ಕೇಪ್‌ಟೌನ್: ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ (ICC Womens World Cup) ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತದ (India) ವಿರುದ್ಧ ಆಸ್ಟ್ರೇಲಿಯಾ (Australia Women) ಮಹಿಳಾ ತಂಡ 5 ರನ್‌ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡ ಮಹಿಳಾ ಟಿ20 ವಿಶ್ವಕಪ್ ಫೈನಲ್‌ಗೆ ಪ್ರವೇಶಿಸಿದೆ. ಇದರಿಂದ ಮತ್ತೆ ಭಾರತದ ವಿಶ್ವಕಪ್ ಕನಸು ಭಗ್ನಗೊಂಡಿದೆ.
Advertisement
ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 4 ವಿಕೆಟ್‌ಗೆ 172 ರನ್‌ಗಳಿಸಿತ್ತು. 173 ರನ್‌ಗಳ ಕಠಿಣ ಗುರಿ ಪಡೆದ ಭಾರತ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 167 ರನ್‌ಗಳಿಸಿ ಸೋಲೊಪ್ಪಿಕೊಂಡಿತು. ಇದನ್ನೂ ಓದಿ: ಸೂರ್ಯಕುಮಾರ್ ದಂಪತಿ ಟೆಂಪಲ್ ರನ್ – ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಕ್ರಿಕೆಟಿಗ
Advertisement
Advertisement
ಆರಂಭಿಕರಾದ ಶಫಾಲಿ ವರ್ಮಾ, ಸ್ಮೃತಿ ಮಂದಾನ ಹಾಗೂ ಯಾಸ್ತಿಕ ಭಾಟಿಯಾ ಉತ್ತಮ ಶುಭಾರಂಭ ನೀಡುವಲ್ಲಿ ವಿಫಲರಾದರು. ಶಫಾಲಿ 9 ರನ್, ಮಂದಾನ 2, ಭಾಟಿಯಾ 4 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಜೆಮಿಮಾ ರೊಡ್ರಿಗಸ್ (Jemimah Rodrigues), ಹರ್ಮನ್ ಪ್ರೀತ್ ಕೌರ್ (Harmanpreet Kaur) ಭರ್ಜರಿ ಬ್ಯಾಟಿಂಗ್ ಮೂಲಕ ತಂಡಕ್ಕೆ ನೆರವಾದರು. ರೊಡ್ರಿಗಸ್ 24 ಎಸೆತಗಳಲ್ಲಿ ಭರ್ಜರಿ 43 (6 ಬೌಂಡರಿ) ಚಚ್ಚಿದರೆ, ಕೌರ್ 34 ಎಸೆತಗಳಲ್ಲಿ 52 ರನ್ (6 ಬೌಂಡರಿ, 1 ಸಿಕ್ಸರ್) ಬಾರಿಸಿ ಆಸ್ಟ್ರೇಲಿಯಾ ಬೌಲರ್‌ಗಳ ಬೆಂಡೆತ್ತಿದರು. ನಂತರ ಆಸ್ಟ್ರೇಲಿಯಾ ಮಹಿಳಾ ಮಣಿಗಳು ಇವರಿಬ್ಬರ ಆಟಕ್ಕೆ ಬ್ರೇಕ್ ಹಾಕಿದರು.
