಭಾರತ ತಂಡದ ಅದ್ಭುತ ಗೆಲುವು ಸಾಧಿಸಿದೆ. ಫೈನಲ್ ಪಂದ್ಯದಲ್ಲಿ ಅವರು ತೋರಿದ ಪ್ರದರ್ಶನವು ಉತ್ತಮ ಕೌಶಲ್ಯ ಮತ್ತು ಆತ್ಮವಿಶ್ವಾಸ ಕೂಡಿತ್ತು. ತಂಡವು ಟೂರ್ನಿಯುದ್ಧಕ್ಕೂ ಅಸಾಧಾರಣ ಸಾಮರ್ಥ್ಯ ತೋರಿದ, ದೃಢತೆ ಸಾಬೀತುಪಡಿಸಿದ ನಮ್ಮ ಕ್ರೀಡಾಪಟುಗಳಿಗೆ ಅಭಿನಂದನೆಗಳು. ಈ ಐತಿಹಾಸಿಕ ಗೆಲುವು ಭವಿಷ್ಯದ ಚಾಂಪಿಯನ್‌ಗಳು ಕ್ರೀಡೆಗಳನ್ನ ಕೈಗೆತ್ತಿಕೊಳ್ಳಲು ಪ್ರೇರೇಪಿಸುತ್ತದೆ ಎಂದು ಶುಭಹಾರೈಸಿದ್ದಾರೆ.
ಇದರೊಂದಿಗೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಯ್ ಶಾ ಸೇರಿದಂತೆ ಅನೇಕ ಗಣ್ಯಮಾನ್ಯರಿಂದಲೂ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.
ಚೊಚ್ಚಲ ಕಿರೀಟ
ಚೊಚ್ಚಲ ಮಹಿಳಾ ವಿಶ್ವಕಪ್ ಕ್ರಿಕೆಟ್ ಚಾಂಪಿಯನ್ ಆಗಿ ಭಾರತ ಹೊಮ್ಮಿದೆ. ಫೈನಲ್‌ನಲ್ಲಿ ಆಫ್ರಿಕಾ ವಿರುದ್ಧ 52 ರನ್‌ಗಳ ಜಯ ಸಾಧಿಸಿದ ಮೊದಲ ಬಾರಿಗೆ ವಿಶ್ವಕಪ್‌ಗೆ ಮುತ್ತಿಕ್ಕಿದೆ. 2008ರಲ್ಲಿ ಭಾರತ ಮೊದಲ ಬಾರಿ ಫೈನಲ್ ಪ್ರವೇಶಿಸಿದಾಗ ಆಸೀಸ್ ವಿರುದ್ಧ 98 ರನ್‌ಗಳಿಂದ ಸೋತಿತ್ತು. 2017ರಲ್ಲಿ ಇಂಗ್ಲೆಂಡ್ ವಿರುದ್ಧ 9 ರನ್‌ಗಳ ವಿರೋಚಿತ ಸೋಲು ಕಂಡಿದ್ದ ಭಾರತ 3ನೇ ಬಾರಿಗೆ ಫೈನಲ್‌ನಲ್ಲಿ ಟ್ರೋಫಿ ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಗಿದೆ.