Advertisement
ನಂತರ ಕ್ರೀಸ್‌ಗಿಳಿದ ರಿಚಾ ಘೋಷ್ 14 ರನ್, ಸ್ನೇಹ ರಾಣಾ 11 ರನ್ ಗಳಿಸಿದರೆ ರಾಧಾ ಯಾದವ್ ಶೂನ್ಯಕ್ಕೆ ನಿರ್ಗಮಿಸಿದರು. ದೀಪ್ತಿ ಶರ್ಮಾ 20 ರನ್ ಹಾಗೂ ಶಿಖಾ ಪಾಂಡೆ 1 ರನ್‌ಗಳಿಸಿ ಅಜೇಯರಾಗುಳಿದರು. ಅಂತಿಮವಾಗಿ ಭಾರತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 167 ರನ್‌ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಇದನ್ನೂ ಓದಿ: ರೋಚಕ ಜಯದೊಂದಿಗೆ ಸೆಮಿಫೈನಲ್‌ಗೆ ಭರ್ಜರಿ ಎಂಟ್ರಿ ಕೊಟ್ಟ ಭಾರತ
ಇದಕ್ಕೂ ಮುನ್ನ ಬ್ಯಾಟಿಂಗ್‌ಮಾಡಿದ ಆಸ್ಟ್ರೇಲಿಯಾ ಮಹಿಳಾ ತಂಡ ಉತ್ತಮ ಶುಭಾರಂಭ ಪಡೆದುಕೊಂಡಿತು. ಇನಿಂಗ್ಸ್ ಆರಂಭಿಸಿದ ಅಲಿಸ್ಸಾ ಹೀಲಿ ಮತ್ತು ಬೆತ್ ಮೂನಿ ಮೊದಲ ವಿಕೆಟ್‌ಗೆ 52 ರನ್‌ಗಳ ಜೊತೆಯಾಟವಾಡಿದರು. ಹೀಲಿ 25 ರನ್‌ಗಳಿಸಿದ್ರೆ, ಬೆತ್ ಮೂನಿ (Beth Mooney) 37 ಎಸೆತಗಳಲ್ಲಿ 54 ರನ್ ಚಚ್ಚಿ ಪೆವಿಲಿಯನ್‌ಗೆ ಮರಳಿದರು. ನಂತರ ಟೀಂ ಇಂಡಿಯಾ ಬೌಲರ್‌ಗಳು ಬಿಗಿ ಹಿಡಿತದಲ್ಲಿ ಆಸ್ಟ್ರೇಲಿಯಾ ತಂಡವನ್ನು ಕಟ್ಟಿಹಾಕಲು ಪ್ರಯತ್ನಿಸಿದ್ದರು.
ನಂತರ 14 ಓವರ್‌ಗಳಲ್ಲಿ 2 ವಿಕೆಟ್‌ಗೆ 99 ರನ್‌ಗಳಿಸಿದ್ದ ಆಸ್ಟ್ರೇಲಿಯಾಗೆ ಲ್ಯಾನಿಂಗ್ ಹಾಗೂ ಆಶ್ಲೇ ಗಾರ್ಡ್ನರ್ (Ashleigh Gardner) ನೆರವಾದರು. ಈ ಜೋಡಿ ಮುರಿಯದ 3ನೇ ವಿಕೆಟ್‌ಗೆ 36 ಎಸೆತಗಳಲ್ಲಿ 53 ರನ್ ಕಲೆ ಹಾಕಿತು. ಆರಂಭದಿಂದಲೇ ಸ್ಫೋಟಕ ಬ್ಯಾಟಿಂಗ್‌ಗೆ ಮುಂದಾದ ಆಶ್ಲೆ 18 ಎಸೆತಗಳಲ್ಲಿ 31 ರನ್ ಸಿಡಿಸಿದರು. ಕೊನೆವರೆಗೂ ಜವಾಬ್ದಾರಿಯುತ ಬ್ಯಾಟಿಂಗ್ ಮಾಡಿದ ಮೆಗ್ ಲ್ಯಾನಿಂಗ್ 34 ಎಸೆತಗಳಲ್ಲಿ ಅಜೇಯ 49 ರನ್ ಕಲೆಹಾಕಿದರು. ಅಂತಿಮವಾಗಿ ಆಸ್ಟ್ರೇಲಿಯಾ 4 ವಿಕೆಟ್ ಕಳೆದುಕೊಂಡು 172 ರನ್ ಪೇರಿಸಿತು.
ಭಾರತ ಪರ ಶಿಖಾ ಪಾಂಡೆ ಎರಡು ಹಾಗೂ ರಾಧಾ ಯಾದವ್, ದೀಪ್ತಿ ಶರ್ಮಾ ತಲಾ ಒಂದೊಂದು ವಿಕೆಟ್ ಪಡೆದರು.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k